Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಳಸಾ-ಬಂಡೂರಿ ಯೋಜನೆ : ಪ್ರಧಾನಿಗೆ ಸಿಎಂ...

ಕಳಸಾ-ಬಂಡೂರಿ ಯೋಜನೆ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಾರ್ತಾಭಾರತಿವಾರ್ತಾಭಾರತಿ19 Sept 2024 12:37 PM IST
share
ಕಳಸಾ-ಬಂಡೂರಿ ಯೋಜನೆ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉತ್ತರ ಕರ್ನಾಟಕ ಭಾಗದ ಕಳಸಾ-ಬಂಡೂರಿ ನಾಲಾ ಯೋಜನೆಗೆ ‘ರಾಷ್ಟ್ರೀಯ ವನ್ಯಜೀವಿ ಮಂಡಳಿ’ಯ ಅನುಮತಿ ಕೊಡಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ ಪ್ರಧಾನಿ ಮೋದಿಯವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಗುರುವಾರ ಈ ಸಂಬಂಧ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತರಾಜ್ಯ ಜಲ ವಿವಾದಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರಕಾರದ ಪಾತ್ರ ಮಹತ್ವದ್ದು. ರಾಷ್ಟ್ರೀಯ ಮಹತ್ವದ ಕುಡಿಯುವ ನೀರಿನ, ವಿದ್ಯುತ್ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯ. ಆದುದರಿಂದ ಯೋಜನೆಗಳಿಗೆ ತ್ವರಿತ ಅನುಮೋದನೆ ಅಗತ್ಯ. ಜತೆಗೆ ಅಂತರಾಜ್ಯಗಳ ಸಹಕಾರವು ಬೇಕು ಎಂದು ತಿಳಿಸಿದ್ದಾರೆ.

ಆದರೆ, ಕರ್ನಾಟಕದ ಕುಡಿಯುವ ನೀರಿನ ಯೋಜನೆಗೆ ಗೋವಾ ರಾಜ್ಯ, ಸುಪ್ರೀಂಕೋರ್ಟ್‍ನಲ್ಲಿ ತಕರಾರು ಎತ್ತಿದೆ. ನಮ್ಮ ಯೋಜನೆ ಹಳೆಯ ಮತ್ತು ನ್ಯಾಯ ಸಮ್ಮತ ಯೋಜನೆಯಾಗಿದ್ದು, ವನ್ಯಜೀವಿಗಳಿಗೆ ಹಾನಿ ಮಾಡುವುದಿಲ್ಲ. ಒಂದು ವೇಳೆ ಗೋವಾ ರಾಜ್ಯ ಇದೇ ಧೋರಣೆ ಮುಂದುವರಿಸಿದರೆ ಗೋವಾ-ತಾಮ್ನಾರ್ ವಿದ್ಯುತ್ ಪ್ರಸರಣ ಮಾರ್ಗದ ಯೋಜನೆಗೆ ಕರ್ನಾಟಕ ನೀಡಿದ್ದ ಅನುಮತಿಯನ್ನು ಪುನರ್ ಪರಿಶೀಲಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಮಹದಾಯಿ ನ್ಯಾಯಾಧೀಕರಣ ಕರ್ನಾಟಕಕ್ಕೆ ಒಟ್ಟು 13.42 ಟಿಎಂಸಿ ನೀರನ್ನು ಹಂಚಿಕೆಯಾಗಿದೆ. ಆಪೈಕಿ 3.9 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ (ಕಳಸಾ ನಾಲಾದಿಂದ 1.72 ಟಿಎಂಸಿ ಮತ್ತು ಬಂಡೂರ ನಾಲಾದಿಂದ 2.18 ಟಿಎಂಸಿ) ಯೋಜನೆ ಮಾರ್ಪಡಿಸಿ ಕ್ರಿಯಾ ಯೋಜನೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆ ಸಾಧ್ಯತೆಗಳಿಗೆ ಸಂಬಂಧಿಸಿದಂತೆ ಎಲ್ಲ ವಿವರಗಳನ್ನು ಒದಗಿಸಲಾಗಿದೆ. ಆದರೂ, ಇಲ್ಲಿಯವರೆಗೆ ತಾವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಅಗತ್ಯ ಅನುಮತಿಯನ್ನು ನೀಡಿಲ್ಲ. ಈ ಮಧ್ಯೆ ಗೋವಾ ರಾಜ್ಯವು ಕಳಸಾ-ಬಂಡೂರಿಯಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಆದೇಶವನ್ನು ಹೊರಡಿಸಿದೆ ಎಂದು ಸಿದ್ದರಾಮಯ್ಯ ಗಮನ ಸೆಳೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X