ಸುಬ್ಬಯ್ಯಶೆಟ್ಟಿ ನಿಧನಕ್ಕೆ ಸದನದಲ್ಲಿ ಸಂತಾಪ

ಮಾಜಿ ಸಚಿವ ಬಿ.ಸುಬ್ಬಯ್ಯಶೆಟ್ಟಿ
ಬೆಂಗಳೂರು: ರಾಜ್ಯದ ಮಾಜಿ ಸಚಿವ ಬಿ.ಸುಬ್ಬಯ್ಯಶೆಟ್ಟಿ ನಿಧನ ಹಿನ್ನೆಲೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಂಗಳವಾರ ವಿಧಾನಸಭೆಯಲ್ಲಿ ಸದನ ಆರಂಭವಾಗುತ್ತಿದ್ದಂತೆಯೇ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮಾಜಿ ಸಚಿವ ಸುಬ್ಬಯ್ಯ ಶೆಟ್ಟಿ ನಿಧನ ವಿಚಾರವನ್ನು ಸದನಕ್ಕೆ ತಿಳಿಸಿ, ಸಂತಾಪ ಸೂಚನಾ ನಿರ್ಣಯ ಮಂಡಿಸಿದರು.
ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದರು. ನಂತರ ಸದನದಲ್ಲಿ ಒಂದು ನಿಮಿಷ ಮೌನ ಆಚರಿಸಿ ಮಾಜಿ ಸಚಿವ ಬಿ.ಸುಬ್ಬಯ್ಯಶೆಟ್ಟಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Next Story





