ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ

ಬೆಂಗಳೂರು: ಜಾತ್ಯತೀತ ಜನತಾ ದಳ(ಜೆಡಿಎಸ್)ದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಮಹತ್ವದ ಬೆಳವಣಿಗೆಯೊಂದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿದ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರೂ ಆಗಿರುವ ಜಿ.ಟಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರ 78ನೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿ, ಶುಭ ಕೋರಿದರು.
ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿರಿಯ ಮುಖಂಡ ಜಿ.ಟಿ. ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Next Story





