Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಸಿರಿಧಾನ್ಯದಿಂದ ಮೈಕ್ರೋ ಚಿಪ್ ವರೆಗೆʼ:...

ʼಸಿರಿಧಾನ್ಯದಿಂದ ಮೈಕ್ರೋ ಚಿಪ್ ವರೆಗೆʼ: ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

ವಾರ್ತಾಭಾರತಿವಾರ್ತಾಭಾರತಿ22 Jan 2026 11:22 PM IST
share
ʼಸಿರಿಧಾನ್ಯದಿಂದ ಮೈಕ್ರೋ ಚಿಪ್ ವರೆಗೆʼ: ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

ಬೆಂಗಳೂರು: ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಜ.26ರಂದು ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋ ಚಿಪ್) ಎನ್ನುವ ಸ್ತಬ್ಧಚಿತ್ರವನ್ನು ಕರ್ನಾಟಕವು ಪ್ರದರ್ಶಿಸುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಕರ್ನಾಟಕದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಇಲಾಖೆಯು ಪ್ರತಿವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಇಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ ಎಂದು ತಿಳಿಸಿದ್ದಾರೆ.

ದಿಲ್ಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಹೇಳಿದ್ದಾರೆ.

2026ರ ದಿಲ್ಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ವಾರ್ತಾ ಇಲಾಖೆಯು ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ, ಕರ್ನಾಟಕ ಪುಷ್ಪ ವೈಭವ, ಹಲಗಲಿ ಬೇಡರು, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್‍ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸ್ತಬ್ಧಚಿತ್ರದಲ್ಲಿ ಏನೇನಿದೆ?

ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ. ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್‍ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ. ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ. ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸಕ್ರ್ಯೂಟ್‍ಗಳ ಮಧ್ಯೆ ರೋಬೋಟ್‍ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ ಎಂದು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್.ಎಂ ನಿಂಬಾಳ್ಕರ್ ತಿಳಿಸಿದ್ದಾರೆ.

Tags

Karnataka tableauRepublic Day Parade 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X