ಫೆ.4ರ ವರೆಗೆ ವಿಧಾನಸಭೆ ಅಧಿವೇಶನ ವಿಸ್ತರಣೆ: ಸ್ಪೀಕರ್ ಯು.ಟಿ. ಖಾದರ್

ಸ್ಪೀಕರ್ ಯು.ಟಿ. ಖಾದರ್
ಬೆಂಗಳೂರು: ವಿಧಾನಸಭೆಯ ಅಧಿವೇಶನವನ್ನು ಜ.31ರ ಬದಲಾಗಿ ಫೆ.4ರವರೆಗೆ ವಿಸ್ತರಣೆ ಮಾಡಲು ಗುರುವಾರ ನಡೆದ ವಿಧಾನಸಭೆಯ ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.
ಭೋಜನ ವಿರಾಮದ ಬಳಿಕ ವಿಧಾನಸಭೆಯಲ್ಲಿ ಕಾರ್ಯ ಕಲಾಪಗಳ ಸಲಹಾ ಸಮಿತಿಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಮಾಹಿತಿ ನೀಡಿದ ಸ್ಪೀಕರ್, ಜ.30ರವರೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ನಡೆಯಲಿದ್ದು, ಅಂದು ಸಂಜೆ 7 ಗಂಟೆಯವರೆಗೆ ಸದನ ನಡೆಯಲಿದೆ ಎಂದು ಹೇಳಿದರು.
ಫೆ.2ರಂದು ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ, ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಫೆ.3 ಹಾಗೂ 4ರಂದು ಸರಕಾರದಿಂದ ಅಧಿಕೃತವಾಗಿ ಸ್ವೀಕರಿಸಲಾಗುವ ಸೂಚನೆ ಮೇಲೆ ಚರ್ಚೆ ನಡೆಸಿ, ಮುಖ್ಯಮಂತ್ರಿ ಉತ್ತರ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಜ.31ರಂದು ಶನಿವಾರ ವಿಧಾನಸಭೆಯ ಅಧಿವೇಶನ ಇರುವುದಿಲ್ಲ ಎಂದು ಸ್ಪೀಕರ್ ಪ್ರಕಟಿಸಿದರು.
Next Story





