ʻಕರ್ನಾಟಕ ಬಂದ್ʼ ಹಿಂಪಡೆದ ಕನ್ನಡಪರ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ʼರಾಜ್ಯದ ಹಿತದೃಷ್ಟಿಯಿಂದ ʻಕರ್ನಾಟಕ ಬಂದ್ʼ ಅನ್ನು ಹಿಂಪಡೆದ ಎಲ್ಲಾ ಕನ್ನಡಪರ ಸಂಘಟನೆಗಳಿಗೆ ಹೃದಯಪೂರ್ವಕ ಧನ್ಯವಾದಗಳುʼ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು ಇಟ್ಟಿದ್ದು, ಅವರ ಬೇಡಿಕೆಗಳನ್ನು ಪರಿಶೀಲಿಸುತ್ತೇನೆ. ಅವರ ಸಹಕಾರಕ್ಕೆ ನನ್ನ ಕೃತಜ್ಞತೆಗಳು ಎಂದು ಹೇಳಿದ್ದಾರೆ.
Next Story






