Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಬೇರೆ ಭಾಗಗಳಲ್ಲೂ ಕಂಬಳ ಆಯೋಜನೆಗೆ...

ರಾಜ್ಯದ ಬೇರೆ ಭಾಗಗಳಲ್ಲೂ ಕಂಬಳ ಆಯೋಜನೆಗೆ ಸರಕಾರ ತೀರ್ಮಾನಿಸಬಹುದು : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Oct 2025 11:22 PM IST
share
ರಾಜ್ಯದ ಬೇರೆ ಭಾಗಗಳಲ್ಲೂ ಕಂಬಳ ಆಯೋಜನೆಗೆ ಸರಕಾರ ತೀರ್ಮಾನಿಸಬಹುದು : ಹೈಕೋರ್ಟ್

ಬೆಂಗಳೂರು : ರಾಜ್ಯದ ನಿರ್ದಿಷ್ಟ ಭೌಗೋಳಿಕ ಪ್ರದೇಶ ಅಥವಾ ಕೆಲ ಜಿಲ್ಲೆಗಳ ಆಚರಣೆ, ಸಂಪ್ರದಾಯಗಳು ಇಡೀ ರಾಜ್ಯದ ಸಂಪ್ರದಾಯವಾಗಿರುತ್ತದೆ. ನಿರ್ದಿಷ್ಟ ಸಂಪ್ರದಾಯಗಳನ್ನು ಆಚರಿಸಲಾಗುವ ಕರ್ನಾಟಕದ ಭಾಗಗಳನ್ನು ರಾಜ್ಯಕ್ಕೆ ಸೇರಿದ್ದಲ್ಲ ಎನ್ನಲಾಗುತ್ತದೆಯೇ? ಹಾಗೆ ಹೇಳಿದ್ದಲ್ಲಿ ಅದು ವಿಭಜಕ ಭಾವನೆ ಆಗಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬೇರೆ ಭಾಗಗಳಲ್ಲೂ ಕಂಬಳ ಆಯೋಜನೆ ಸಂಬಂಧ ಕಾನೂನು-ನಿಯಮಗಳ ರೀತಿ ರಾಜ್ಯ ಸರಕಾರ ತೀರ್ಮಾನಿಸಬಹುದು ಎಂದು ಮೌಖಿಕವಾಗಿ ಹೇಳಿದೆ.

ಅಲ್ಲದೆ, ಇದರ ಬಗ್ಗೆ ವಿವರವಾದ ಆದೇಶ ಹೊರಡಿಸಲಾಗುವುದು ಎಂದೂ ನ್ಯಾಯಾಲಯ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶತಮಾನಗಳಿಂದ ನಡೆಸಿಕೊಂಡು ಬರಲಾಗುತ್ತಿರುವ ಪಾರಂಪರಿಕ ಸಂಪ್ರದಾಯವಾಗಿರುವ ಕಂಬಳ ಕ್ರೀಡೆಯನ್ನು ರಾ‍ಜ್ಯದ ಬೇರೆ ಜಿಲ್ಲೆ ಅಥವಾ ಭಾಗಗಳಲ್ಲಿ ಆಯೋಜನೆ ಮಾಡುವುದನ್ನು ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಜತೆಗೆ, ಪಿಲಿಕುಳ ಜೈವಿಕ ಉದ್ಯಾನವನದ (ನಿಸರ್ಗಧಾಮ) ಬಳಿ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ 'ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್' (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದಲ್ಲದೆ, ಪಿಲಿಕುಳ ನಿಸರ್ಗಧಾಮವು ಜೈವಿಕ ಉದ್ಯಾನವನ ಎಂದು ಮಾಸ್ಟರ್ ಪ್ಲಾನ್ ಯೋಜನೆ ಇದ್ದರೆ ಅಲ್ಲಿ ಕಂಬಳ ಆಯೋಜನೆಗೆ ಅವಕಾಶ ಇರುವುದಿಲ್ಲ. ಜೈವಿಕ ಉದ್ಯಾನವನ್ನು ಹಬ್ಬದ ಮೈದಾನವಾಗಿ ಮಾಡಲಾಗದು. ಜೈವಿಕ ಉದ್ಯಾನವನ ಆಗಿದ್ದಲ್ಲಿ ಅಲ್ಲಿ ಕಂಬಳ ಆಯೋಜಿಸಬಹುದು ಎಂಬ ತಜ್ಞರ ವರದಿ ತಪ್ಪಾಗಲಿದೆ. ಆದ್ದರಿಂದ, ಪಿಲಿಕುಳಕದ ವಾಸ್ತವ ಸ್ಥಾನಮಾನದ ಬಗ್ಗೆ ಸರಕಾರ ವಿವರಣೆ ನೀಡಬೇಕು. ಅದಾದ ಬಳಿಕ ಪಿಲಿಕುಳದಲ್ಲಿ ಕಂಬಳ ಆಯೋಜನೆಯ ವಿಷಯವನ್ನು ಮುಂದಿನ ವಿಚಾರಣೆ ವೇಳೆ ಪರಿಶೀಲಿಸಲಾಗುವುದು ಎಂದು ಹೇಳಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಿತು.

ಅಲ್ಲದೇ ಮೂಲ ವಿಷಯದ ಬಗ್ಗೆ ಯಾವುದೇ ವಾದ ಮಂಡನೆ, ಲಿಖಿತ ಹೇಳಿಕೆಗಳಿಗೆ ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದ್ದರಿಂದ ರಾಜ್ಯದ ಬೇರೆ ಕಡೆ ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ನವೆಂಬರ್ 11ಕ್ಕೆ ಅಂತಿಮ ಆದೇಶ ಹೊರಬೀಳುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X