Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಡಿಎಸ್ ಶಾಸಕರಿಗೆ ಸಿಎಂ, ಡಿಸಿಎಂ...

ಜೆಡಿಎಸ್ ಶಾಸಕರಿಗೆ ಸಿಎಂ, ಡಿಸಿಎಂ ಅವರಿಂದ ಆಮಿಷ: ಕುಮಾರಸ್ವಾಮಿ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Jan 2024 8:14 PM IST
share
ಜೆಡಿಎಸ್ ಶಾಸಕರಿಗೆ ಸಿಎಂ, ಡಿಸಿಎಂ ಅವರಿಂದ ಆಮಿಷ: ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಉದ್ದೇಶವಾಗಿದೆ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ದೇವೇಗೌಡರ ಬಗ್ಗೆ ಸಿಎಂ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಆ ಇಬ್ಬರು ನಾಯಕರ ಅಜೆಂಡಾ ಇದೇ ಆಗಿದೆ ಎಂದರು.

ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ. ಏನ್ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡ್ತೀವಿ, ಪಕ್ಷಕ್ಕೆ ಬನ್ನಿ ಅಂತಾರೆ. ಯಾವ ಕಾರಣಕ್ಕೆ ಇದನ್ನು ಮಾಡುತ್ತಿದ್ದೀರಿ. ವಿರೋಧ ಪಕ್ಷ ಉಳಿಸೋಕೆ ಮಾಡುತ್ತಿರೋದಾ? ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ದೇವೇಗೌಡರು ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡ್ತಾರೆ ಅಂತ ಹೇಳಿದ್ದಾರೆ ಅಷ್ಟೆ. ಡಿಕೆಶಿ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ‌. ಗಾಂಧಿಜೀ‌ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ . ಇವರು ಮಾಡುತ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಹಂಚಿಕೆ ಚರ್ಚೆ ಆಗಿಲ್ಲ:

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮುಂದೆ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಉದ್ದೇಶ ಮಾತ್ರ ಇದೆ. ಅದರ ಬಗ್ಗೆ ಚರ್ಚೆ ಆಗಿದೆ. ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X