ಬಜೆಟ್ ವಿರುದ್ದ ‘ಖಾಲಿ ಚೊಂಬು’ ಹಿಡಿದು ಬಿಜೆಪಿ ಪ್ರತಿಭಟನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026-27ನೆ ಸಾಲಿನ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಕಿವಿ ಮೇಲೆ ಹೂವು ಇಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಸದಸ್ಯರು ವಿಧಾನಸೌಧದಲ್ಲಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಮುಖಂಡರು, ‘ಕನ್ನಡಿಗರಿಗೆ ಈ ಸರಕಾರವು ಬಜೆಟ್‍ನಲ್ಲಿ ಖಾಲಿ ಚೊಂಬು ನೀಡಿದೆ, ಯುವಕರಿಗೆ ಉದ್ಯೋಗ ನೀಡದೆ ಮೋಸ ಮಾಡಿದೆ. 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ರೂ.ಸಾಲ ಮಾಡಿದ್ದು, ಬಜೆಟ್‍ನಲ್ಲಿಯೂ ಖಾಲಿ ಖಾಲಿಯಾಗಿದೆ. ರೈತರಿಗೆ ಯಾವುದೇ ಯೋಜನೆ ನೀಡಿಲ್ಲ ಎಂದು ದೂರಿದರು.
Next Story





