Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼKarnataka Budget 2026ʼ ಕಾಂಗ್ರೆಸ್‌...

ʼKarnataka Budget 2026ʼ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದೇನು?

ವಾರ್ತಾಭಾರತಿವಾರ್ತಾಭಾರತಿ6 March 2026 5:38 PM IST
share
ʼKarnataka Budget 2026ʼ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದೇನು?

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ 10:15 ಸುಮಾರಿಗೆ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-2027ನೆ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಬಜೆಟ್ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಸಚಿವರು, "ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತೀವ್ರ ಬರಗಾಲ ಇದ್ದರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ನಾವು ಕೇಂದ್ರ ಪುರಸ್ಕೃತ ಕುಸುಮ್- ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸಿ ರೈತರಿಗೆ ಹಗಲು ವೇಳೆ ವಿದ್ಯುತ್ ನೀಡಲು ಪ್ರಯತ್ನಿಸಿದ್ದೆವು. ಇದೇ ಮಾದರಿಯಲ್ಲಿ ಈಗ ಸುಮಾರು 3000 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸುವ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಕೃಷಿ ಪಂಪ್ ಸೆಟ್‌ಗಳಿಗೆ 10 ಅಶ್ವಶಕ್ತಿವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ 19,290 ಕೋಟಿ ರೂ. ಮೀಸಲಿಡುವ ಮೂಲಕ ಮುಖ್ಯಮಂತ್ರಿಗಳು ರೈತರ ಕುರಿತಾಗಿ ಇರುವ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ," ಎಂದಿದ್ದಾರೆ.

ಸಿಎಂ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ.ಪಾಟೀಲ್‌ ಹರ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. ಇದಕ್ಕೆ ತಕ್ಕಂತೆ ಬಂಡವಾಳ ವೆಚ್ಚವನ್ನೂ ಅವರು ಘೋಷಿಸಿದ್ದಾರೆ. ಇವೆಲ್ಲವೂ ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ತಂದುಕೊಡಲಿದ್ದು, ಅಪಾರ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ ಸಾಕಷ್ಟು ಆದ್ಯತೆ ನೀಡಿದೆ. ಇದು ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಪಾಟೀಲ್‌ ನುಡಿದಿದ್ದಾರೆ.

ರಾಜ್ಯದ ಸರ್ವರ ಪಾಲಿನ ಕಲ್ಯಾಣದ ಬಜೆಟ್: ಸಚಿವ ಶಿವರಾಜ್ ತಂಗಡಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 17ನೇ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸರ್ವ ಜನರ ಕಲ್ಯಾಣಕ್ಕೆ ಒತ್ತು ನೀಡಿದ್ದು, ಇದು ಹಿಂದುಳಿದ, ದೀನ-ದಲಿತರ ಜನಪರವಾದ ಬಜೆಟ್ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ತಿಳಿಸಿದ್ದಾರೆ.

ಆರ್ಥಿಕ ಶಿಸ್ತಿನನಿಂದ ಕೂಡಿದ ಬಜೆಟ್ ಇದಾಗಿದ್ದು, ತಮ್ಮ ಸುದೀರ್ಘವಾದ 17ನೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ಒದಗಿಸುವ ಮೂಲಕ ಇತರ ಕ್ಷೇತ್ರಗಳಿಗೂ ಸಮಾನ ಆದ್ಯತೆ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಕೃಷಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕೆ, ಮೂಲಸೌಕರ್ಯ, ಮಹಿಳಾ ಮತ್ತು ಮಕ್ಕಳು, ಆರೋಗ್ಯ, ಎಐ ಕೌಶಲ್ಯಾಭಿವೃದ್ಧಿ ಹಾಗೂ ಕೆರೆ ತುಂಬಿಸುವ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅನ್ನದಾತನಿಗಾಗಿ ರೂ. 100 ಕೋಟಿ ವೆಚ್ಚದಲ್ಲಿ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆ, ಸಸ್ಯ ಸಂಜೀವಿನಿ, ಅಥಣಿಯಲ್ಲಿ ಕೃಷಿ‌ ಕಾಲೇಜನ್ನು ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಲಾಗಿದೆ.

ಸಮತೋಲಿತ, ದೂರದೃಷ್ಟಿಯ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ತಾವು ಆರ್ಥಿಕ ತಜ್ಞರಾಗಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಬಜೆಟ್ ದೂರದೃಷ್ಟಿಯುಳ್ಳ ಹಾಗೂ ಆರ್ಥಿಕ ಶಿಸ್ತಿನ ಬಜೆಟ್ ಆಗಿದ್ದು, ರಾಜ್ಯದ ಎಲ್ಲಾ ವರ್ಗದ ಜನರು, ಎಲ್ಲಾ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಮೂಲಭೂತ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ರಾಜ್ಯದ ಅಭಿವೃದ್ಧಿಗೆ ಬಲ ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಎಲ್ಲ ಕ್ಷೇತ್ರಗಳನ್ನೊಳಗೊಂಡ ಸಮಗ್ರ ಬಜೆಟ್ : ಪರಮೇಶ್ವರ್‌

2026-27ನೇ ಬಜೆಟ್ ವಿವಿಧ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಬಜೆಟ್ ಆಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಯುವಕರಿಗೆ ಆತಂಕವಿತ್ತು. 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ತಿರ್ಮಾನ ಮಾಡಿದ್ದಾರೆ. ರೈತ ಸಮುದಾಯಕ್ಕೆ 30 ಸಾವಿರ ಕೋಟಿ ರೂ. ಸಾಲ ನೀಡುವ ತೀರ್ಮಾನ ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ 15000 ಹುದ್ದೆ, ಪೊಲೀಸ್ ಇಲಾಖೆಯಲ್ಲಿ 8 ಸಾವಿರ ಹುದ್ದೆಗಳು ಹಾಗೂ ಆರೋಗ್ಯ ಇಲಾಖೆಯಲ್ಲಿ 2500 ಹುದ್ದೆಗಳ ನೇಮಕಾತಿ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂಬುದನ್ನು ಬಜೆಟ್‌ನಲ್ಲಿ ತಿಳಿಸಿದ್ದಾರೆ ಎಂದರು.

ಸಮಾನ ಅವಕಾಶಗಳ ದೃಷ್ಟಿಯಿಂದ ರೂಪುಗೊಂಡಿರುವ ಬಜೆಟ್: ಬಿ.ಕೆ.ಹರಿಪ್ರಸಾದ್

ರಾಜ್ಯದ ಆರ್ಥಿಕ ಪ್ರಗತಿಗೆ ವೇಗ ನೀಡುವ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳ ದೃಷ್ಟಿಯಿಂದ ರೂಪುಗೊಂಡಿರುವ ಈ ಬಜೆಟ್ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಲವಾದ ದಿಕ್ಕು ನೀಡಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ಶುಕ್ರವಾರ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯದ ಇತಿಹಾಸದಲ್ಲೇ 17 ಬಾರಿ ಬಜೆಟ್ ಮಂಡಿಸುವ ಮೂಲಕ ಅವರು ಮತ್ತೊಂದು ಮಹತ್ವದ ದಾಖಲೆಯನ್ನು ನಿರ್ಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಬಜೆಟ್ ಸಮಾಜದ ಎಲ್ಲ ವರ್ಗಗಳ ಜನರ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಜನಪರ ಬಜೆಟ್ ಆಗಿದ್ದು, ರೈತರು, ಮಹಿಳೆಯರು, ಯುವಕರು, ಮಧ್ಯಮ ವರ್ಗ ಮತ್ತು ದುರ್ಬಲ ವರ್ಗಗಳ ಅಭಿವೃದ್ಧಿ ಹಾಗೂ ಕಲ್ಯಾಣಕ್ಕೆ ಒತ್ತು ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಬಜೆಟ್‍ನಲ್ಲಿ ಧಾರವಾಡ ಜಿಲ್ಲೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದು, ಆಯವ್ಯಯದಲ್ಲಿ ಜಿಲ್ಲೆಗೆ ಬಂಪರ್ ಕೊಡುಗೆ ದೊರೆತಿದೆ. ಧಾರವಾಡ, ನವಲಗುಂದ ಹಾಗೂ ಕುಂದಗೋಳ ತಾಲೂಕುಗಳಲ್ಲಿ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಧಾರವಾಡದಲ್ಲಿ 150ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. 200 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ರಾಜ್ಯದ ಮೊಟ್ಟಮೊದಲ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ ಘೋಷಣೆ ಮಾಡಿದ್ದು ಅಭಿನಂದನೀಯ’

-ಸಂತೋಷ್ ಲಾಡ್ ಕಾರ್ಮಿಕ ಸಚಿವ

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಅತ್ಯುತ್ತಮವಾಗಿದ್ದು, ಇದು ಸಮತೋಲಿತ, ಸಮಪಾಲು-ಸಮಬಾಳ್ವೆಯ ಆಯವ್ಯಯವಾಗಿದೆ. ಹಿಂದುಳಿದವರು, ದೀನ-ದಲಿತರು, ಅಲ್ಪಸಂಖ್ಯಾತರು, ಮಧ್ಯಮವರ್ಗದವರ ಶ್ರೇಯೋಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದ್ದು, ನಮ್ಮ ಪಕ್ಷದ ಬಡವರ ಪರವಾದ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ’

-ಬೈರತಿ ಸುರೇಶ್ ನಗರಾಭಿವೃದ್ಧಿ ಸಚಿವ

Tags

Karnataka Budget 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X