Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ನೀರಿನ ವಿಚಾರ | ಬೆಂಗಳೂರಿನಲ್ಲಿ...

ಕಾವೇರಿ ನೀರಿನ ವಿಚಾರ | ಬೆಂಗಳೂರಿನಲ್ಲಿ ‘ಕರ್ನಾಟಕ ಬಂದ್’ಗೆ ನೀರಸ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ13 Aug 2026 7:16 PM IST
share
ಕಾವೇರಿ ನೀರಿನ ವಿಚಾರ | ಬೆಂಗಳೂರಿನಲ್ಲಿ ‘ಕರ್ನಾಟಕ ಬಂದ್’ಗೆ ನೀರಸ ಪ್ರತಿಕ್ರಿಯೆ

ಬೆಂಗಳೂರು : ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಯ್ಲೂಆರ್‍ಸಿ) ನೀಡಿದ ಆದೇಶವನ್ನು ಖಂಡಿಸಿ ಕನ್ನಡ ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಕರ್ನಾಟಕ ಬಂದ್’ಗೆ ನಗರದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎಂದಿನಂತೆ ಗುರುವಾರದಂದು ನಗರದಲ್ಲಿ ಚಿತ್ರಮಂದಿರಗಳು, ಅಂಗಡಿ, ಹೋಟೆಲ್‍ಗಳು, ಬಾರ್ ಮತ್ತು ಮಾಲ್‍ಗಳು ತೆರೆದ್ದವು. ಶಾಲಾ-ಕಾಲೇಜುಗಳಿಗೆ ರಜೆ ಇರಲಿಲ್ಲ, ಯಾವುದೇ ಅಡೆತಡೆ ಇಲ್ಲದೆ ತರಗತಿಗಳು ನಡೆದಿವೆ. ಆಸ್ಪತ್ರೆಗಳು ಮತ್ತು ಔಷಧ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಬ್ಯಾಂಕುಗಳ ಸೇವೆಯಲ್ಲೂ ಯಾವುದೇ ವ್ಯತ್ಯಯವಾಗಲಿಲ್ಲ. ಸರಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್‍ಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ಮಂದಿ ಬಸ್‍ಗಳಲ್ಲಿ ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಬಸ್ ಸಂಚಾರದಲ್ಲಿ ಯಾವುದೇ ದೊಡ್ಡ ವ್ಯತ್ಯಯ ಕಂಡುಬರಲಿಲ್ಲ. ನಗರದ ರಸ್ತೆಗಳಲ್ಲೂ ವಾಹನ ದಟ್ಟಣೆ ಎಂದಿನಂತೆ ಸಾಮಾನ್ಯವಾಗಿತ್ತು. ಮೆಟ್ರೋ, ಆಟೋ, ಟ್ಯಾಕ್ಸಿ ಸೇರಿದಂತೆ ಸಾರಿಗೆ ವ್ಯವಸ್ಥೆ ಸಹಜವಾಗಿಯೇ ಕಾರ್ಯನಿರ್ವಹಿಸಿವೆ.

ಇನ್ನು ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಟೌನ್‍ಹಾಲ್, ಕೆ.ಆರ್. ಮಾರುಕಟ್ಟೆ, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಟೌನ್‍ಹಾಲ್‍ನಲ್ಲಿ ನಾಲ್ಕು ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಿ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿತ್ತು.

ವಾಟಾಳ್ ಸೇರಿದಂತೆ 14 ಮಂದಿ ವಶ: ಕರ್ನಾಟಕ ಬಂದ್‍ಗೆ ಕರೆ ನೀಡಿದ್ದ ಹಿನ್ನಲೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸೇರಿದಂತೆ 14 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಯಿತು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ ವಾಟಾಳ್ ನಾಗರಾಜ್ ಅವರನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ವಶಕ್ಕೆ ಪಡೆಯುವಾಗ, ಅವರು ಮನೆಯಿಂದ ಆಚೆ ಬರುವುದಿಲ್ಲ ಎಂದು ಅವರು ಪಟ್ಟು ಹಿಡಿದ ಪ್ರಸಂಗ ನಡೆಯಿತು.

ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಹಾಗೂ ಎಸಿಪಿ ತನ್ವೀರ್ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಸುಮಾರು ಅರ್ಧ ಗಂಟೆಗಳ ಕಾಲ ವಾಟಾಳ್ ಅವರ ಮನವೊಲಿಸಲು ಪ್ರಯತ್ನಿಸಿತು. ಆದರೆ, ಸರ್ಕಾರದ ನಡೆಗೆ ತೀವ್ರ ಆಕ್ರೋಶ ಹೊರಹಾಕಿದ ವಾಟಾಳ್, ಅಧಿಕಾರಿಗಳ ವಿನಂತಿಗೆ ಜಗ್ಗಲಿಲ್ಲ. ಕೊನೆಗೆ ಸ್ಥಳದಲ್ಲೇ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಆದರೆ ಅವರು ತಮ್ಮ ಬಾಯಿಗೆ ಸೆಲೋಟೇಪ್ ಅಂಟಿಸಿಕೊಳ್ಳುವ ಮೂಲಕ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಟೌನ್‍ಹಾಲ್‍ಗೆ ಪ್ರತಿಭಟನೆಗೆ ತೆರಳುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಫ್ರೀಡಂ ಪಾರ್ಕ್ ಬಳಿ ಬಿಡಲಾಯಿತು.

‘ಕರ್ನಾಟಕ ಬಂದ್ ಯಶಸ್ವಿಯಾಗದಂತೆ ರಾಜ್ಯ ಸರಕಾರವೇ ಪೊಲೀಸರನ್ನು ಬಳಸಿಕೊಂಡು ಅಡ್ಡಿಪಡಿಸಿದೆ. ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಂದ್ ನಡೆಸುವುದಾಗಿ ಘೋಷಿಸಿದ್ದರೂ, ಪ್ರತಿಭಟನೆ ನಡೆಸಲು ಪೊಲೀಸರು ನಮಗೆ ಅವಕಾಶ ನೀಡಲಿಲ್ಲ’

-ವಾಟಾಳ್ ನಾಗರಾಜ್, ಕನ್ನಡ ಒಕ್ಕೂಟದ ಅಧ್ಯಕ್ಷ

Tags

Karnataka Bandh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X