Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಜಾಣಗೆರೆ ವೆಂಕಟರಾಮಯ್ಯಗೆ ʼಗೌರವ ಪ್ರಶಸ್ತಿʼ, ಜಿ.ಎನ್.ಮೋಹನ್‌ಗೆ ʼಸಾಹಿತ್ಯಶ್ರೀʼ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ8 March 2025 2:47 PM IST
share
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ʼವಾರ್ಷಿಕ ಗೌರವ ಪ್ರಶಸ್ತಿʼ ಮತ್ತು ʼಸಾಹಿತ್ಯಶ್ರೀ ಪ್ರಶಸ್ತಿʼಗಳು ಪ್ರಕಟಗೊಂಡಿದ್ದು, ಐವರು ವಾರ್ಷಿಕ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಐವರು ಹಿರಿಯ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೆ ವರ್ಷದ ಗೌರವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 7ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಿದೆ.

2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರು : ಡಾ.ಸಿ.ವೀರಣ್ - ಬೆಂಗಳೂರು, ಡಾ.ಶ್ರೀರಾಮ ಇಟ್ಟಣ್ಣವರ- ಬಾಗಲಕೋಟೆ, ಜಾಣಗೆರೆ ವೆಂಕಟರಾಮಯ್ಯ–ತುಮಕೂರು, ಎ.ಎಂ.ಮದರಿ –ಕೊಪ್ಪಳ, ಡಾ.ಸಬಿಹಾ ಭೂಮಿಗೌಡ- ಮಂಗಳೂರು ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಾರ್ಷಿಕ ಗೌರವ ಪ್ರಶಸ್ತಿಯು 50 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್‌ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಿದೆ.

2023ನೇ ವರ್ಷದ 'ಸಾಹಿತ್ಯಶ್ರೀ' ಪ್ರಶಸ್ತಿ ಪುರಸ್ಕೃತರು : ಡಾ.ಎಂ.ಎಸ್.ಶೇಖರ್ - ಮೈಸೂರು, ಜಿ.ಎನ್.ಮೋಹನ್, ಬೆಂಗಳೂರು, ಡಾ.ಟಿ.ಎಸ್.ವಿವೇಕಾನಂದ – ತುಮಕೂರು, ಡಾ.ಜಯಶ್ರೀ ಕಂಬಾರ – ಬೆಳಗಾವಿ, ಪ್ರೊ.ನಿಜಲಿಂಗಪ್ಪ ಯಮನಪ್ಪ ಮಟ್ಟಿಹಾಳ – ಧಾರವಾಡ, ಡಾ.ಬಾಲಗುರುಮೂರ್ತಿ-ಕೋಲಾರ, ಪ್ರೊ.ಶಿವಗಂಗಾ ರುಮ್ಮ – ಕಲಬುರಗಿ, ಡಾ.ರೀಟಾ ರೀನಿ - ಬೆಂಗಳೂರು, ಡಾ.ಕಲೀಮ್ ಉಲ್ಲಾ- ಶಿವಮೊಗ್ಗ, ಡಾ.ವೆಂಕಟಗಿರಿ ದಳವಾಯಿ–ಬಳ್ಳಾರಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

'ಸಾಹಿತ್ಯಶ್ರೀ' ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ.

2022ನೇ ವರ್ಷದ ಪುಸ್ತಕ ಬಹುಮಾನ ವಿಜೇತರು: ರಾಮು ಮೈಸೂರು-ವಿಷ್ಣು ಕ್ರಾಂತಿ ಮತ್ತು ಇತರ ಪದ್ಯಗಳು, ರೇವಣ್ಣ ಸಿದ್ದಪ್ಪ ಜಿ. ಆರ್.-ಬಾಳ ನೌಕೆಗೆ ಬೆಳಕಿನ ದೀಪ, ಸುಮಂಗಲಾ ಎಸ್. ಮಮ್ಮಿಗಟ್ಟಿ-ಬಯಲ ಬೆರಗು, ದಯಾನಂದ-ಬುದ್ಧನ ಕಿವಿ, ಬಿದರಹಳ್ಳಿ ನರಸಿಂಹಮೂರ್ತಿ-ಮಾಯಾದಂಡ, ಶ್ರೀಹರ್ಷ ಸಾಲಿಮಠ-ಡಾರ್ಕ್ ಹೂಮರ್, ಚಿಂತಾಮಣಿ ಕೊಡ್ಲೆಕೆರ-ಗಿಂಡಿಯಲ್ಲಿ ಗಂಗೆ, ಪಿ.ರಾಮಯ್ಯ-ನಾನು ಹಿಂದೂ ರಾಮಯ್ಯ ಅರವತ್ತು ವರ್ಷಗಳ ಅನುಭವ ಕಥನ, ಡಾ.ಚನ್ನಪ್ಪ ಕಟ್ಟಿ-ಕುಯಿಲು, ಸಂತೆಬೆನ್ನೂರು ಫೈಜ್ಯಟ್ರಾಜ್-ಮಗಳಿಗೆ ಹೇಳಿದ ಕಥೆಗಳು, ಡಾ.ಸುಕನ್ಯಾ ಸೊನಗಹಳ್ಳಿ-ಬೆಳೆ ರೋಗಗಳು, ಕೀಟಗಳು ಮತ್ತು ಅವುಗಳ ನಿರ್ವಹಣೆ, ಹೆಚ್.ಎನ್. ನಾಗಮೋಹನ ದಾಸ್-ಸಂವಿಧಾನ ಮತ್ತು ವಚನಗಳು, ಡಾ. ಶೈಲಜಾ ಇಂ.ಹಿರೇಮಠ-ನಿರೂಪಣೆಯಾಚೆಗೆ, ಅನಿಲ ಸಿ.ಹೊಸಮನಿ-ಡಾ. ಅಂಬೇಡ್ಕ‌ರ್ ಸಹವಾಸದಲ್ಲಿ, ರಾಜಾರಾಂ ತಲ್ಲೂರು-ಕರಿಡಬ್ಬಿ, ಪಿ.ವಿ.ನಂಜರಾಜ ಅರಸ್-ಟೀಪೂ ಮಾನ್ಯತೆ ಸಿಗದ ಸುಲ್ತಾನ್ ಅಂದು-ಇಂದು, ಮಲ್ಲಿಕಾರ್ಜುನ ಶೆಲ್ಲಿಕೇರಿ-ದೀಡೆಕರೆ ಜಮೀನು,ಪೈಯನೂರು ಕುನ್ದ್ರಿರಾಮನ್ ಮತ್ತು ಮೋಹನ ಕುಂಟರ್-ಚಾರು ವಸಂತ

2022ನೇ ವರ್ಷದ ಅಕಾಡೆಮಿಯ ದತ್ತಿ ಬಹುಮಾನ ಪುರಸ್ಕೃತರು: ಎಚ್.ಎಸ್.ಅನುಪಮಾ, ಫಾತಿಮಾ ರಲಿಯಾ, ಶಾರದಾ ವಿ. ಮೂರ್ತಿ, ವಿನಯಾ ನಂದಿಹಾಳ, ವಿಕ್ರಮ ವಿಸಾಜಿ, ಸುಶ್ರುತ್ ಜೆ.ಆರ್., ಅಕ್ಷತಾ ಕೃಷ್ಣಮೂರ್ತಿ, ಕೃಷ್ಣಮೂರ್ತಿ ಚಂದರ್, ಡಾ. ಶ್ರೀಧರ ಹೆಗಡೆ ಭದ್ರನ್ ಅವರು ದತ್ತಿ ಬಹುಮಾನಕ್ಕೆ ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X