ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸದಸ್ಯರ ನೇಮಕ

ಬೆಂಗಳೂರು : ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಐವರು ಸದಸ್ಯರನ್ನು ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಮೈಸೂರಿನ ವಕೀಲ ಶಿವಣ್ಣ ಗೌಡ, ಧಾರವಾಡ ಜಿಲ್ಲೆಯ ನಿವೃತ್ತ ಪ್ರಾಂಶುಪಾಲ ಡಾ.ಸಿ.ಎಂ.ಕುಂದಗೋಳ, ಕಲಬುರಗಿ ಜಿಲ್ಲೆಯ ವಕೀಲ ಚಂದ್ರಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಯ ನಿವೃತ್ತ ಐಎಫ್‍ಎಸ್ ಅಧಿಕಾರಿ ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ ಕುಲಾಯಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
Next Story





