Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಬುರಗಿ | 'ಕಲ್ಯಾಣ ಕರ್ನಾಟಕ ಉತ್ಸವ':...

ಕಲಬುರಗಿ | 'ಕಲ್ಯಾಣ ಕರ್ನಾಟಕ ಉತ್ಸವ': ಸಿಎಂ ಧ್ವಜಾರೋಹಣ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅಕ್ಷರ ಕ್ರಾಂತಿಗೆ ಕ್ರಮ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Sept 2023 10:27 AM IST
share
ಕಲಬುರಗಿ | ಕಲ್ಯಾಣ ಕರ್ನಾಟಕ ಉತ್ಸವ: ಸಿಎಂ ಧ್ವಜಾರೋಹಣ

ಕಲಬುರಗಿ, ಸೆ.17: 'ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023' ಪ್ರಯುಕ್ತ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಈ ಸಂದಭ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಸ್ವಾಮಿ ರಮಾನಂದ ತೀರ್ಥರು ಹಾಗೂ ಅಸಂಖ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭ ಭಾಯಿ ಪಟೇಲರ ಸಂಕಲ್ಪಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಝಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು.ಇದಕ್ಕಾಗಿ ಹೋರಾಡಿದ ಎಲ್ಲ ಮಹನೀಯರನ್ನು ನಾನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸುತ್ತೇನೆ ಎಂದು ಹೇಳಿದರು.

ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ 4 ಗ್ಯಾರಂಟಿ ಜಾರಿಗೆ ತಂದಿದೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ ಎಂದರು.

ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಸರಮಾಲೆಯಿಂದ ತತ್ತರಿಸಿದ ನಾಡಿನ ಜನತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ Universal Basic Income ಎಂಬ ಹೊಸ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಜನಸಾಮಾನ್ಯರ ಖರೀದಿಯ ಶಕ್ತಿ ಹೆಚ್ಚಾದರೆ ಆರ್ಥಿಕತೆಯು ಉತ್ತಮಗೊಳ್ಳುತ್ತದೆ. ಇದನ್ನು ಈಗಾಗಲೇ ಜಾರಿಗೊಂಡಿರುವ ನಮ್ಮ ಗ್ಯಾರಂಟಿ ಯೋಜನೆಗಳು ಸಾಬೀತುಪಡಿಸುತ್ತಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 371(ಜೆ) ತಿದ್ದುಪಡಿಯನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2023-24ನೇ ಸಾಲಿನ ಆಯವ್ಯಯದಲ್ಲಿ ತಿಳಿಸಿದಂತೆ 5,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಿಎಂ ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಜಿಲ್ಲೆಯವರೇ ಆದ ಡಾ.ಅಜಯ್ ಸಿಂಗ್ ನೇತೃತ್ವದಲ್ಲಿ ಪೂರ್ಣ ಪ್ರಮಾಣದಲ್ಲಿ ಮಂಡಳಿ ರಚಿಸಲಾಗಿದೆ. ಈಗಾಗಲೇ ಡಾ. ಅಜಯ್ ಸಿಂಗ್ ಪ್ರಥಮ ಮಂಡಳಿ ಸಭೆ ನಡೆಸಿ ಪ್ರಸಕ್ತ ಸಾಲಿಗೆ 3,000 ಕೋಟಿ ರೂ. ಮೊತ್ತಕ್ಕೆ ಕ್ರಿಯಾ ಯೋಜನೆ ರೂಪಿಸುತ್ತಿದ್ದಾರೆ. ಜೊತೆಗೆ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಶೇ.25ರಷ್ಟು ಅನುದಾನ ಶಿಕ್ಷಣಕ್ಕೆ ಮೀಸಲಿಟ್ಟಿದ್ದು ಈ ಭಾಗದಲ್ಲಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಶಾಸಕರಾದ ಕನೀಜ್ ಫಾತಿಮಾ, ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ತಿಪ್ಪಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವಿಶಾಕ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್ ಮತ್ತಿತರಿದ್ದರು.

ಧ್ವಜಾರೋಹಣಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X