Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸುವ...

ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸುವ ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿʼ ತಿದ್ದುಪಡಿ ವಿಧೇಯಕ ಮಂಡನೆ

ವಾರ್ತಾಭಾರತಿವಾರ್ತಾಭಾರತಿ13 Feb 2024 8:02 PM IST
share
ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸುವ ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿʼ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ಮಹತ್ವದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದರು. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂತಾದೆಡೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಇದಕ್ಕಾಗಿ ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ಈ ವಿಧೇಯಕ ಜಾರಿಯಿಂದ ಅಸಡ್ಡೆಯಿಂದ ನಾಮಫಲಕದ ಒಂದು ಮೂಲೆಯಲ್ಲಿ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಇನ್ನೂ, ಇತ್ತೀಚಿಗೆ ಕನ್ನಡ ನಾಮಫಲಕಗಳ ಕುರಿತು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಇನ್ನಿತರೆ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಸರಕಾರ ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗುವಂತೆ ಮಾಡಲು ಮುಂದಾಗಿತ್ತು.

ಆದರೆ, ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಅದರಂತೆ ಮಸೂದೆ ರೂಪಿಸಲಾಗಿದೆ.

ವಿಧೇಯಕದ ಮುಖ್ಯ ಅಂಶಗಳು:

► 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ.

► ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ.

► ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ.

► ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ.

► ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ.

► ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X