ಕೆಸೆಟ್: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಸೆ.18 : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-25 (ಕೆಸೆಟ್)ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.24ರ ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಇದು ಕೊನೆ ವಿಸ್ತರಣೆಯಾಗಿದ್ದು, ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





