Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ...

ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ

ವಾರ್ತಾಭಾರತಿವಾರ್ತಾಭಾರತಿ15 April 2026 1:47 PM IST
share
ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ

ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬೆನ್ನಲ್ಲೇ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಲು ದಿಲ್ಲಿಗೆ ತೆರಳಿದ್ದ ಕರ್ನಾಟಕದ ಕಾಂಗ್ರೆಸ್ ಶಾಸಕರುಗಳಿಗೆ ಹೈಕಮಾಂಡ್‌ ವರಿಷ್ಠರು ಭೇಟಿಗೆ ಸಿಗದ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ದರ್ಶನ ಪಡೆದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಬಿ.ಜಯಚಂದ್ರ ಅವರು, "ಆಯೋಧ್ಯೆಯಲ್ಲಿ ಶ್ರೀರಾಮನನ್ನು ನೋಡಬೇಕೆಂಬ ಬಯಕೆ ಇತ್ತು. ರಾಮನ ಆಶೀರ್ವಾದ ಪಡೆದುಕೊಳ್ಳಲು 15 ಜನ ಶಾಸಕರು ಬಂದಿದ್ದೇವೆ. ಶ್ರೀರಾಮನ ವಿಗ್ರಹವನ್ನು ಕೆತ್ತಿದವರು ಮೈಸೂರಿನ ಅರುಣ್ ಯೋಗಿರಾಜ್, ಇದು ತುಂಬಾ ಖುಷಿಯ ವಿಚಾರ. ಕರ್ನಾಟಕ ಅಂದರೆ ಹನುಮಂತನ ಜಾಗ, ಹೀಗಾಗಿ ಉತ್ತರ ಪ್ರದೇಶ ಜೊತೆಗೆ ಇರುವ ಸಂಬಂಧವನ್ನು ನಾವು ಊಹೆ ಮಾಡಲು ಸಾಧ್ಯವಿಲ್ಲ." ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಖುದ್ದು ಭೇಟಿ ಮಾಡಿದ್ದ ಶಾಸಕರಾದ ಅಶೋಕ್ ಪಟ್ಟಣ್, ಬೇಳೂರು ಗೋಪಾಲಕೃಷ್ಣ, ಟಿ.ಬಿ.ಜಯಚಂದ್ರ, ಪುಟ್ಟರಂಗ ಶೆಟ್ಟಿ, ಷಡಕ್ಷರಿ ಸೇರಿ ಹಿರಿಯ ಶಾಸಕರು, ‘ಸಚಿವ ಸಂಪುಟದಲ್ಲಿ ಹಿರಿಯ ಶಾಸಕರಿಗೆ ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದ್ದರು.

ಅಲ್ಲದೆ, ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಿದರೆ 2028ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಹಕಾರಿಯಾಗಲಿದೆ ಎಂದು ಶಾಸಕರು ಕೋರಿದ್ದರು ಎನ್ನಲಾಗಿದೆ.

Tags

KarnatakaCongressMLAsAyodhyaRam Mandir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X