Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಜನಸ್ಪಂದನ’ ಸರಕಾರದ ಮೇಲಿನ ಜನರ ವಿಶ್ವಾಸ...

‘ಜನಸ್ಪಂದನ’ ಸರಕಾರದ ಮೇಲಿನ ಜನರ ವಿಶ್ವಾಸ ಹೆಚ್ಚಿಸುವ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 Nov 2023 11:44 PM IST
share
‘ಜನಸ್ಪಂದನ’ ಸರಕಾರದ ಮೇಲಿನ ಜನರ ವಿಶ್ವಾಸ ಹೆಚ್ಚಿಸುವ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು 4ರಿಂದ 5 ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದು, ಜನರು ನಮ್ಮ ಸರಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಹೆಚ್ಚುವ ಪ್ರಯತ್ನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಕ್ಕೂ ಹೆಚ್ಚು ಮನವಿಗಳು ಸ್ವೀಕೃತವಾಗಿದೆ ಎಂದರು.

ನಾನು ಬೆಳಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಜನರ ಆರೋಗ್ಯ ವೆಚ್ಚಕ್ಕೆ 25ಕೋಟಿ ರೂ.ಬಿಡುಗಡೆ: ಕ್ಯಾನ್ಸರ್, ಕಿಡ್ನಿ, ಹೃದಯ ಸೇರಿದಂತೆ ಆರೋಗ್ಯ ಸಮಸ್ಯೆಯಿಂದ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ. ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣ ಪ್ರಮಾಣವನ್ನು ಸರಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಸಚಿವರ ಜನತಾ ದರ್ಶನ: ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಸಮರ್ಪಕವಾಗಿ ಮಾಡುತ್ತಿಲ್ಲವೇಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಸಚಿವರೂ ಜನತಾ ದರ್ಶನ ಮಾಡಿದ್ದು, ಕಾರ್ಯಕ್ರಮ ನಡೆಸಿದ ಬಗ್ಗೆ ವರದಿ ನೀಡಲಿದ್ದಾರೆ ಎಂದರು.

ಮಕ್ಕಳ ಪೌಷ್ಟಿಕಾಂಶ: ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳು ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಮಕ್ಕಳ ಪೌಷ್ಠಿಕಾಂಶ ವೃದ್ಧಿಸುವ ಸರಕಾರದ ವಿವಿಧ ಕಾರ್ಯಕ್ರಮಗಳಿಗೆ 185 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಪ್ರತಿದಿನವು ಹಾಲು, ಬಿಸಿಯೂಟಗಳನ್ನು ನೀಡಲಾಗುತ್ತಿದೆ ಎಂದರು.

ಭ್ರೂಣಹತ್ಯೆ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ, ಈ ದುಷ್ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾದಗಿರಿ ಜಿಲ್ಲೆಯಲ್ಲಿ ಅಕ್ಕಿ ಕಳುವು ನಡೆದಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಗಳಿಗೆ ಉತ್ತರಿಸಿದರು.

ಹೆಚ್ಚುವರಿ ಬಸ್ ಗಳಿಗೆ ವ್ಯವಸ್ಥೆ: ಶಕ್ತಿ ಯೋಜನೆ ಯಶಸ್ವಿಯಾದರೂ, ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈಗಾಗಲೇ 971 ಬಸ್ಸುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ ಗಳನ್ನು ಹಾಕಲು ತಿಳಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X