Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾ.ಪಂ. ʻಮಹಾತ್ಮಾ ಗಾಂಧಿ ಗ್ರಾಮ...

ಗ್ರಾ.ಪಂ. ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್‌ʼ ಆಗಿ ನಾಮಕರಣ

ವಾರ್ತಾಭಾರತಿವಾರ್ತಾಭಾರತಿ6 March 2026 11:34 PM IST
share
ಗ್ರಾ.ಪಂ. ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್‌ʼ ಆಗಿ ನಾಮಕರಣ
► ಮೈಸೂರು, ಕಲಬುರ್ಗಿಯಲ್ಲಿ ತಲಾ 16 ಕೋಟಿ ರೂ.ವೆಚ್ಚದಲ್ಲಿ ಸ್ಕ್ನೈಡರ್ ಇಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆ ► ಕಲ್ಯಾಣ ಪಥ ಯೋಜನೆಯಡಿಯಲ್ಲಿನ 1,125ಕಿ.ಮೀ ರಸ್ತೆ ಕಾಮಗಾರಿ ಪೂರ್ಣ

ಬೆಂಗಳೂರು : ಮೈಸೂರು ಮತ್ತು ಕಲಬುರ್ಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಸ್ಕ್ನೈಡರ್ ಇಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದರಿಂದ ಪ್ರತಿ ವರ್ಷ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಬಜೆಟ್ ಭಾಷಣ ಮಾಡಿದ ಅವರು, ರಾಜ್ಯದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್ಡಿಎ ಮತ್ತು ಜೆಟಿಎಸ್‍ಗಳ ಮೂಲಭೂತ ಸೌಕರ್ಯ ಮತ್ತು ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ಐದು ವರ್ಷಗಳ ಅವಧಿಯ ಕೆ-ಕ್ಯೂಸ್ಟ್ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ ಸರಕಾರವು ಘೋಷಣೆ ಮಾಡಿರುವ ಪಿಎಂ ಸೇತು ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಮತ್ತು ಉದ್ದಿಮೆಗಳ ಸಹಭಾಗಿತ್ವದಲ್ಲಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಕ್ಲಸ್ಟರ್‍ಗಳನ್ನಾಗಿ ಉನ್ನತೀಕರಿಸಲಾಗುವುದು. 2026-27ನೇ ಸಾಲಿನಲ್ಲಿ ಎರಡು ಕ್ಲಸ್ಟರ್‍ಗಳನ್ನು 241 ಕೋಟಿ ರೂ. ಘಟಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದರು.

ಐಟಿಐ ಕಲಿತ ವಿದ್ಯಾರ್ಥಿನಿಯರಿಗೆ ಉದ್ಯಮಗಳಲ್ಲಿ ಉತ್ತಮ ಉದ್ಯೋಗಾವಕಾಶಗಳಿದ್ದು, ಹೆಣ್ಣುಮಕ್ಕಳ ಪ್ರವೇಶ ಹೆಚ್ಚಿಸಲು ಮಹಿಳಾ ತರಬೇತಿದಾರರಿಗೆ 1,200 ರೂ. ವಾರ್ಷಿಕ ಬೋಧನಾ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಐಟಿಐ ವಿದ್ಯಾರ್ಥಿಗಳಿಗೆ ಎರಡು ಹೆಚ್ಚುವರಿ ವಿಷಯಗಳಲ್ಲಿ ಬೋಧನೆ ಮಾಡುವ ಮೂಲಕ ಉನ್ನತ ವ್ಯಾಸಂಗ ಅಥವಾ ಉತ್ತಮ ಉದ್ಯೋಗ ಪಡೆದುಕೊಳ್ಳುವ ಅವಕಾಶ ಕಲ್ಪಿಸಲು ಪದವಿ ಪೂರ್ವ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ತಿಳಿಸಿದರು.

ಕೌಶಲ್ಯಾಭಿವೃದ್ಧಿಗಾಗಿ ವಿವಿಧ ಯೋಜನೆಗಳು:

ಕೊಪ್ಪಳದ ಜಿಟಿಟಿಸಿ–ಎಂಎಸ್‍ಡಿಸಿಯಲ್ಲಿ ಅಕ್ವಸ್ ಆಟಿಕೆ ಕ್ಲಸ್ಟರ್ ಇಂಡಸ್ಟ್ರಿಯ ಕಾರ್ಯತಂತ್ರದ ಸಹಯೋಗದೊಂದಿಗೆ ಉಪಕರಣ ಇಂಜಿನಿಯರಿಂಗ್‍ನಲ್ಲಿ ತಂತ್ರಜ್ಞಾನ ಕೇಂದ್ರವನ್ನು ಕೆಕೆಆರ್‍ಡಿಬಿಯ 10 ಕೋಟಿ ರೂ.ಗಳ ಅನುದಾನದೊಂದಿಗೆ ಒಟ್ಟಾರೆ 20 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ.

ಜಿಲ್ಲೆಗಳಲ್ಲಿ ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿಯನ್ನು ಬೆಂಬಲಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ ಚಾಲೆಂಜ್ ಫಂಡ್ ಸ್ಥಾಪಿಸಲಾಗುವುದು. ಈ ನಿಧಿ ಸ್ಥಳೀಯ ಕಾರ್ಮಿಕ ಹಾಗೂ ಉದ್ಯೋಗ ಸಂಬಂಧಿತ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಜೊತೆಗೂಡಿ ಕರ್ನಾಟಕ ಕೌಶಲ್ಯ ಬುದ್ಧಿಮತ್ತೆ ಮತ್ತು ಕಾರ್ಯತಂತ್ರ ಘಟಕವನ್ನು ಸ್ಥಾಪಿಸಲಾಗುವುದು.

ಬಹು ವೇದಿಕೆಗಳ ಮೂಲಕ ಪ್ರಸ್ತುತ ನೀಡಲಾಗುತ್ತಿರುವ ಎಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಮತ್ತು ಸೇವೆಗಳನ್ನು ಸಂಯೋಜಿಸಿ ಏಕೀಕೃತ ಕೌಶಲ್ಯ ಅಭಿವೃದ್ಧಿ ಪೋರ್ಟಲ್ ಅನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಗ್ರಾಮೀಣ ಭಾಗದಲ್ಲಿ ವಯೋವೃದ್ಧರ ಕ್ಷೇಮಾಭಿವೃದ್ಧಿ ಜೊತೆಗೆ ಬಾಣಂತಿಯರು ಹಾಗೂ ಶಿಶುಗಳ ಆರೈಕೆ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಮಾನ್ಯತೆ ಪಡೆದ ಸಂಸ್ಥೆಗಳ ಮೂಲಕ ‘ಆರೈಕೆ ಉದ್ಯಮಶೀಲತಾ ತರಬೇತಿ’ಯನ್ನು ನೀಡಲಾಗುವುದು.

ಅಂತರ್‍ರಾಷ್ಟ್ರೀಯ ರೈತ ಮಹಿಳಾ ವರ್ಷವೆಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಉತ್ತೇಜನದೊಂದಿಗೆ ಸುಸ್ಥಿರ ಮತ್ತು ದೀರ್ಘಾವಧಿಯ ಗ್ರಾಮೀಣಾಭಿವೃದ್ಧಿಗಾಗಿ 5,000 ರೈತ ಮಹಿಳೆಯರಿಗೆ ಆಧುನಿಕ ಕೃಷಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುವುದು.

ನಗರ ಪ್ರದೇಶಗಳ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ಒದಗಿಸಲು ಸಮೀಕ್ಷೆ ನಡೆಸುವುದು, ಗುರುತಿನ ಚೀಟಿಗಳು ಮತ್ತು ಮಾರಾಟ ಪ್ರಮಾಣಪತ್ರಗಳನ್ನು ನೀಡಲು ಹಾಗೂ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸುವುದಕ್ಕಾಗಿ ಏಳು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಗ್ರಾಮೀಣಾಭಿವೃದ್ಧಿ| ಕಲ್ಯಾಣ ಪಥ ಯೋಜನೆಯಡಿಯಲ್ಲಿನ 1,125ಕಿ.ಮೀ ರಸ್ತೆ ಕಾಮಗಾರಿ ಪೂರ್ಣ:

ಕಲ್ಯಾಣ ಕರ್ನಾಟಕದ ರಸ್ತೆ ಅಭಿವೃದ್ಧಿಗಾಗಿ ‘ಕಲ್ಯಾಣ ಪಥ’ ಯೋಜನೆಯಡಿ 1,000 ಕೋಟಿ ರೂ.ಗಳ ವೆಚ್ಚದಲ್ಲಿ 1,125 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಕಾಮಗಾರಿ ವಿವಿಧ ಹಂತದ ಪ್ರಗತಿಯಲ್ಲಿವೆ. ಇದುವರೆಗೆ ಈ ಉದ್ದೇಶಕ್ಕಾಗಿ 238 ಕೋಟಿ ರೂ. ವೆಚ್ಚ ಭರಿಸಿದ್ದು, ಉಳಿದ ಕಾಮಗಾರಿಗಳನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಡಿಬಿ ನೆರವಿನೊಂದಿಗೆ ಗ್ರಾಮೀಣ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸುವ ‘ಪ್ರಗತಿ ಪಥ’ ಯೋಜನೆಯಡಿ 7,110 ಕಿ.ಮೀ. ಉದ್ದದ 1,292 ರಸ್ತೆಗಳ ಅಭಿವೃದ್ಧಿಯನ್ನು 5,190 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಅನುಮೋದಿಸಲಾಗಿದೆ. ಇದರಲ್ಲಿ 783 ರಸ್ತೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, 655 ರಸ್ತೆಗಳ ಡಿಪಿಆರ್‍ಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 2026-27ನೇ ಸಾಲಿನಲ್ಲಿ 500 ಕೋಟಿ ರೂ ಒದಗಿಸಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿನ ಮೇಲ್ಮಟ್ಟ ಜಲಾಗಾರಗಳ ದೀರ್ಘಕಾಲಿಕ ಕಾರ್ಯಕ್ಷಮತೆಯನ್ನು ಖಚಿತಪಡಿಸುವ ಉದ್ದೇಶದಿಂದ 1,000 ಮೇಲ್ಮಟ್ಟ ಜಲಾಗಾರಗಳ ಸ್ವಚ್ಛತೆ, ಸುರಕ್ಷತೆ, ದುರಸ್ಥಿ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣಾ ವ್ಯವಸ್ಥೆಗಳ ಸುಧಾರಣೆ ಮತ್ತು ಪುನಃಶ್ಚೇತನ ಕಾರ್ಯವನ್ನು ಒಟ್ಟಾರೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತರೆ ಪ್ರಮುಖ ಅಂಶಗಳು

* ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ಬನ್ನಿಕೊಪ್ಪ ಹಾಗೂ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು 125 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

* ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳನ್ನು ‘ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್’ ಎಂದು ನಾಮಕರಣ ಮಾಡಲಾಗುವುದು. ಗ್ರಾಮ ಪಂಚಾಯತ್ ಆಸ್ತಿಗಳ ನಗದೀಕರಣ ಮತ್ತು ಮೌಲ್ಯವರ್ಧನೆಗೆ ಸ್ಥಳೀಯ ಆರ್ಥಿಕ ಬಲವರ್ಧನೆ ಕಾರ್ಯಕ್ರಮವನ್ನು ಆರಂಭಿಸಲಾಗುವುದು. ಈ ಯೋಜನೆಯಡಿ ಪ್ರಾಯೋಗಿಕವಾಗಿ ಪ್ರತಿ ವಿಭಾಗದ ಐದು ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದಲ್ಲಿ ಅವಶ್ಯವಿರುವ ಸೌಲಭ್ಯಗಳನ್ನು ಒಳಗೊಂಡ ಆದಾಯೋತ್ಪನ್ನ ಘಟಕಗಳನ್ನು ಪ್ರಸಕ್ತ ವರ್ಷ 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿ ನಿರ್ವಹಿಸಲಾಗುವುದು.

* ವಿದ್ಯುತ್ ಬಿಲ್‍ಗಳ ಪಾವತಿಯಲ್ಲಿ ಗ್ರಾಮ ಪಂಚಾಯತ್‍ಗಳನ್ನು ಸ್ವಯಂ ಸುಸ್ಥಿರಗೊಳಿಸಲು ಹಾಗೂ ಅವಶ್ಯವಿರುವ ವಾರ್ಷಿಕ ಅಂದಾಜು 4,000 ಎಂಡಬ್ಲ್ಯೂ ವಿದ್ಯುತ್ ಉತ್ಪಾದಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸೋಲಾರ್ ಮೈಕ್ರೋ ಗ್ರಿಡ್‍ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ‘ಅನಂತ’ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

Tags

Karnataka Budget
share
ವಾರ್ತಾಭಾರತಿ
ವಾರ್ತಾಭಾರತಿ
Next Story
X