Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ...

‘ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಕಠಿಣ ಕ್ರಮ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ-ಸಾರಿಗೆ ಸಚಿವ ಭೈರತಿ ಸುರೇಶ್ ಸಭೆ

ಚಾಲನಾ ಪರವಾನಗಿ ಅಮಾನತು, ದಂಡ ಹೆಚ್ಚಳಕ್ಕೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ30 Sept 2026 8:34 PM IST
share
‘ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಕಠಿಣ ಕ್ರಮ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ-ಸಾರಿಗೆ ಸಚಿವ ಭೈರತಿ ಸುರೇಶ್ ಸಭೆ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬುಧವಾರ ವಿಕಾಸೌಧದಲ್ಲಿ ನಡೆದ ಸಭೆಯಲ್ಲಿ ಸಂಚಾರಿ ನಿಯಮಗಳನ್ನು ಪದೇಪದೇ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯದ ಕುರಿತು ಸಭೆಯಲ್ಲಿ ಒತ್ತು ನೀಡಲಾಯಿತು.

ವಿವಿಧ ಸಂಚಾರಿ ಉಲ್ಲಂಘನೆಗಳಿಗೆ ಅಂಕಗಳನ್ನು ನಿಗದಿಪಡಿಸಿ, ನಿರ್ದಿಷ್ಟ ಮಿತಿಯನ್ನು ತಲುಪಿದಾಗ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವ ಅಂಕಾಧಾರಿತ ಚಾಲನಾ ಪರವಾನಗಿ ವ್ಯವಸ್ಥೆ ಜಾರಿಗೆ ತರುವ ಕುರಿತು ಚರ್ಚಿಸಲಾಯಿತು. ಈ ವ್ಯವಸ್ಥೆ ಜಾರಿಗೆ ಅಗತ್ಯವಿರುವ ಕಾನೂನು ಕ್ರಮಗಳ ಬಗ್ಗೆಯೂ ಪರಿಶೀಲಿಸಲಾಯಿತು.


ಸಾರಥಿ–ಇ-ಚಲನ್ ವ್ಯವಸ್ಥೆ ಸಂಯೋಜನೆ:

ಚಾಲನಾ ಪರವಾನಗಿ ಅಮಾನತು ಹಾಗೂ ಸಂಚಾರಿ ನಿಯಮ ಉಲ್ಲಂಘನೆಗಳ ಮಾಹಿತಿಯ ಸಮಗ್ರ ನಿರ್ವಹಣೆಗಾಗಿ ಸಾರಿಗೆ ಇಲಾಖೆಯ ಸಾರಥಿ ವ್ಯವಸ್ಥೆಯನ್ನು ಬೆಂಗಳೂರು ಸಂಚಾರ ಪೊಲೀಸರ ಇ-ಚಲನ್ ವ್ಯವಸ್ಥೆಯೊಂದಿಗೆ ನೇರವಾಗಿ ಸಂಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಂಚಾರಿ ನಿಯಮ ಉಲ್ಲಂಘನೆಗಳಿಗೆ ದಂಡ ಹೆಚ್ಚಳ:

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ತೊಂದರೆ ಉಂಟುಮಾಡುವ ಸಂಚಾರಿ ಉಲ್ಲಂಘನೆಗಳಿಗೆ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಹೆಚ್ಚಿಸುವುದು, ಐದು ಅಥವಾ ಅದಕ್ಕಿಂತ ಹೆಚ್ಚು ಸಂಚಾರಿ ಉಲ್ಲಂಘನೆಗಳನ್ನು ಮಾಡಿರುವವರನ್ನು ಗುರುತಿಸಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಅರೆ ಹೆಲ್ಮೆಟ್‍ಗಳ ಉತ್ಪಾದನೆಗೆ ಕಡಿವಾಣ, ಅನಧಿಕೃತ ಹಾರ್ನ್‍ಗಳು, ಮಾರ್ಪಡಿಸಿದ ಸೈಲೆನ್ಸರ್‍ಗಳು ಹಾಗೂ ಅತಿಯಾದ ಬೆಳಕು ನೀಡುವ ಎಲ್‍ಇಡಿ ದೀಪಗಳ ಮಾರಾಟ ಮತ್ತು ಬಳಕೆಯ ವಿರುದ್ಧವೂ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು, ಬ್ಯಾಟರಿ ಚಾಲಿನ ಕಡಿಮೆ ವೇಗದ ವಾಹನಗಳಿಗೂ ಅಗತ್ಯ ನಿಯಮಗಳನ್ನು ರೂಪಿಸುವುದು, ಕಾರ್ ಹಂಚಿಕೆ ವ್ಯವಸ್ಥೆಗೆ ಉತ್ತೇಜನ ನೀಡುವುದು, ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಕ್ಕೆ ಸಂಬಂಧಿಸಿದ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಕುರಿತು ಪರಿಶೀಲಿಸಲಾಯಿತು.

ಹಳೆಯ ಹಾಗೂ ಅನರ್ಹ ವಾಹನಗಳ ಸ್ಕ್ರಾಪ್ ನೀತಿ:

ಹಳೆಯ, ಹೆಚ್ಚಿನ ಮಾಲಿನ್ಯ ಉಂಟುಮಾಡುವ ಹಾಗೂ ಯಾಂತ್ರಿಕವಾಗಿ ಅನರ್ಹವಾಗಿರುವ ವಾಹನಗಳನ್ನು ಹಂತ ಹಂತವಾಗಿ ರಸ್ತೆಗಳಿಂದ ತೆರವುಗೊಳಿಸುವ ಉದ್ದೇಶದಿಂದ ವಾಹನ ಸ್ಕ್ರಾಪ್ ನೀತಿ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಮತ್ತು ತೆರಿಗೆ ರಿಯಾಯಿತಿ ಸೇರಿದಂತೆ ಲಭ್ಯವಿರುವ ಪ್ರೋತ್ಸಾಹಕ ಕ್ರಮಗಳನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡುವ ಕುರಿತು ಚರ್ಚಿಸಲಾಯಿತು.

ಹೊರ ವರ್ತುಲ ರಸ್ತೆಯ ತಂತ್ರಜ್ಞಾನ ವಲಯಗಳಲ್ಲಿ ಸಂಚಾರ ನಿರ್ವಹಣೆ ಸುಧಾರಿಸುವ ನಿಟ್ಟಿನಲ್ಲಿ ಬಿಎಂಟಿಸಿ ಸೇವೆ ವಿಸ್ತರಣೆ, ಮೆಟ್ರೊ ನಿಲ್ದಾಣಗಳಿಂದ ತಂತ್ರಜ್ಞಾನ ಉದ್ಯಾನಗಳಿಗೆ ಪೂರಕ ಬಸ್ ಸೇವೆ, ಗರಿಷ್ಠ ಸಂಚಾರದ ಅವಧಿಯಲ್ಲಿ ಬಸ್‍ಗಳ ಸಂಖ್ಯೆಯನ್ನು ಹೆಚ್ಚಿಸುವುದು ಹಾಗೂ ಸಂಸ್ಥೆಗಳ ಹಂಚಿಕೆ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗೃಹ ಇಲಾಖೆ ಅಪರ ಕಾರ್ಯದರ್ಶಿ ರಾಜೇಂದರ್ ಸಿಂಗ್ ಕಠಾರಿಯ, ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಸಾರಿಗೆ ಆಯುಕ್ತೆ ಡಾ.ಸೆಲ್ವಮಣಿ, ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಬಿ.ಶಿವಕುಮಾರ್, ಬಿಎಂಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ ಮೂರ್ತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಜಂಟಿ ಆಯುಕ್ತ ಕಾರ್ತೀಕ್ ರೆಡ್ಡಿ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags

traffic violationKarnataka GovtPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X