Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್...

ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ11 Aug 2025 8:09 PM IST
share
ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು, ಆ.11: ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ವಿಪಕ್ಷ ಸದಸ್ಯರು ಒಪ್ಪಿಗೆ ನೀಡಿದರೆ ಶೀಘ್ರದಲ್ಲಿ ಕಾರ್ಯಾರಂಭ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಬಿಪಿಎಲ್ ಕಾರ್ಡ್‍ನಲ್ಲಿದ್ದ ಫಲಾನುಭವಿಗಳನ್ನು ಎಪಿಎಲ್‍ಗೆ ವರ್ಗಾವಣೆ ಮಾಡಲು ಇಲಾಖೆ ಮುಂದಾದಾಗ ದೊಡ್ಡ ವಿವಾದವೇ ಸೃಷ್ಟಿಯಾಯಿತು. ಸದನದ ಸದಸ್ಯರೆಲ್ಲರೂ ಒಪ್ಪಿಗೆಯನ್ನು ಸೂಚಿಸಿದರೆ ಬಿಪಿಎಲ್‍ನಿಂದ ಎಪಿಎಲ್‍ಗೆ ಅನರ್ಹ ಫಲಾನುಭವಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದರು.

ಅನರ್ಹ ಬಿಪಿಎಲ್ ಕಾರ್ಡುದಾರರು ಆಹಾರಧಾನ್ಯಗಳನ್ನು ಪಡೆಯುತ್ತಿರುವ ಪರಿಣಾಮ ಸರಕಾರದ ಬೊಕ್ಕಸಕ್ಕೂ ಹೊರೆಯಾಗುತ್ತದೆ. ಇದನ್ನು ಮಾಡುವಾಗ ಕೆಲವು ಸಮಸ್ಯೆಗಳು ಎದುರಾಗುತ್ತವೆ. ಕೆಲವರು ಅರ್ಹ ಫಲಾನುಭವಿಗಳನ್ನೇ ತೆಗೆದು ಹಾಕುತ್ತಾರೆ ಎಂದು ಅಪಪ್ರಚಾರ ನಡೆಸುತ್ತಾರೆ. ಇದಕ್ಕೆ ಸದಸ್ಯರು ಅವಕಾಶ ಮಾಡಿಕೊಡಬಾರದು. ಸದನದ ಸದಸ್ಯರು ಒಪ್ಪಿಗೆ ಇದ್ದರೆ ಅನರ್ಹರನ್ನು ತೆಗೆದು ಹಾಕಲು ಸರಕಾರ ಸಿದ್ಧವಿದೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ಓರ್ವ ಬಿಪಿಎಲ್ ಫಲಾನುಭವಿ ಎಂದು ಗುರುತಿಸಬೇಕಾದರೆ ಕೇಂದ್ರ ಸರಕಾರ 11 ಹಾಗೂ ರಾಜ್ಯ ಸರಕಾರ 5 ಮಾನದಂಡಗಳನ್ನು ನಿಗದಿಪಡಿಸಿದೆ. ಈ ಮಾನದಂಡವನ್ನು ನಾವು ಪಾಲನೆ ಮಾಡಿದರೆ ಬಿಪಿಎಲ್ ಫಲಾನುಭವಿಗಳ ಸಂಖ್ಯೆ ಶೇ.35ಕ್ಕೆ ಇಳಿಕೆಯಾಗುತ್ತದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು.

ರಾಜ್ಯದಲ್ಲಿ ಪಡಿತರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ಮೇಲೆ ಇಲಾಖೆ ಹಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದೆ. 2023-24ರಲ್ಲಿ 404 ಪ್ರಕರಣಗಳು - 20 ಕೋಟಿ ರೂ. ದಂಡ, 2024-25ರಲ್ಲಿ 505 ಪ್ರಕರಣಗಳು - 10 ಕೋಟಿ ರೂ. ದಂಡ, ಪ್ರಸಕ್ತ ವರ್ಷ 287 ಪ್ರಕರಣಗಳು - 4 ಕೋಟಿ ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಕೆ.ಎಚ್.ಮುನಿಯಪ್ಪ ವಿವರಿಸಿದರು.

ರಾಜ್ಯದಲ್ಲೇ ಹೆಚ್ಚು ಬಿಪಿಎಲ್ ಫಲಾನುಭವಿಗಳು: ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ಅತೀ ಹೆಚ್ಚು ಬಿಪಿಎಲ್ ಫಲಾನುಭವಿಗಳಿದ್ದಾರೆ. ತಮಿಳುನಾಡು ಶೇ.50, ಕೇರಳ ಶೇ.45, ತೆಲಂಗಾಣ ಶೇ.50, ಆಂಧ್ರಪ್ರದೇಶ ಶೇ.50, ನಮಲ್ಲಿ ಮಾತ್ರ ಶೇ.70 ರಿಂದ 75 ರಷ್ಟು ಬಿಪಿಎಲ್ ಫಲಾನುಭವಿಗಳು ಇದ್ದಾರೆ ಎಂದು ಕೆ.ಎಚ್.ಮುನಿಯಪ್ಪ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X