Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಇಎ : ಅ.3ಕ್ಕೆ ಕ್ಯಾಮರಾ...

ಕೆಇಎ : ಅ.3ಕ್ಕೆ ಕ್ಯಾಮರಾ ಕಣ್ಗಾವಲಿನಲ್ಲಿ ಪಿಎಸ್ಸೈ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ1 Oct 2024 6:56 PM IST
share
ಕೆಇಎ : ಅ.3ಕ್ಕೆ ಕ್ಯಾಮರಾ ಕಣ್ಗಾವಲಿನಲ್ಲಿ ಪಿಎಸ್ಸೈ ಪರೀಕ್ಷೆ

ಬೆಂಗಳೂರು : ಪೊಲೀಸ್ ಸಬ್ ಇನ್ಸ್‌ಪೆಕ್ಟರ್(402) ಹುದ್ದೆಗಳ ನೇಮಕಾತಿಗೆ ಅ.3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲ್ಬುರ್ಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಂಗಳೂರಿನಲ್ಲಿ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ.

ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂಥ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ.

ಕಮಾಂಡ್ ಸೆಂಟರ್: ಇಲ್ಲಿನ ಕೆಇಎ ಕಚೇರಿಯಲ್ಲಿ ರಾಜ್ಯಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿಯೂ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ.

ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದಾಗಿದೆ. ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ.

ಇಎನ್‍ಟಿ ವೈದ್ಯರ ನಿಯೋಜನೆ: ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ ಇಎನ್‍ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ನಿಗಾ ಇಡಲಿದ್ದಾರೆ.

ವಿಡಿಯೊ ಕಾನ್ಫರೆನ್ಸ್: ಪರೀಕ್ಷೆ ನಡೆಯುವ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ ಬಿಗಿ ಕ್ರಮಗಳ ಬಗ್ಗೆ ಈಗಾಗಲೇ ವಿವರಿಸಲಾಗಿದ್ದು, ಸಕಲ ಸಿದ್ಧತೆಗಳನ್ನು ಮಡಿಕೊಳ್ಳಲಾಗಿದೆ ಎಂದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X