Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ...

ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ ತೈಲೋತ್ಪನ್ನಗಳ ಮೇಲೆ ಕರ್ನಾಟಕ ವಿಧಿಸುತ್ತಿರುವ ತೆರಿಗೆ ಕಡಿಮೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Jun 2024 5:07 PM IST
share
ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ ತೈಲೋತ್ಪನ್ನಗಳ ಮೇಲೆ ಕರ್ನಾಟಕ ವಿಧಿಸುತ್ತಿರುವ ತೆರಿಗೆ ಕಡಿಮೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ.29.84ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ.18.44 ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟನೆ ನೀಡಿರುವ ಮುಖ್ಯಮಂತ್ರಿಗಳು, "ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) ಶೇ.25 ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ ಶೇ.21 ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ" ಎಂದು ಹೇಳಿದ್ದಾರೆ.

ʼಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆʼ ಎಂದರು.

"ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು" ಎಂದು ಹೇಳಿದ್ದಾರೆ.

ʼಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು. ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆʼ ಎಂದು ತಿಳಿಸಿದ್ದಾರೆ.

ʼಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕುʼ ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X