Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. "ಸುರಪುರದಲ್ಲಿ ಮೊದಲ ರಾತ್ರಿ ನಾಯಕನ...

"ಸುರಪುರದಲ್ಲಿ ಮೊದಲ ರಾತ್ರಿ ನಾಯಕನ ಜೊತೆ...": ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ನ್ಯಾಯಮೂರ್ತಿ ವಿ.ಶ್ರೀಶಾನಂದ

ವ್ಯಾಪಕ ಆಕ್ರೋಶ, ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Jan 2025 5:58 PM IST
share
ಸುರಪುರದಲ್ಲಿ ಮೊದಲ ರಾತ್ರಿ ನಾಯಕನ ಜೊತೆ...: ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ನ್ಯಾಯಮೂರ್ತಿ ವಿ.ಶ್ರೀಶಾನಂದ

ಬೆಂಗಳೂರು: ನ್ಯಾಯಾಲಯದ ಕಲಾಪದ ವೇಳೆ ನ್ಯಾಯಮೂರ್ತಿ ವಿ.ಶ್ರೀಶಾನಂದ ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನ್ಯಾಯಮೂರ್ತಿಗಳ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇತ್ತೀಚಿಗಷ್ಟೇ ನ್ಯಾಯಾಲಯದ ಕಲಾಪದ ವೇಳೆ ಆಕ್ಷೇಪಾರ್ಹವಾದ ಹೇಳಿಕೆಗಳನ್ನು ನೀಡಿ ಸಾರ್ವಜನಿಕ ಆಕ್ರೋಶ ಎದುರಿಸಿದ್ದ ಹೈಕೋರ್ಟ್‌ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ಮತ್ತೆ ಅಂಥದ್ದೇ ವಿಚಾರಕ್ಕೆ ಚರ್ಚೆಯಾಗುತ್ತಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಕಲಾಪದ ವೇಳೆ ಬೆಂಗಳೂರಿನ ಗೋರಿಪಾಳ್ಯದ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಏಕೆಂದರೆ ಅದು ಪಾಕಿಸ್ತಾನದಲ್ಲಿದೆ ಎನ್ನುವ ಅವರ ಹೇಳಿಕೆ ಹಾಗೂ ಮಹಿಳಾ ವಕೀಲೆಯೊಬ್ಬರ ಜೊತೆ ಕೀಳು ಅಭಿರುಚಿಯಿಂದ ಮಾತನಾಡಿದ್ದ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಅಗಿತ್ತು. ಇವುಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ಸೂಚಿಸಿತ್ತು. ಬಳಿಕ ನ್ಯಾಯಮೂರ್ತಿ ಶ್ರೀಶಾನಂದ ಅವರು ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದರು.

ಇದೀಗ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಕಲಾಪದ ಹಳೆಯ ವಿಡಿಯೋವೊಂದು ವೈರಲ್‌ ಆಗಿದ್ದು, ಮದುವೆಗೆ ಸಂಬಂಧಿಸಿದಂತೆ ಅವರು ಆಡಿರುವ ಮಾತುಗಳ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಈ ಸಂಬಂಧ ಕೆಲವೆಡೆ ಪ್ರತಿಭಟನೆಗೂ ಕಾರಣವಾಗಿದೆ.

ನ್ಯಾಯಾಲಯದ ಕಲಾಪದಲ್ಲಿ ಪ್ರಕರಣವೊಂದರ ವಿಚಾರಣೆಯ ವೇಳೆ ನ್ಯಾ.ಶ್ರೀಶಾನಂದ ಅವರು, "ಯಾರನ್ನು ಬೇಕಾದರೂ ಮದುವೆ ಮಾಡಿಕೊಳ್ಳಬಹುದು. ಆದರೆ, ಮೊದಲ ರಾತ್ರಿ ಮಾತ್ರ ನಾಯಕನ ಜೊತೆ ಎಂಬ ಆಚರಣೆ ಇಂದಿಗೂ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿದೆ" ಎಂದು ಹೇಳಿರುವ ವಿಡಿಯೋ ವೈರಲ್‌ ಆಗಿದೆ.

ನ್ಯಾಯಮೂರ್ತಿ ವಿ.ಶ್ರೀಶಾನಂದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಯಾದಗಿರಿಯ ಸುರಪುರ ತಾಲ್ಲೂಕಿನ ಜ.13ರಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಸಾಮೂಹಿಕ ಸಂಘಟನೆಗಳ ಒಕ್ಕೂಟವು ಬಂದ್‌ ಆಚರಿಸಿ ಶ್ರೀಶಾನಂದ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ, ನ್ಯಾ. ಶ್ರೀಶಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

ವಿಡಿಯೊದಲ್ಲಿ ಏನಿದೆ?:

ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ "ಹಳೆಯ ಶಿಲಾಯುಗದ ಕಾಲದಲ್ಲಿ ಹೆಣ್ಣಿಗೋಸ್ಕರ ಕಾದಾಟಗಳು ನಡೆದಿದ್ದು, ಹಲವು ಗಂಡಸರ ಹೆಣಗಳು ಬೀಳುತ್ತಿದ್ದವು. ಯಾರಿಗೆ ಶಕ್ತಿ ಇತ್ತೋ ಅವನು ನಾಯಕನಾಗುತ್ತಿದ್ದ. ಆ ನಾಯಕನಿಗೆ ಆ ಹೆಣ್ಣನ್ನು ಒಪ್ಪಿಸಿ, ಉಳಿದವರು ಹೆಣ್ಣನ್ನು ಉಪಯೋಗಿಸಿಕೊಳ್ಳಬೇಕಿತ್ತು. ನಿಮಗೆ ಗೊತ್ತಿರಲಿ, ಈ ದುಷ್ಟ ಆಚರಣೆ ಈಗಲೂ ಸುರಪುರದಲ್ಲಿದೆ. ಯಾರನ್ನು ಬೇಕಾದರೂ ನೀವು ಮದುವೆ ಮಾಡಿಕೊಳ್ಳಬಹುದು. ಆದರೆ, ಮೊದಲ ರಾತ್ರಿ ಮಾತ್ರ ನಾಯಕ ಜೊತೆ ಎಂದಿದೆ. ಆಮೇಲೆ ಅಲ್ಲೇ ಇರಬಹುದು ಅಥವಾ ಊರು ಬಿಟ್ಟು ಬೇರೆ ಕಡೆ ಹೋಗಿ ಮದುವೆ ಮಾಡಿಕೊಳ್ಳಬಹುದು. ಅದೆಲ್ಲವೂ ಸಾಧ್ಯವಾ? ಎಂದು ನೀವು ಕೇಳಿದರೆ, ಆ ತರಹ ಈಗಲೂ ನಡೆಯುತ್ತಿದೆ. ಅದರ ಮೇಲೆ ಬೇಕಾದಷ್ಟು ಚಲನಚಿತ್ರಗಳು ಬಂದಿವೆ. ಬೆತ್ತಲೆ ಸೇವೆ ಎಂದು ಸಿನಿಮಾ ಬಂದಿದೆ. ಇನ್ನೊಂದು, ಮತ್ತೊಂದು ಬಂತು ಎಲ್ಲವೂ ಆಯ್ತು. ಸರಿಹೋಯ್ತ ಎಂದು ನೋಡಿದರೆ ಇನ್ನೂ ಸರಿ ಹೋಗಲಿಲ್ಲ. ದೇವದಾಸಿಯರು ಎಂದರೆ ಏನು? ಎಲ್ಲ ಬೇಕಾದಷ್ಟು ಮಾಡಿಕೊಂಡರು. ಅದು ಇರಲಿ. ನಾವು ಆ ವಿಚಾರದ ಮೇಲಿಲ್ಲ" ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ನಂತರ ಆಕ್ರೋಶ, ಪ್ರತಿಭಟನೆಗಳಿಗೆ ಕಾರಣವಾಗಿದೆ.

ಕೃಪೆ : kannada.barandbench.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X