Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ...

ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಆರೋಪ | ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ14 Feb 2025 2:31 PM IST
share
ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಆರೋಪ | ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಆರೋಪ ಸಂಬಂಧ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿ ಆದೇಶಿಸಿದೆ ಎಂದು kannada.barandbench ವರದಿ ಮಾಡಿದೆ.

ಬೆಂಗಳೂರಿನ ಎಸ್‌.ಜೆ.ಪಾರ್ಕ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಹೆಚ್ಚುವರಿ ವಿಶೇಷ ಸರಕಾರಿ ಅಭಿಯೋಜಕ ಬಿ.ಎನ್‌.ಜಗದೀಶ್‌ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೊಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, “ಅಪರಾಧ ಏನು ಎಂಬುದು ನ್ಯಾಯಾಲಯಕ್ಕೆ ತಿಳಿಯಬೇಕಿದೆ? ಅಪರಾಧ ಏನೇನೂ ಇಲ್ಲ. ಇದು ಕಾನೂನಿನ ದುರ್ಬಳಕೆ” ಎಂದು ಅರ್ಜಿ ಪುರಸ್ಕರಿಸಲಾಗಿದ್ದು, ಪ್ರಕರಣ ರದ್ದುಪಡಿಸಲಾಗಿದೆ ಎಂದು ಹೇಳಿತು.

ಹಿಂದಿನ ವಿಚಾರಣೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು “ಕ‍ಣ್ಣು ತಪ್ಪಿನಿಂದ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ತಕ್ಷಣ ಅದನ್ನು ಡಿಲೀಟ್‌ ಮಾಡಲಾಗಿದೆ. ಅರ್ನಬ್‌ ಗೋಸ್ವಾಮಿ ಅವರು ರಿಪಬ್ಲಿಕ್‌ ಕನ್ನಡ ವಾಹಿನಿಯ ಕಾರ್ಯಕಾರಿ ನಿರ್ದೇಶಕರಾಗಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್‌ 505 (2) ಪ್ರಕರಣ ದಾಖಲಿಸಲಾಗಿದೆ. ಇದನ್ನೂ ದೂರುದಾರರೆ ಸೂಚಿಸಿದ್ದಾರೆ” ಎಂದು ಆಕ್ಷೇಪಿಸಿದ್ದರು.

ಬೆಂಗಳೂರಿನ ಎಂಜಿ ರಸ್ತೆ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರಿಗಾಗಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಆಂಬ್ಯುಲೆನ್ಸ್ ಹಾದುಹೋಗಲು ಅನುಮತಿಸಲಾಗಿಲ್ಲ ಎಂದು ಆರೋಪಿಸಿ ಮಾರ್ಚ್ 27 ರಂದು ರಿಪಬ್ಲಿಕ್ ಟಿವಿ ಕನ್ನಡದಲ್ಲಿ ಪ್ರಕಟವಾದ ವರದಿಗೆ ಸಂಬಂಧಿಸಿ ಈ ಪ್ರಕರಣವನ್ನು ದಾಖಲಿಸಲಾಗಿತ್ತು. ಆದಾಗ್ಯೂ, ಆ ಸಮಯದಲ್ಲಿ ಮುಖ್ಯಮಂತ್ರಿ ಮೈಸೂರಿನಲ್ಲಿದ್ದರು ಎಂದು ಪ್ರತಿಪಾದಿಸಿ ಕಾಂಗ್ರೆಸ್ ಸದಸ್ಯ ರವೀಂದ್ರ ಎಂಬವರು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು.

Tags

High CourtArnab GoswamiKarnatakasiddaramiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X