Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಸ್ಲಿಂ ಮತದಾರರ ಹೆಸರು ಅಳಿಸಲು ನಕಲಿ...

ಮುಸ್ಲಿಂ ಮತದಾರರ ಹೆಸರು ಅಳಿಸಲು ನಕಲಿ ʼಫಾರ್ಮ್ 7ʼ ಸಲ್ಲಿಕೆ ಆರೋಪ; 10 ಮಂದಿಯ ವಿರುದ್ಧದ ಮೂರು ಪ್ರಕರಣಗಳ ತನಿಖೆಗೆ ಹೈಕೋರ್ಟ್ ತಡೆ

ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ18 Nov 2026 5:52 PM IST
share
ಮುಸ್ಲಿಂ ಮತದಾರರ ಹೆಸರು ಅಳಿಸಲು ನಕಲಿ ʼಫಾರ್ಮ್ 7ʼ ಸಲ್ಲಿಕೆ ಆರೋಪ; 10 ಮಂದಿಯ ವಿರುದ್ಧದ ಮೂರು ಪ್ರಕರಣಗಳ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಮುಸ್ಲಿಂ ಮತದಾರರ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ನಕಲಿ ಸಹಿ ಮತ್ತು ಸುಳ್ಳು ಮಾಹಿತಿಯೊಂದಿಗೆ ಚುನಾವಣಾ ಆಯೋಗದ ಫಾರ್ಮ್ 7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 10 ಮಂದಿಯ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳ ಪೊಲೀಸ್ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ಈ ಅರ್ಜಿಗಳ ಸಿಂಧುತ್ವದ ಬಗ್ಗೆ ಮೊದಲು ಚುನಾವಣಾ ನೋಂದಣಾಧಿಕಾರಿ ವಿಚಾರಣೆ ನಡೆಸಬೇಕು. ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪೊಲೀಸ್ ತನಿಖೆ ಮುಂದುವರಿಯಬಾರದು ಎಂದು ನ್ಯಾಯಪೀಠ ಸೂಚಿಸಿದೆ ಎಂದು 'bar and bench' ವರದಿ ಮಾಡಿದೆ.

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೊಳಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಲು ಅಥವಾ ಈಗಾಗಲೇ ಪಟ್ಟಿಯಲ್ಲಿರುವ ಹೆಸರನ್ನು ಅಳಿಸುವಂತೆ ಕೋರಲು ಫಾರ್ಮ್ 7 ಬಳಸಲಾಗುತ್ತದೆ. ಇದೇ ರೀತಿಯ ಇತರ ಎರಡು ಪ್ರಕರಣಗಳ ತನಿಖೆಗೂ ಹೈಕೋರ್ಟ್ ಅಕ್ಟೋಬರ್‌ ನಲ್ಲಿ ತಡೆ ನೀಡಿತ್ತು.

ಮಂಗಳವಾರದ ವಿಚಾರಣೆ ವೇಳೆ, ಫಾರ್ಮ್ 7 ಅರ್ಜಿಗಳ ಆಧಾರದಲ್ಲಿ ಕೈಗೊಂಡ ನಿರ್ಧಾರಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಂರಕ್ಷಿಸಿಡುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತು. 1960ರ ಮತದಾರರ ನೋಂದಣಿ ನಿಯಮಗಳ ಅಡಿಯಲ್ಲಿ ಅರ್ಜಿಗಳ ಸಿಂಧುತ್ವದ ಕುರಿತು ಶಾಸನಬದ್ಧ ವಿಚಾರಣೆ ಪೂರ್ಣಗೊಳ್ಳಬೇಕು ಎಂದು ನ್ಯಾಯಪೀಠ ಹೇಳಿತು.

ಸುಳ್ಳು ಮಾಹಿತಿ ನೀಡುವುದು, ನಕಲಿ ಸಹಿಗಳನ್ನು ಬಳಸುವುದು ಮತ್ತು ಅವುಗಳ ಆಧಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಫಾರ್ಮ್ 7 ಅರ್ಜಿಗಳನ್ನು ಸಲ್ಲಿಸಿರುವ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಕರಣಗಳ ಪೊಲೀಸ್ ತನಿಖೆಗೆ ತಡೆ ನೀಡುವಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ರಾಜ್ಯ ಸರಕಾರ ವಿರೋಧಿಸಿತ್ತು. ಮತದಾನದ ಹಕ್ಕು ಅತ್ಯಂತ ಮೌಲ್ಯಯುತವಾದುದು. ನಕಲಿ ಮಾಹಿತಿ ಮತ್ತು ಸಹಿಗಳನ್ನು ಬಳಸಿ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನಗಳಿಗೆ ಅವಕಾಶ ನೀಡಬಾರದು ಎಂದು ಸರಕಾರ ವಾದಿಸಿತ್ತು.

ಇನ್ನೊಂದೆಡೆ, ರಾಜಕೀಯ ಪಕ್ಷಗಳ ಪರವಾಗಿ ಮತದಾರರ ತಂಡಗಳು ಫಾರ್ಮ್ 7 ಅರ್ಜಿಗಳನ್ನು ಸಲ್ಲಿಸಲು ಅರ್ಹವಾಗಿವೆ ಎಂದು ಅರ್ಜಿದಾರರು ವಾದಿಸಿದ್ದರು. ಅರ್ಜಿಗಳಲ್ಲಿನ ಮಾಹಿತಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸುವ ಜವಾಬ್ದಾರಿ ಚುನಾವಣಾ ನೋಂದಣಾಧಿಕಾರಿಯದ್ದಾಗಿದೆ ಎಂದೂ ಅವರು ತಿಳಿಸಿದ್ದರು.

ಮತದಾರರ ಪಟ್ಟಿ ಸಿದ್ಧಪಡಿಸುವ ಮತ್ತು ಪರಿಷ್ಕರಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗದ ಬೂತ್ ಮಟ್ಟದ ಅಧಿಕಾರಿಗಳಿಗೆ ನೆರವಾಗಲು ರಾಜಕೀಯ ಪಕ್ಷಗಳು ಆಯಾ ಮತಗಟ್ಟೆ ವ್ಯಾಪ್ತಿಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸುತ್ತವೆ.

ಹಕ್ಕುಗಳು ಮತ್ತು ಆಕ್ಷೇಪಣೆಗಳ ಸಲ್ಲಿಕೆ, ವಿಚಾರಣೆ ಹಾಗೂ ಅವುಗಳ ಪರಿಶೀಲನೆಗೆ ಸಂಬಂಧಿಸಿದ 1960ರ ಮತದಾರರ ನೋಂದಣಿ ನಿಯಮಗಳನ್ನು ನ್ಯಾಯಾಲಯ ಪರಿಶೀಲಿಸಿತು.

ತಿಳಿದಿದ್ದರೂ ಸುಳ್ಳು ಲಿಖಿತ ಘೋಷಣೆ ಸಲ್ಲಿಸಿದವರಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ನಿಯಮಗಳಲ್ಲಿ ಅವಕಾಶವಿದೆ ಎಂದು ನ್ಯಾಯಪೀಠ ಗಮನಿಸಿತು.

ಆರೋಪಿತ ಅಪರಾಧಗಳ ಕುರಿತು ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸುವ ಮೊದಲು ಚುನಾವಣಾ ನೋಂದಣಾಧಿಕಾರಿ ವಿಚಾರಣೆ ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಹೇಳಿದೆ.

2025ರಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಮೊದಲ ಹಂತವನ್ನು ನಡೆಸಲಾಗಿತ್ತು. 2025ರ ಅಂತ್ಯದಲ್ಲಿ ಮತ್ತು 2026ರ ಮೊದಲಾರ್ಧದಲ್ಲಿ ನಡೆದ ಎರಡನೇ ಹಂತದಲ್ಲಿ ಈ ಪ್ರಕ್ರಿಯೆಯನ್ನು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲಾಯಿತು. ಪ್ರಸ್ತುತ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರನೇ ಹಂತದ ಪರಿಷ್ಕರಣೆ ನಡೆಯುತ್ತಿದೆ.

SIR ಪ್ರಕ್ರಿಯೆ ಆರಂಭವಾದಾಗಿನಿಂದಲೂ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಆತಂಕ ವ್ಯಕ್ತವಾಗಿದೆ. ಇದು ಚುನಾವಣಾ ಫಲಿತಾಂಶಗಳ ಮೇಲೆಯೂ ಪರಿಣಾಮ ಬೀರಬಹುದು ಎಂಬ ಕಳವಳಗಳಿವೆ ಎಂದು 'scroll.in' ವರದಿ ಮಾಡಿದೆ.

ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಕಾನೂನುಬದ್ಧತೆಯನ್ನು ಎತ್ತಿಹಿಡಿದಿತ್ತು. ಆದರೆ, ಒಬ್ಬ ವ್ಯಕ್ತಿ ಭಾರತೀಯ ಪ್ರಜೆಯೇ ಅಥವಾ ಅಲ್ಲವೇ ಎಂಬುದನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

Tags

Karnataka HCForm 7Muslim voters
share
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.

Next Story
X