Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡ ನಾಡು, ನುಡಿಗಾಗಿ ರಂಜಾನ್ ಸಾಬ್‌,...

ಕನ್ನಡ ನಾಡು, ನುಡಿಗಾಗಿ ರಂಜಾನ್ ಸಾಬ್‌, ರಹ್ಮಾನ್ ಖಾನ್ ನೀಡಿರುವ ಕೊಡುಗೆ ಸದಾ ಸ್ಮರಣೀಯ: ಪಾರ್ಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ3 Nov 2023 6:18 PM IST
share
ಕನ್ನಡ ನಾಡು, ನುಡಿಗಾಗಿ ರಂಜಾನ್ ಸಾಬ್‌, ರಹ್ಮಾನ್ ಖಾನ್ ನೀಡಿರುವ ಕೊಡುಗೆ ಸದಾ ಸ್ಮರಣೀಯ: ಪಾರ್ಶ್ವನಾಥ್

ಬೆಂಗಳೂರು: ಕನ್ನಡ ನಾಡು, ನುಡಿಗಾಗಿ ರಂಜಾನ್ ಸಾಬ್ ಹಾಗೂ ರಹಮಾನ್ ಖಾನ್ ನೀಡಿರುವ ಕೊಡುಗೆ ಸದಾ ಸ್ಮರಣೀಯ. ಹೊಸ ಪೀಳಿಗೆಗೆ ಈ ಇಬ್ಬರು ಮಹನೀಯರ ಹಿನ್ನೆಲೆಯನ್ನು ಪರಿಚಯಿಸುವ ಕೆಲಸವನ್ನು ನಿರಂತರವಾಗಿ ಮಾಡಬೇಕಿದೆ ಎಂದು ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ.ಪಾರ್ಶ್ವನಾಥ್ ತಿಳಿಸಿದರು.

ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆ ವತಿಯಿಂದ ಯಶವಂತಪುರದಲ್ಲಿರುವ ರಹಮಾನ್ ಖಾನ್ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಏಕೀಕರಣಕ್ಕಾಗಿ ಹುತಾತ್ಮರಾದ ಏಕೈಕ ಕನ್ನಡಿಗ ರಂಜಾನ್ ಸಾಬ್, ಗೋಕಾಕ್ ಚಳವಳಿಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಿದ ಕನ್ನಡ ಹೋರಾಟಗಾರ ರಹಮಾನ್ ಖಾನ್ ಸ್ಮರಣೆ ಹಾಗೂ ಕನ್ನಡ ಸಂಸ್ಕೃತಿ ಉತ್ಸವವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಹಮದೀಯರ ಕನ್ನಡ ವೇದಿಕೆ ವತಿಯಿಂದ ರಂಜಾನ್ ಸಾಬ್ ಹಾಗೂ ರಹಮಾನ್ ಖಾನ್ ಹೆಸರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಸ್ವಾತಂತ್ರö್ಯ ಹೋರಾಟ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನ, ಪರಿಶ್ರಮವನ್ನು ನಾವು ಸ್ಮರಿಸಿಕೊಳ್ಳಬೇಕು. ಹಾಗೂ ಮುಂದಿನ ಪೀಳಿಗೆಗೂ ಪರಿಚಯಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆಯ ಅಧ್ಯಕ್ಷ ಸಮೀವುಲ್ಲಾ ಖಾನ್ ಮಾತನಾಡಿ, ಕೆಲವು ಬಂಡವಾಳಶಾಹಿ ಹೊರ ರಾಜ್ಯದವರ ತಂಡ ಇಲ್ಲಿರುವ ರಹಮಾನ್ ಖಾನ್ ರಸ್ತೆಯ ಫಲಕವನ್ನು ತೆರವುಗೊಳಿಸಲು ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಎಚ್ಚರಿಕೆ ನೀಡುವ ಕಾರ್ಯಕ್ರಮದ ಜೊತೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಆಯೋಜಿಸಿದ್ದೇವೆ ಎಂದರು.

ರಹಮಾನ್ ಖಾನ್ ರಸ್ತೆಗೆ ಚಿದಾನಂದಮೂರ್ತಿ, ಸಾ.ರಾ.ಗೋವಿಂದು, ವಾಟಾಳ್ ನಾಗರಾಜ್, ಅನಂತನಾಗ್, ರಘುಪತಿ ಅಡಿಗಲ್ಲು ಹಾಕಿದವರು. ಅವರು ಅಡಿಗಲ್ಲು ತೆರವುಗೊಳಿಸಲು ಮುಂದಾದರೆ ನೀನೆ ಅಲ್ಲಾಡಿ ಹೋಗುತ್ತೀಯಾ ಎಂದು ಆ ಬಂಡವಾಳಶಾಹಿಗೆ ಎಚ್ಚರಿಕೆ ನೀಡಿದ್ದೇವೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಡಿವಿಜಿ ಗೆಳೆಯರ ಬಳಗದ ಅಧ್ಯಕ್ಷ ಜಗದೀಶ್ ಮುಳಬಾಗಿಲು, ಹಿರಿಯ ಕನ್ನಡ ಹೋರಾಟಗಾರ ಶೆ, ಬೋ ರಾಧಾಕೃಷ್ಣ, ಯಶವಂತಪುರ ಸ್ಪಂದನ ಸಂಘಟನೆಯ ಲಯನ್ ರಾಜಾ ನಂಜುಂಡಯ್ಯ ಮುನಿ ಕುಮಾರ್, ಪತ್ರಕರ್ತ ಎಡ್ವರ್ಡ್,ಯಶವಂತಪುರ ಜಾಮಿಯಾ ಮಸೀದಿಯ ಉಪಾಧ್ಯಕ್ಷ ಆಲಿ, ವೇದಿಕೆ ಉಪಾಧ್ಯಕ್ಷ ಶಹಜಹಾನ್, ಜಂಟಿ ಕಾರ್ಯದರ್ಶಿ ಸಾಗರ್ ಸಮಿಉಲ್ಲಾ, ಆರ್ ಆರ್ ನಗರ ವಿಧಾನಸಭಾ ಕ್ಷೇತ್ರ ಅಖಿಲ ಕರ್ನಾಟಕ ಮಹಮ್ಮದಿಯರ ವೇದಿಕೆ ಅಧ್ಯಕ್ಷ ದಸ್ತಗಿರ್, ವರ್ತಕರ ವಿಭಾಗದ ಸಂಚಾಲಕರಾದ ಅಜೀಂ ಮೊಹಮ್ಮದ್ ಫಕ್ರುದ್ದೀನ್, ಮತ್ತಿಕೆರೆ ಮಸೀದಿಯ ಆಡಳಿತ ಮಂಡಳಿಯ ಬಗ್ಗೆಅಕ್ರಮ್ ಬಾಬು ಸಲೀಂ, ಶರೀಫ್ ನಗರದ ಮುಖಂಡರಾದ ಆಸಿಫ್ ಸಿದ್ದಿಕ್, ಗೌಸ್ ಖಾನ್ ಬೈತುಲ್ ಮಾಲ್ ಉಪಾಧ್ಯಕ್ಷ ಅಮೀರ್, ಯುವ ಘಟಕದ ಜಹೀರ್, ರಫೀಕ್ ರಾಹಿಲ್, ಶಭಾಸ್ , ವಕೀಲ ಮುಜ್ಜು, ಸ್ಥಳೀಯ ಎಲ್ಲಾ ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X