Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ...

ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Jan 2024 3:54 PM IST
share
ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರವು ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ಇಂದು ದಾವಣಗೆರೆ ತಾಲ್ಲೂಕಿನ ಆನಗೋಡಿನ ಜಮಾಪುರ ಗ್ರಾಮದಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದರು. ಅಲ್ಲದೆ, ರೈತರಿಗೆ ಧೈರ್ಯ ಹೇಳಿದರು. ಮರುಳಸಿದ್ದಪ್ಪ ಅವರು ಬೆಳೆದ ಮೆಕ್ಕೆ ಜೋಳ ಸಂಪೂರ್ಣವಾಗಿ ನಾಶವಾಗಿದೆ. ಎಕರೆಗೆ 25ರಿಂದ 30 ಸಾವಿರ ಖರ್ಚು ಮಾಡಿದ್ದಾರೆ. ಮರುಳಸಿದ್ದಪ್ಪ ಮಾತ್ರವಲ್ಲದೆ, ಅವರ ಕುಟುಂಬಸ್ಥರಾದ ಸಿದ್ದಮ್ಮನ ಕಣ್ಣಲ್ಲೂ ನೀರನ್ನು ನೋಡಿದ್ದೀರಿ. ರೈತರ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರಕಾರ ಎಚ್ಚತ್ತುಕೊಂಡು ರೈತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ಪರಿಹಾರ ಮೊತ್ತವನ್ನು ಘೋಷಣೆ ಮಾಡಿದರೆ ಸಾಲದು. ಅದು ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳಂತೆ ಡಿಬಿಟಿ (ನೇರ ಸೌಲಭ್ಯ ವರ್ಗಾವಣೆ) ಮೂಲಕ ತಕ್ಷಣವೇ ರೈತರನ್ನು ತಲುಪುವಂತಾಗಬೇಕು ಎಂದು ತಿಳಿಸಿದರು.

ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಜೀ ಅವರು ಕಿಸಾನ್ ಸಮ್ಮಾನ್ ಯೋಜನೆಯಡಿ ಡಿಬಿಟಿ ಮೂಲಕ ಕೋಟ್ಯಂತರ ರೈತರಿಗೆ 6 ಸಾವಿರ ರೂಪಾಯಿ ಜಮಾ ಮಾಡುತ್ತಾರೆ. ಯಡಿಯೂರಪ್ಪ ಅವರು 4 ಸಾವಿರ ಕೊಡುತ್ತಿದ್ದರು. ಆದರೆ, ಅದನ್ನು ಸಿದ್ದರಾಮಯ್ಯ ಸರಕಾರ ಬಂದ್ ಮಾಡಿದೆ ಎಂದು ಆಕ್ಷೇಪಿಸಿದರು.

ಕೇಂದ್ರ ಸರಕಾರದ ಯೋಜನೆಗಳು ಮಧ್ಯವರ್ತಿಗಳಿಲ್ಲದೆ ನೇರವಾಗಿ ಬಡವರ ಖಾತೆಗೆ ತಲುಪುತ್ತಿದೆ. ರಾಜ್ಯ ಸರಕಾರ ಜಾಹೀರಾತು ಕೊಟ್ಟು ಪ್ರಚಾರ ಪಡೆಯುವ ಬದಲಾಗಿ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷ ಹತಾಶ ಮನೋಭಾವದಲ್ಲಿದೆ. ಇವತ್ತು ಪ್ರತಾಪ್ ಸಿಂಹ ಅವರ ತಮ್ಮನ ವಿಚಾರದಲ್ಲಿ ಇದೊಂದು ರಾಜಕೀಯ ಪ್ರೇರಿತ ಕ್ರಮವೆಂದು ಎಂಥ ಅನಕ್ಷರಸ್ಥರೂ ಹೇಳುತ್ತಾರೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶವನ್ನು ನೀವೆಲ್ಲ ಗಮನಿಸಿದ್ದೀರಿ. ಕಾಂಗ್ರೆಸ್ ಸರಕಾರವು ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಅವರು ವಿಕ್ರಂ ಸಿಂಹ ಅವರ ಬಂಧನ ಕುರಿತ ಪ್ರಶ್ನೆಗೆ ಉತ್ತರಿಸಿದರು. ಪ್ರತಾಪ್ ಸಿಂಹ ಅಥವಾ ಅವರ ಸಹೋದರ ಇದಕ್ಕೆ ಹೆದರುವ ಪ್ರಶ್ನೆ ಇಲ್ಲ. ಅವರು ಇದೆಲ್ಲವನ್ನೂ ಎದುರಿಸುತ್ತಾರೆ ಎಂದು ನುಡಿದರು.

ರೈತಾಪಿ ವರ್ಗದಲ್ಲಿ ಎಲ್ಲ ಸಮಾಜ, ಎಲ್ಲ ವರ್ಗ, ಎಲ್ಲ ಧರ್ಮದವರೂ ಇರುತ್ತಾರೆ. ರೈತರೆಂದರೆ ಕೇವಲ ಹಿಂದೂಗಳು, ಲಿಂಗಾಯತರಲ್ಲ. ಇವತ್ತು ದಲಿತ ರೈತ ಕುಟುಂಬದವರನ್ನು ಭೇಟಿ ಮಾಡಿದ್ದೇವೆ. ರಾಜ್ಯವು ಹೊಸ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ರಾಜ್ಯದ ರೈತರೇ ತಮ್ಮ ಆದ್ಯತೆ ಆಗಿರಲಿ ಎಂದು ಮುಖ್ಯಮಂತ್ರಿಯವರನ್ನು ಆಗ್ರಹಿಸಿದರು.

ಸಂಸದ ಜಿಎಂ.ಸಿದ್ದೇಶ್ವರ್, ಶಾಸಕ ಬಿ.ಪಿ.ಹರೀಶ್, ಮಾಜಿ ಸಚಿವ ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X