Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Karnataka Budget 2026 | ರೇಷ್ಮೆ...

Karnataka Budget 2026 | ರೇಷ್ಮೆ ರೈತರು, ಹೈನುಗಾರರಿಗೆ ವಿಶೇಷ ಯೋಜನೆಗಳು

ವಾರ್ತಾಭಾರತಿವಾರ್ತಾಭಾರತಿ6 March 2026 3:31 PM IST
share
Karnataka Budget 2026 | ರೇಷ್ಮೆ ರೈತರು, ಹೈನುಗಾರರಿಗೆ ವಿಶೇಷ ಯೋಜನೆಗಳು
► ಸಿಲ್ಕ್ ಪಾರ್ಕ್ ಸ್ಥಾಪನೆ, ಪಶುಸಂಗೋಪನೆಗೆ ಅನುದಾನ ಹೆಚ್ಚಳ: ಸಿದ್ದರಾಮಯ್ಯ ► ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಬೆಂಗಳೂರು, ಬೀದರ್‌ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ’ಗಳು ► ತೋಟಗಾರಿಕೆ ಉತ್ಪನ್ನಗಳಿಗಾಗಿ 12 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ

ಬೆಂಗಳೂರು: ಭಾರತದ ರೇಷ್ಮೆ ಉತ್ಪಾದನೆಯಲ್ಲಿ ಶೇ.46 ರಷ್ಟು ಪಾಲು ಹೊಂದಿರುವ ಕರ್ನಾಟಕವು ದೇಶದ ರೇಷ್ಮೆ ರಾಜಧಾನಿಯಾಗಿದೆ. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ರೀಲಿಂಗ್ ಶೆಡ್ ನಿರ್ಮಾಣ, ಹನಿ ನೀರಾವರಿ ಘಟಕ ಮುಂತಾದ ಚಟುವಟಿಕೆಗಳಿಗೆ ಕಳೆದ ಮೂರು ವರ್ಷಗಳಲ್ಲಿ 531 ಕೋಟಿ ರೂ. ಮೊತ್ತದ ಸಹಾಯಧನವನ್ನು 2 ಲಕ್ಷ ಫಲಾನುಭವಿಗಳಿಗೆ ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು 2026ನೇ ಸಾಲಿನ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ 15 ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಸಂಪೂರ್ಣ ನಗದುರಹಿತ ಡಿಜಿಟಲ್ ವಹಿವಾಟು, ಇ-ಹರಾಜು ಹಾಗೂ ಇ-ಪಾವತಿ ವ್ಯವಸ್ಥೆ ಜಾರಿಗೊಳಿಸಿದ ದೇಶದ ಮೊದಲ ಮತ್ತು ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ.ಗೆ ನೀಡುವ ಸಾಗಾಣಿಕೆ ವೆಚ್ಚವನ್ನು 10 ರೂ.ಗಳಿಂದ 20 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

ಇದಲ್ಲದೆ ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ ಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು. ರೇಷ್ಮೆ ಇಲಾಖೆಯ ಆಯ್ದ ಜಮೀನಿನಲ್ಲಿ ರೈತ ಉದ್ಯಮಿಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಪಶುಸಂಗೋಪನೆಗೆ ಹಲವು ಯೋಜನೆಗಳು

ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಪ್ರಸ್ತುತ ಪ್ರತಿದಿನ 9.07 ಲಕ್ಷ ಹಾಲು ಉತ್ಪಾದಕರಿಂದ ಸರಾಸರಿ ಒಂದು ಕೋಟಿ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಹಾಲು ಪೂರೈಕೆದಾರರಿಗೆ ಬಾಕಿ ಇದ್ದ 609 ಕೋಟಿ ರೂ. ಪ್ರೋತ್ಸಾಹಧನ ಸೇರಿ ಇದುವರೆಗೆ ಒಟ್ಟು 4,523 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಅನುಗ್ರಹ ಯೋಜನೆಯಡಿ ಕುರಿ, ಮೇಕೆ ಮತ್ತು ರಾಸುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರಧನ ಹೆಚ್ಚಿಸಲಾಗಿದ್ದು, 1.70 ಲಕ್ಷ ಫಲಾನುಭವಿಗಳಿಗೆ 101 ಕೋಟಿ ರೂ. ವಿತರಿಸಲಾಗಿದೆ. ಜೊತೆಗೆ ʻಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ, 2025ʼ ಜಾರಿಗೆ ತರಲಾಗಿದ್ದು, 6,702 ಕುರಿಗಾಹಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಇದಲ್ಲದೆ ನಬಾರ್ಡ್ ಸಹಯೋಗದಲ್ಲಿ 2026-27ನೇ ಸಾಲಿನಲ್ಲಿ 100 ಹೊಸ ಪಶುವೈದ್ಯ ಸಂಸ್ಥೆಗಳ ಕಟ್ಟಡಗಳನ್ನು ನಿರ್ಮಿಸಲಾಗುವುದು. ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಗೆ 10,000 ಫಲಾನುಭವಿಗಳಿಗೆ ಶೇ.25 ಸಹಾಯಧನದಲ್ಲಿ ಘಟಕಗಳನ್ನು ಸ್ಥಾಪಿಸಲಾಗುವುದು. ಹೈನುಗಾರಿಕೆಯನ್ನು ಉತ್ತೇಜಿಸಲು 10,000 ಫಲಾನುಭವಿಗಳಿಗೆ ಶೇ.25 ಸಹಾಯಧನದಲ್ಲಿ ಹಸು ಅಥವಾ ಎಮ್ಮೆ ಖರೀದಿಸಲು ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.

ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪನೆ ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಅಭಿವೃದ್ಧಿ ಕೈಗೊಳ್ಳಲಾಗುವುದು. ಜೊತೆಗೆ ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ನಿವಾರಣೆಗೆ 1,000 ಗ್ರಾಮ ಪಂಚಾಯಿತಿಗಳಲ್ಲಿ ʻಫಲಧಾರೆʼ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರು ಹಾಗೂ ಬೀದರ್ ಪಶುವೈದ್ಯಕೀಯ ಮಹಾವಿದ್ಯಾಲಯಗಳ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೀದರ್‌ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ’ಗಳನ್ನು ಆರಂಭಿಸಲಾಗುವುದು ಎಂದು ಅವರು ಹೇಳಿದರು.

ತೋಟಗಾರಿಕೆ ಉತ್ಪನ್ನಗಳಿಗಾಗಿ 12ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ

ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು ಎಂದರು.

ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸಿನಂತೆ ಡಂಬಳದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Tags

Karnataka Budget 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X