Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ...

ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 Nov 2023 2:40 PM IST
share
ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನ 15: ಜೆಡಿಎಸ್ ಪಕ್ಷದಿಂದ "ಎಸ್"(ಸೆಕ್ಯುಲರ್) ತೆಗೆದು ಹಾಕಬೇಕಾಗಿದೆ. ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷ ಅಲ್ಲ. ಕುಟುಂಬದ ಪಕ್ಷ ಅಷ್ಟೆ. ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ನ ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಸಿಎಂ ಮಾತನಾಡುತ್ತಿದ್ದರು.

ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ "ಎಸ್" ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ "ಬಿ" ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ವಿವರಿಸಿದರು.

ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ನಿಮಗೆ ನಾಚಿಕೆ ಆಗುತ್ತೋ ಇಲ್ವೋ ಪ್ರಧಾನಿ ಮೋದಿಯವರೇ?‌

ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ "ಮೋದಿ ಗ್ಯಾರಂಟಿ" ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ , ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.

ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದು ಎಲ್ಲರನ್ನೂ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X