ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ.ಗೋವಿಂದರಾಜ್ ಬಿಡುಗಡೆ

ಕೆ.ಗೋವಿಂದರಾಜ್ | PC : X/@Iam_KGovindaraj
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಆದೇಶವನ್ನು ಹೊರಡಿಸಿದ್ದಾರೆ.
ಕೆ.ಗೋವಿಂದರಾಜ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
2023ರ ಜೂನ್ನಲ್ಲಿ ಕೆ. ಗೋವಿಂದರಾಜ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ರಾಜ್ಯ ಸರಕಾರ ನೇಮಕ ಮಾಡಿತ್ತು. ಆದರೆ, ಈಗ ಏಕಾಏಕಿ ಅವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
Next Story





