Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಕಲ್ಯಾಣ ಕರ್ನಾಟಕ ಉತ್ಸವʼವನ್ನು...

ʼಕಲ್ಯಾಣ ಕರ್ನಾಟಕ ಉತ್ಸವʼವನ್ನು ಜನೋತ್ಸವವನ್ನಾಗಿ ಆಚರಿಸಲು ಅಧಿಕಾರಿಗಳಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Aug 2024 9:39 PM IST
share
ʼಕಲ್ಯಾಣ ಕರ್ನಾಟಕ ಉತ್ಸವʼವನ್ನು ಜನೋತ್ಸವವನ್ನಾಗಿ ಆಚರಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಉತ್ಸವವನ್ನು ಸೆಪ್ಟೆಂಬರ್ 17ರಂದು ಜನೋತ್ಸವವನ್ನಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ವಿಕಾಸಸೌಧದಲ್ಲಿ ಉಭಯ ಸಚಿವರು, ಜನಪ್ರತಿನಿಧಿಗಳೊಂದಿಗೆ ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾದ 371 ‘ಜೆ’ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಸಂದ ಸಂದರ್ಭದಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವುದರಿಂದ ಈ ಬಾರಿಯ ಉತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆಯೂ ಸಚಿವರು ಹೇಳಿದರು.

ಸೆ.17ರಂದು ಮುಖ್ಯಮಂತ್ರಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ಸಚಿವರು, ಸ್ಥಳೀಯ ಪಾರಂಪರಿಕ ಜಾನಪದ ಕಲೆಗಳೊಂದಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ಒಟ್ಟುಗೂಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್‍ಸಿಂಗ್ ಮಾತನಾಡಿ, 371 ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಒಂದು ದಶಕದ ಅವಧಿಯಲ್ಲಿ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಣುತ್ತಿದ್ದೇವೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಪ್ರಮುಖ ಕಾರಣಕರ್ತರಾಗಿದ್ದು ಅವರನ್ನು ಉತ್ಸವದ ಸಂದರ್ಭದಲ್ಲಿ ಅದ್ದೂರಿಯಾಗಿ ಸನ್ಮಾನ ಮಾಡಬೇಕೆಂದು ಹೇಳಿದರು.

ಸಭೆಯಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕರಾದ ಎಂ.ವೈ.ಪಾಟೀಲ್, ಜಗದೇವ ಗುತ್ತೇದಾರ್, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಕನೀಝ್ ಫಾತಿಮಾ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಜಿ.ಪಂ. ಸಿಇಒ ಭಂವರ್ ಸಿಂಗ್, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X