Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಶಿಷ್ಟರ ಕಲ್ಯಾಣಕ್ಕೆ...

ಪರಿಶಿಷ್ಟರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ-ಟಿಎಸ್‍ಪಿ ಯೋಜನೆಯಡಿ 42ಸಾವಿರ ಕೋಟಿ ರೂ. ಅನುದಾನ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2025 8:34 PM IST
share
ಪರಿಶಿಷ್ಟರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ-ಟಿಎಸ್‍ಪಿ ಯೋಜನೆಯಡಿ 42ಸಾವಿರ ಕೋಟಿ ರೂ. ಅನುದಾನ : ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್‍ಸಿಎಸ್‍ಪಿ ಉಪಯೋಜನೆ 29,992ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,026 ಕೋಟಿ ರೂ.ಸೇರಿದಂತೆ ಒಟ್ಟು 42,018 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿದ ಅವರು, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 488 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಪರಿಶಿಷ್ಟ ಜಾತಿ/ ಪಂಗಡ ಸಮುದಾಯದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ ಸಹಾಯಧನದ ಮೊತ್ತವನ್ನು 2.50 ಲಕ್ಷ ರೂ. ಹೆಚ್ಚಿಸಲಾಗುವುದು ಎಂದರು.

ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ 559 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾತಿ ನೀಡಲಾಗಿದ್ದು, 2025-26 ನೆ ಸಾಲಿನಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲು 222 ಕೋಟಿ ರೂ. ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮಾಡಿರುವ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳಿಗೆ ಡಾ. ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಯೋಜನೆಯಡಿ ಒಂದು ಕೋಟಿರೂ. ಅನುದಾನ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಬಂಜಾರ ಸಮುದಾಯದ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ಒಂದು ವಸತಿ ಶಾಲೆಯನ್ನು ಕ್ರೈಸ್ ವತಿಯಿಂದ ಪ್ರಾರಂಭಿಸಲಾಗುವುದು. ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅದೇ ಕಾಲೇಜಿನ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ, ಅವರಿಗೆ ವಸತಿ ನಿಲಯದ ವೆಚ್ಚವಾಗಿ ಪ್ರತಿ ಮಾಹೆ 3,500 ರೂ.ಗಳನ್ನು ಪಾವತಿಸಲಾಗುವುದು ಎಂದು ಅವರು ತಿಳಿಸಿದರು.

ನ್ಯಾಯಾಂಗ :

* ನ್ಯಾಯಾಂಗ ದಾಖಲೆಗಳ ಅನುವಾದ ಮತ್ತಿತರ ಮಾಹಿತಿ ಪಡೆಯಲು 2 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ವ್ಯವಸ್ಥೆ

* ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿನ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಡಿಜಿಟಲ್ ಗ್ರಂಥಾಲಯಗಳನ್ನು ಪ್ರಾರಂಭಿಸಲು 2 ಕೋಟಿ ರೂ. ಹಂಚಿಕೆ

* ಅಡ್ವೊಕೇಟ್ ಜನರಲ್ ಕಚೇರಿ ಸಹಯೋಗದೊಂದಿಗೆ 50 ಲಕ್ಷ ರೂ. ವೆಚ್ಚದಲ್ಲಿ ಆನ್‍ಲೈನ್ ಗ್ರಂಥಾಲಯ ಸ್ಥಾಪನೆ

* ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ ಕುರಿತಂತೆ ನ್ಯಾಯಾಲಯಗಳಲ್ಲಿ ದಾಖಲಿಸಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಬಾಗಲಕೋಟೆಯಲ್ಲಿ ವಿಶೇಷ ತ್ವರಿತಗತಿ ನ್ಯಾಯಾಲಯ ಸ್ಥಾಪನೆ

* ಕುಕನೂರು ಮತ್ತು ಕಾರಟಗಿ ತಾಲೂಕಿನಲ್ಲಿ ಜೆಎಂಎಫ್‍ಸಿ ನ್ಯಾಯಾಲಯ ಸ್ಥಾಪನೆಗೆ 9 ಕೋಟಿ ರೂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X