Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಹೊಸದಾಗಿ 500 ʼಪಬ್ಲಿಕ್...

ರಾಜ್ಯದಲ್ಲಿ ಹೊಸದಾಗಿ 500 ʼಪಬ್ಲಿಕ್ ಶಾಲೆʼಗಳು ಆರಂಭ : ಸಿಎಂ ಸಿದ್ದರಾಮಯ್ಯ ಘೋಷಣೆ

ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ, ಮಕ್ಕಳ ಹಾಜರಾತಿ ಹೆಚ್ಚಿಸಲು ʼFace Recognitionʼ ತಂತ್ರಜ್ಞಾನ ಬಳಕೆ

ವಾರ್ತಾಭಾರತಿವಾರ್ತಾಭಾರತಿ7 March 2025 12:31 PM IST
share
ರಾಜ್ಯದಲ್ಲಿ ಹೊಸದಾಗಿ 500 ʼಪಬ್ಲಿಕ್ ಶಾಲೆʼಗಳು ಆರಂಭ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದ್ದು, ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್‌ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು ಎಂದು ಮಾಹಿತಿ ನೀಡಿದರು.

ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್‌ ರಾಗಿ ಹೆಲ್ತ್‌ ಮಿಕ್ಸ್‌ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು. ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು ಎಂದರು.

ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು. ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಕಂಪ್ಯೂಟರ್‌ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ 500 ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು ಎಂದು ಸಿಎಂ ಘೋಷಿಸಿದರು.

ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು. ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725‌ ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 200ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್.‌ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X