Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವಾಡಿಗರಹಟ್ಟಿ | ಸಂತ್ರಸ್ತ ಕುಟುಂಬಗಳ...

ಕಾವಾಡಿಗರಹಟ್ಟಿ | ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಉದ್ಯೋಗ, ವಸತಿ: ಸಿಎಂ ಭರವಸೆ

ಕಲುಷಿತ ನೀರು ಕುಡಿದು ಮೃತಪಟ್ಟ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ6 Oct 2023 2:52 PM IST
share
ಕಾವಾಡಿಗರಹಟ್ಟಿ | ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಉದ್ಯೋಗ, ವಸತಿ: ಸಿಎಂ ಭರವಸೆ

ಚಿತ್ರದುರ್ಗ ಅ 6: ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ತ ಕುಟುಂಬಗಳ ಸದಸ್ಯರನ್ನು ಮಾತಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು.

ಸಂತ್ರಸ್ಥ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು.

ಶುದ್ದ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು.

ಮೊದಲೇ ಶುದ್ದ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿದೆ. ಬರ ಪೀಡಿತ ಜಿಲ್ಲೆಗಳ ಸಂಖ್ಯೆ ಹೆಚ್ಚುತ್ತಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ನಾವು NDRF ಅಡಿಯಲ್ಲಿ ಕೇಂದ್ರಕ್ಕೆ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಬಂದಿದ್ದು ನಾಳೆ ಚಿತ್ರದುರ್ಗಕ್ಕೂ ಬರಲಿದೆ ಎಂದು ವಿವರಿಸಿದರು.

ಇಂದು ಇಡೀ ದೇಶದಲ್ಲಿ ಬರಗಾಲದ ಸ್ಥಿತಿ ಇದೆ. ರಾಜ್ಯದಲ್ಲೂ ಬರ ಇದ್ದು ಕುಡಿಯುವ ನೀರು, ರಾಸುಗಳಿಗೆ ಮೇವು- ನೀರು ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉದ್ಯೋಗ ಸೃಷ್ಟಿ ಮಾಡಬೇಕು. ಕೆಲಸಕ್ಕಾಗಿ ವಲಸೆ ಹೋಗುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಸಿದ್ದೇನೆ ಎಂದರು.

ನಮ್ಮ ಸರ್ಕಾರ ಬಡವರ, ಮಧ್ಯಮ ವರ್ಗದವರ ಸಂಕಷ್ಟ ಬಗೆಹರಿಸುವ ಸಲುವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಸವಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X