Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Karnataka S I R | ವೆಬ್‌ಸೈಟ್‌ನಲ್ಲಿ...

Karnataka S I R | ವೆಬ್‌ಸೈಟ್‌ನಲ್ಲಿ ಕಾಣದ ಎಸ್‌ಐಆರ್‌ ಕರಡು ಪಟ್ಟಿ!

ವಾರ್ತಾಭಾರತಿವಾರ್ತಾಭಾರತಿ24 Aug 2026 10:40 AM IST
share
Karnataka S I R | ವೆಬ್‌ಸೈಟ್‌ನಲ್ಲಿ ಕಾಣದ ಎಸ್‌ಐಆರ್‌ ಕರಡು ಪಟ್ಟಿ!

ಬೆಂಗಳೂರು,ಆ.24: ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಯ ಕರಡು ಮತದಾರರ ಪಟ್ಟಿಯನ್ನು ಸೋಮವಾರ(ಆ.24) ರಂದು ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದ್ದರೂ, ಸೋಮವಾರ ಬೆಳಗ್ಗೆಯವರೆಗೂ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಕರಡು ಪಟ್ಟಿ ಲಭ್ಯವಾಗಿಲ್ಲ.

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾರಿ ಸಂಖ್ಯೆಯ ಮತದಾರರನ್ನು ಎಎಸ್‌ಡಿಡಿಒ (ASDDO), ಅನ್‌ಮ್ಯಾಪ್ಡ್‌ ಹಾಗೂ ಲಾಜಿಕಲ್‌ ಡಿಸ್ಕ್ರೆಪೆನ್ಸಿ ವಿಭಾಗಗಳಲ್ಲಿ ಗುರುತಿಸಲಾಗಿರುವ ಹಿನ್ನೆಲೆಯಲ್ಲಿ ಕರಡು ಪಟ್ಟಿಯ ಪ್ರಕಟಣೆಗೆ ಮತದಾರರು ಕಾತುರದಿಂದ ಕಾಯುತ್ತಿದ್ದಾರೆ. ಕರಡು ಪಟ್ಟಿ ಪ್ರಕಟವಾದ ಬಳಿಕವೇ ಮತದಾರರು ತಮ್ಮ ಹೆಸರು ಮತಪಟ್ಟಿಯಲ್ಲಿ ಮುಂದುವರಿದಿದೆಯೇ, ಯಾವುದೇ ಬದಲಾವಣೆ ಮಾಡಲಾಗಿದೆಯೇ ಅಥವಾ ಹೆಸರು ಕೈಬಿಡಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಾಗಲಿದೆ.

ಕರಡು ಪಟ್ಟಿ ಪ್ರಕಟವಾದ ನಂತರ ಆಕ್ಷೇಪಣೆ ಹಾಗೂ ಹಕ್ಕು ಸಲ್ಲಿಸಲು ಅವಕಾಶ ಇರಲಿದೆ. ಹೀಗಾಗಿ ಕರಡು ಪಟ್ಟಿ ಪ್ರಕಟಣೆಯಲ್ಲಿ ವಿಳಂಬವಾದರೆ, ಮತದಾರರಿಗೆ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ದೊರೆಯುವ ಸಮಯದ ಮೇಲೂ ಪರಿಣಾಮ ಬೀರಲಿದೆ.

ವಿಶೇಷವಾಗಿ ಎಸ್‌ಐಆರ್‌ ಸಂದರ್ಭದಲ್ಲಿ ಹೆಸರು, ವಿಳಾಸ ಹಾಗೂ ಮತಗಟ್ಟೆ ವಿವರಗಳಲ್ಲಿ ಬದಲಾವಣೆಗಳಾಗಿರುವ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಕರಡು ಪಟ್ಟಿಯಲ್ಲಿನ ಮಾಹಿತಿಯನ್ನು ಸಾರ್ವಜನಿಕವಾಗಿ ಪರಿಶೀಲಿಸಲು ಅವಕಾಶ ಕಲ್ಪಿಸುವುದು ಅತ್ಯಂತ ಮಹತ್ವದ್ದಾಗಿದೆ.

ಚುನಾವಣಾ ಆಯೋಗದ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಒಪ್ಪಿಗೆಗಾಗಿ ಕಳುಹಿಸಿಕೊಡಲಾಗಿದೆ. ಸೋಮವಾರ ಬೆಳಗ್ಗೆ 11.30 ಗಂಟೆಯ ಬಳಿಕ ಪಟ್ಟಿ ಪ್ರಕಟವಾಗಲಿದೆ. ಅಲ್ಲದೇ ಮಧ್ಯಾಹ್ನ 3 ಗಂಟೆಗೆ ಮುಖ್ಯ ಚುನಾವಣಾಧಿಕಾರಿ ಪತ್ರಿಕಾಗೋಷ್ಠಿ ನಡೆಸಿ ಉಳಿದ ಎಲ್ಲ ವಿವರಗಳನ್ನು ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Tags

KarnatakaS I Rwebsite
share
ವಾರ್ತಾಭಾರತಿ
ವಾರ್ತಾಭಾರತಿ
Next Story
X