Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು: ನಾಮ‌ಫಲಕಗಳಲ್ಲಿ ಕನ್ನಡಕ್ಕೆ...

ಬೆಂಗಳೂರು: ನಾಮ‌ಫಲಕಗಳಲ್ಲಿ ಕನ್ನಡಕ್ಕೆ ಆಗ್ರಹಿಸಿ ಕರವೇ ವತಿಯಿಂದ ಪ್ರತಿಭಟನೆ

ಹಲವು ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ27 Dec 2023 2:01 PM IST
share
  • ಬೆಂಗಳೂರು: ನಾಮ‌ಫಲಕಗಳಲ್ಲಿ ಕನ್ನಡಕ್ಕೆ ಆಗ್ರಹಿಸಿ ಕರವೇ ವತಿಯಿಂದ ಪ್ರತಿಭಟನೆ
  • ಬೆಂಗಳೂರು: ನಾಮ‌ಫಲಕಗಳಲ್ಲಿ ಕನ್ನಡಕ್ಕೆ ಆಗ್ರಹಿಸಿ ಕರವೇ ವತಿಯಿಂದ ಪ್ರತಿಭಟನೆ
  • ಬೆಂಗಳೂರು: ನಾಮ‌ಫಲಕಗಳಲ್ಲಿ ಕನ್ನಡಕ್ಕೆ ಆಗ್ರಹಿಸಿ ಕರವೇ ವತಿಯಿಂದ ಪ್ರತಿಭಟನೆ

ಬೆಂಗಳೂರು, ಡಿ.27: ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ನಡೆಸಿದ ಜಾಗೃತಿ ಮೆರವಣಿಗೆ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಧವಾರ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ ಟೋಲ್‌ ಗೇಟ್‌ನಿಂದ ಆರಂಭವಾದ ಬಹೃತ್ ಪ್ರತಿಭಟನಾ ಮೆರವಣಿಗೆಯಲ್ಲಿ ಕಾರ್ಯಕರ್ತರು ಅನ್ಯಭಾಷೆಯ ನಾಮಫಲಕ ತೆರವುಗೊಳಿಸುವಂತೆ ಘೋಷಣೆ ಕೂಗಿದರು.

ಬೆಂಗಳೂರಿನ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಇರಲೇಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಬರೀ ಇಂಗ್ಲಿಷ್ ಹಾಗೂ ಹಿಂದಿ ನಾಮ‌ಫಲಕಗಳಿದ್ದ ಹೋಟೆಲ್, ವಾಣಿಜ್ಯ ಕಟ್ಟಡಗಳ ಬ್ಯಾನರ್, ಪೋಸ್ಟರ್ ಗಳನ್ನು ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ಟಿ.ಎ.ನಾರಾಯಣಗೌಡ,ರಾಜಧಾನಿ ಬೆಂಗಳೂರು ಕನ್ನಡಿಗರ ಕೈತಪ್ಪಿ ಹೋಗುವ ಸ್ಥಿತಿಯಲ್ಲಿದೆ. ಬೇರೆ ರಾಜ್ಯಗಳಿಂದ ಬಂದ ಹಿಂದಿ ಭಾಷಿಕರು ಕನ್ನಡ ಬಳಸದೆ ಧಿಮಾಕು ಪ್ರದರ್ಶನ ಮಾಡುತ್ತಿದ್ದಾರೆ. ಅದಕ್ಕಾಗಿ ಅವರಿಗೆ ಎಚ್ಚರಿಕೆ ನೀಡುವುದಕ್ಕಾಗಿ ಈ ಮೆರವಣಿಗೆ ಎಂದು ಹೇಳಿದರು.

ನಾನು ನಮ್ಮ ಕಾರ್ಯಕರ್ತರಿಗೆ ಒಂದು ಸಂದೇಶ ಕೊಡುತ್ತಿದ್ದೇನೆ. ನಾನು ಬಂಧನಕ್ಕೆ ಒಳಗಾದರೂ ನೀವು ಯಾರು ಹೋರಾಟದಿಂದ ಹಿಂದೆ ಸರಿಯಬೇಡಿ. ಪೊಲೀಸ್ ಇಲಾಖೆ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರವೇ ಕಾರ್ಯಕರ್ತರು ಇಡೀ ಬೆಂಗಳೂರಿಗೆ ಏನು ಮಾಡುತ್ತಾರೋ ಎಂಬ ಭಯ ಸರ್ಕಾರ ಹಾಗೂ ಪೊಲೀಸರಿಗೆ ಕಾಡುತ್ತಿದೆ. ಪೊಲೀಸರು ಮತ್ತು ಜನರು ಜಾಗೃತಿ ರ‍್ಯಾಲಿ ಮಾಡಲು ಅವಕಾಶ ಕೊಟ್ಟರೆ ಬೆಂಗಳೂರು ಸುರಕ್ಷಿತವಾಗಿ ಇರುತ್ತದೆ. ನಮ್ಮನ್ನು ಕೆಣಕುವುದು, ಕೆರಳಿಸುವುದು ಮಾಡಿದರೆ ಹೋರಾಟದ ರೂಪ ಬದಲಾಗುತ್ತದೆ ಎಂದರು.

ಯುಬಿ ಸಿಟಿ ಮಾಲ್ ಗೆ ನುಗ್ಗಿದ ಕರವೇ ಕಾರ್ಯಕರ್ತರು ಇಂಗ್ಲಿಷ್ ಬರಹಗಳಿಗೆ ಮಸಿ ಬಳಿದು ಆಕ್ರೋಶ ಹೊರಹಾಕಿದರು. ಮೆರವಣಿಯಲ್ಲಿ ಕೆಲವು ಕಡೆ ಲೈಟಿಂಗ್ ಬೋರ್ಡ್ ಕೂಡ ಒಡೆದು ಹಾಕಿ, ಹತ್ತಾರು ಅಡಿಯ ನಾಮಫಲಕ ಬೋರ್ಡ್ ಗಳನ್ನು, ಫಲಕಗಳನ್ನು ಕೀಳಲು ಯತ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X