Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಕಚೇರಿ ಆರೆಸ್ಸೆಸ್ ಪ್ರಚಾರಕರಿಂದ...

ಸಿಎಂ ಕಚೇರಿ ಆರೆಸ್ಸೆಸ್ ಪ್ರಚಾರಕರಿಂದ ನಿರ್ವಹಿಸಲ್ಪಡುತ್ತಿದೆ ಎಂದು ಆರೋಪಿಸಿದ ಪತ್ರಕರ್ತ ನವೀನ್ ಸೂರಿಂಜೆ

ವಾರ್ತಾಭಾರತಿವಾರ್ತಾಭಾರತಿ7 March 2026 2:59 PM IST
share
ಸಿಎಂ ಕಚೇರಿ ಆರೆಸ್ಸೆಸ್ ಪ್ರಚಾರಕರಿಂದ ನಿರ್ವಹಿಸಲ್ಪಡುತ್ತಿದೆ ಎಂದು ಆರೋಪಿಸಿದ ಪತ್ರಕರ್ತ ನವೀನ್ ಸೂರಿಂಜೆ
ಸಿಎಂ ಕಚೇರಿಯ ಕಾರ್ಯವೈಖರಿ ಪರಿಶೀಲಿಸಲಿ ಎಂದು ಆಗ್ರಹ

ಬೆಂಗಳೂರು : ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಕಚೇರಿಯ ಕಾರ್ಯವೈಖರಿ ಕುರಿತು ಪತ್ರಕರ್ತ ನವೀನ್ ಸೂರಿಂಜೆ ಪ್ರಶ್ನೆಗಳನ್ನು ಎತ್ತಿದ್ದು, ಸಿಎಂ ಕಚೇರಿ ಆರೆಸ್ಸೆಸ್ ಪ್ರಚಾರಕರ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶನಿವಾರ ಪೋಸ್ಟ್ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಮತ್ತು ಹಿಂದುತ್ವವಾದಿಗಳ ಸಂಪರ್ಕದ ಬಗ್ಗೆ ಮತ್ತೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕಚೇರಿ ಆರೆಸ್ಸೆಸ್ ಪ್ರಚಾರಕರಿಂದ ನಿರ್ವಹಿಸಲ್ಪಡುತ್ತಿದೆ. ಮುಖ್ಯಮಂತ್ರಿಗಳು ಅರಿವಿಗೆ ಬಾರದಂತೆ ಆರೆಸ್ಸೆಸ್‌ ವಿಷವರ್ತುಲದಲ್ಲಿ ಸಿಲುಕಿದ್ದಾರೆ. ಆರೆಸ್ಸೆಸ್ ಮುಕ್ತ ಸಮಾಜದ ಬಗ್ಗೆ ರಾಹುಲ್ ಗಾಂಧಿ-ಖರ್ಗೆಯವರು ಮಾತನಾಡುತ್ತಿದ್ದರೆ, ಸಿಎಂ ಕಚೇರಿಯು ನಿಯಮಿತವಾಗಿ 'ಜೀ'ಗಳ ಜೊತೆ ಸಂಪರ್ಕದಲ್ಲಿದೆ. ಸಿಎಂ ಏನಾದರೂ ತನ್ನ ಕಚೇರಿ ಬಗ್ಗೆಯೇ ತನಿಖೆ ನಡೆಸುವುದಾದರೆ ಸೂಕ್ತ ದಾಖಲೆ/ಮಾಹಿತಿ ಕೊಡಬಹುದು ಎಂದು ತಿಳಿಸಿದ್ದಾರೆ.

ನವೀನ್ ಸೂರಿಂಜೆಯವರ ಪೋಸ್ಟ್ ಸಿಎಂ ಕಚೇರಿಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ತಳ ಸಮುದಾಯದ ಅಹಿಂದ ಹಿನ್ನೆಲೆಯಿಂದ ಬಂದಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ನಿಲುವಿಗೆ, ಕಾಂಗ್ರೆಸ್ ಸಿದ್ಧಾಂತಕ್ಕೆ ಹೊಂದಿಕೆಯಾಗದ ತದ್ವಿರುದ್ಧ ಸಿದ್ಧಾಂತದ ಅಧಿಕಾರಿಗಳ ಮಧ್ಯೆ ಸಿಲುಕಿದ್ದಾರೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ತಿಳಿಯದೆಯೇ ಅವರು ಆರೆಸ್ಸೆಸ್ ನ ಪ್ರಭಾವ ವಲಯದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಆಂತರಿಕ ವ್ಯವಸ್ಥೆ, ಸಲಹೆಗಾರರು ಹಾಗೂ ನಿರ್ಧಾರ ಪ್ರಕ್ರಿಯೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕೆಂದು ನವೀನ್ ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಲವು ಬಾರಿ ಆರೆಸ್ಸೆಸ್ ಚಿಂತನೆಗೆ ವಿರೋಧ ವ್ಯಕ್ತಪಡಿಸಿ, ದೇಶದಲ್ಲಿ ಧರ್ಮನಿರಪೇಕ್ಷ ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಕರೆ ನೀಡುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರೆಸ್ಸೆಸ್ ಪ್ರಭಾವದಿಂದ ಮುಕ್ತವಾದ ಸಮಾಜದ ಅಗತ್ಯವಿದೆ ಎಂದು ಮತ್ತೆ ಮತ್ತೆ ಹೇಳಿರುವುದು ರಾಜಕೀಯವಾಗಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಕಚೇರಿಯೊಳಗೆ ಆರೆಸ್ಸೆಸ್ ಗೆ ಸಾಮೀಪ್ಯದ ಸಂಪರ್ಕ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿರುವುದು ಗಮನಸೆಳೆದಿದೆ.

ನವೀನ್ ಸೂರಿಂಜೆ ಹೇಳುವಂತೆ, ಮುಖ್ಯಮಂತ್ರಿಗಳ ಕಚೇರಿ ಕೆಲ ‘ಜೀ’ಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ ಎಂಬುದು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ಮತ್ತು ಸಂಘಟನಾ ವಲಯದಲ್ಲಿ ‘ಜೀ’ ಎಂಬ ಪದವನ್ನು ಸಾಮಾನ್ಯವಾಗಿ ಆರೆಸ್ಸೆಸ್ ಅಥವಾ ಅದರೊಂದಿಗೆ ಗಾಢ ಸಂಬಂಧ ಹೊಂದಿರುವ ಹಿರಿಯ ವ್ಯಕ್ತಿಗಳನ್ನು ಉಲ್ಲೇಖಿಸಲು ಬಳಸಲಾಗುತ್ತದೆ. ಈ ಹಿನ್ನೆಲೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳು ಅಥವಾ ಸಲಹೆಗಾರರು ಆರೆಸ್ಸೆಸ್ ವಲಯದೊಂದಿಗೆ ಸಂಪರ್ಕದಲ್ಲಿರಬಹುದೇ ಎಂದು ಜನರು ಈಗ ಪ್ರಶ್ನಿಸುತ್ತಿದ್ದಾರೆ.

ಮುಖ್ಯಮಂತ್ರಿಗಳಿಗೆ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ಇರದೇ ಇರಬಹುದು ಎನ್ನಲಾಗಿದೆ. ಕೆಲವರು ಮುಖ್ಯಮಂತ್ರಿಗಳಿಗೆ ತಿಳಿಯದೆಯೇ ನಿರ್ಧಾರ ಪ್ರಕ್ರಿಯೆಗಳನ್ನು ಪ್ರಭಾವಿಸುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕಾರಣದಿಂದ ಮುಖ್ಯಮಂತ್ರಿಗಳು ತಮ್ಮ ಕಚೇರಿಯ ಕಾರ್ಯವೈಖರಿಯನ್ನು ಸ್ವತಃ ಪರಿಶೀಲನೆ ನಡೆಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಸಿಎಂ ಕಚೇರಿಯ ಕಾರ್ಯಪದ್ಧತಿ ಕುರಿತು ಮುಖ್ಯಮಂತ್ರಿ ತನಿಖೆ ನಡೆಸಲು ಮುಂದಾದರೆ, ತಾವು ಹೊಂದಿರುವ ದಾಖಲೆಗಳು ಮತ್ತು ಮಾಹಿತಿಯನ್ನು ನೀಡಲು ಸಿದ್ಧರಾಗಿರುವುದಾಗಿ ನವೀನ್ ಸೂರಿಂಜೆ ತಿಳಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ಕಚೇರಿಯ ಒಳಗಿನ ಸಂಪರ್ಕಗಳು, ನಿರ್ಧಾರಗಳ ಹಿನ್ನೆಲೆ ಹಾಗೂ ಹೊರಗಿನ ಸಂಘಟನೆಗಳೊಂದಿಗೆ ಇರುವ ಸಂಬಂಧಗಳ ಬಗ್ಗೆ ಸ್ಪಷ್ಟತೆ ಬರಬೇಕೆಂಬುದು ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯರನ್ನು ಸಾಮಾನ್ಯವಾಗಿ ಮಾನವತಾವಾದಿ ನಿಲುವಿನ , ಕೋಮುವಾದಿ ವಿರೋಧಿ ರಾಜಕೀಯ ನಾಯಕ ಎಂದು ಗುರುತಿಸಲಾಗುತ್ತದೆ. ತಮ್ಮ ರಾಜಕೀಯ ಜೀವನದಲ್ಲಿ ಅವರು ನಿರಂತರ ಹಿಂದುತ್ವ ರಾಜಕೀಯವನ್ನು ಟೀಕಿಸಿ, ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿದು, ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವ ಅಗತ್ಯವಿದೆ ಎಂದು ಪ್ರತಿಪಾದಿಸುತ್ತಲೇ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕಚೇರಿಯ ಕಾರ್ಯವೈಖರಿ ಕುರಿತು ಇಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ರಾಜಕೀಯ ವಿಶ್ಲೇಷಕರ ಪ್ರಕಾರ ಆಡಳಿತ ವ್ಯವಸ್ಥೆಯಲ್ಲಿ ವಿವಿಧ ಹಿನ್ನೆಲೆಯ ಅಧಿಕಾರಿಗಳು ಮತ್ತು ಸಲಹೆಗಾರರು ಕೆಲಸ ಮಾಡುವುದು ಸಾಮಾನ್ಯ ಸಂಗತಿ. ಆದರೆ ಅವರು ಯಾವ ರೀತಿಯ ಪ್ರಭಾವ ಬೀರುತ್ತಾರೆ ಎಂಬುದು ಆಡಳಿತದ ಪಾರದರ್ಶಕತೆಯ ದೃಷ್ಟಿಯಿಂದ ಮಹತ್ವದ್ದಾಗುತ್ತದೆ.

ಇದುವರೆಗೆ ಮುಖ್ಯಮಂತ್ರಿ ಕಚೇರಿ ಅಥವಾ ರಾಜ್ಯ ಸರಕಾರದಿಂದ ನವೀನ್ ಸೂರಿಂಜೆ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸರಕಾರ ಅಥವಾ ಕಾಂಗ್ರೆಸ್ ಪಕ್ಷದ ನಾಯಕರು ಈ ಕುರಿತು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

Tags

Naveen SurinjeRSS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X