Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿ.ಟಿ.ರವಿ ಪ್ರಕರಣ | ಸಭಾಪತಿ...

ಸಿ.ಟಿ.ರವಿ ಪ್ರಕರಣ | ಸಭಾಪತಿ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ: ಕಿಮ್ಮನೆ ರತ್ನಾಕರ್

ವಾರ್ತಾಭಾರತಿವಾರ್ತಾಭಾರತಿ30 Dec 2024 8:35 PM IST
share
ಸಿ.ಟಿ.ರವಿ ಪ್ರಕರಣ | ಸಭಾಪತಿ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ: ಕಿಮ್ಮನೆ ರತ್ನಾಕರ್

ಬೆಂಗಳೂರು : ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಹಿತಕರ ಮಾತುಗಳನ್ನು ಆಡಿದ ಘಟನೆ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆಯನ್ನು ಯಾರು ನೀರಿಕ್ಷಿಸಿರಲಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕಲಾಪ ಮುಗಿದ ವೇಳೆ ಈ ಘಟನೆ ನಡೆದ ಕಾರಣಕ್ಕೆ ಇದರ ಬಗ್ಗೆ ಏನನ್ನೂ ಹೇಳಲು ಇಷ್ಟಪಡುವುದಿಲ್ಲ. ಮಾಧ್ಯಮಗಳಲ್ಲಿ ನೋಡಿದ ಪ್ರಕಾರ ಸುಳ್ಳು ಪ್ರಕರಣಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ’ ಎಂದು ಸಭಾಪತಿ ಹೇಳಿಕೆ ನೀಡಿದ್ದಾರೆ ಎಂದರು.

ಸಭಾಪತಿ ಹುದ್ದೆ ಸಾಂವಿಧಾನಕ ಹುದ್ದೆ. ಕಲಾಪ ಮುಗಿದ ನಂತರವೂ ಸದನದ ಒಳಗೆ ಏನಾದರೂ ಘಟನೆ ನಡೆದರೆ ಅದರ ವಿರುದ್ದ ಕ್ರಮ ತೆಗೆದುಕೊಳ್ಳುವ ಹಕ್ಕನ್ನು ಸಂವಿಧಾನ ನೀಡಿದೆ. ಈ ಘಟನೆ ಕಲಾಪದ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳುವಂತಿಲ್ಲ ಎಂದು ಕಿಮ್ಮನೆ ರತ್ನಾಕರ್ ಹೇಳಿದರು.

ನಾನು ಡಿ.26 ರಂದು ಸಭಾಪತಿಯ ಕಾರ್ಯದರ್ಶಿಗೆ ಸಿ.ಟಿ.ರವಿ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದೇನೆ. ಸಿ.ಟಿ.ರವಿ ನಿಂದನಾತ್ಮಕ ಪದ ಪ್ರಯೋಗ ಮಾಡಿದಾಗ ಕಲಾಪ ಮುಗಿದಿತ್ತೇ ಹೊರತು ಸದನದಲ್ಲಿ ಎಲ್ಲರೂ ಹಾಜರಿದ್ದರು. ಮಾರ್ಷಲ್ ಗಳು, ಸಿಬ್ಬಂದಿಗಳು, ಎಲ್ಲ ಪಕ್ಷಗಳ ಪ್ರತಿನಿಧಿಗಳು, ಮಾಧ್ಯಮದವರೂ ಈ ಘಟನೆಯನ್ನು ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಹೇಗೆ ಸಭಾಪತಿ ತಮ್ಮ ವ್ಯಾಪ್ತಿಗೆ ಬರಲು ಸಾಧ್ಯವಿಲ್ಲ ಎಂದು ಹೇಳಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಈ ಘಟನೆ ನಡೆಯುವಾಗ ಯಾರೆಲ್ಲ ಇದ್ದರು ಅವರನ್ನು ಕರೆಸಿ ಮಾಧ್ಯಮದವರಿಂದ ವಿಡಿಯೋ ಪಡೆದು ಅದನ್ನು ಎಫ್ ಎಸ್ ಎಲ್ ಗೆ ನೀಡಿ ತನಿಖೆಗೆ ಒಳಪಡಿಸಬಹುದಿತ್ತು. ರಾಜಿ ಸಂಧಾನ ಮಾಡುವ ವಿವೇಚನೆ ಸಭಾಪತಿಗೆ ಬಿಟ್ಟಿದ್ದು. ಸಭಾಪತಿಗೆ ತೀರ್ಮಾನ ಮಾಡಲು ತೊಂದರೆ ಆಗುವುದಾದರೆ ಸರಕಾರದ ನೆರವು ಪಡೆಯಲಿ. ಇದು ವಿಧಾನ ಪರಿಷತ್ತಿನ ವ್ಯಾಪ್ತಿಯಲ್ಲಿ ನಡೆದ ಘಟನೆಯಾದ ಕಾರಣಕ್ಕೆ ತನಿಖೆಗೆ ಆದೇಶಿಸುವ ಅಧಿಕಾರ ಅವರಿಗೆ ಇದೇ ಎನ್ನುವುದನ್ನು ನಾನು ನೆನಪಿಸಲು ಬಯಸುತ್ತೇನೆ ಎಂದು ಕಿಮ್ಮನೆ ರತ್ನಾಕರ್ ಹೇಳೀದರು.

ಘಟನೆ ನಡೆದಿರುವುದು ಸತ್ಯ. ಆದರೆ ಏನು ನಡೆದಿದೆ ಎನ್ನುವುದನ್ನು ಸಭಾಪತಿ ಮಾತ್ರ ತನಿಖೆಗೆ ಆದೇಶಿಸಿ ಸತ್ಯ ಹೊರಗೆ ಬರುವಂತೆ ಮಾಡಬಹುದು. ಏಕೆಂದರೆ 1980 ರಿಂದ ಇಲ್ಲಿಯ ತನಕ ವಿಧಾನ ಪರಿಷತ್ ಅಲ್ಲಿ ಇವರು ಕೆಲಸ ಮಾಡಿದ್ದಾರೆ. ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದಾರೆ. ಇಡೀ ದೇಶದಲ್ಲಿ ವಿಧಾನಪರಿಷತ್ ಅಲ್ಲಿ ಹೆಚ್ಚು ಅನುಭವ ಇರುವ ವ್ಯಕ್ತಿ. ಅನೇಕ ಸಭಾಪತಿಗಳ ಕೈ ಕೆಳಗೆ ಕೆಲಸ ಮಾಡಿದವರು. ಇವರು ಸ್ವತಃ ಸಭಾಪತಿಯಾಗಿ ಹೆಚ್ಚು ಕೆಲಸ ಮಾಡಿದ ಅನುಭವವಿದೆ ಎಂದು ಅವರು ತಿಳಿಸಿದರು.

ಸಿಐಡಿ ತನಿಖೆ ಸೇರಿದಂತೆ ಯಾರಿಗೆ ತನಿಖೆಗೆ ನೀಡಿದರೂ ಅವರು ವಿಧಾನಪರಿಷತ್ತಿಗೆ ಪ್ರವೇಶ ಪಡೆಯಬೇಕು ಎಂದರೆ ಸಭಾಪತಿ ಅನುಮತಿ ಪಡೆಯಬೇಕು. ಅದರ ಬದಲು ಇವರೇ ತನಿಖೆ ನಡೆಸಿದರೆ ಉತ್ತಮವಲ್ಲವೇ? ಈ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ನೀಡಬಹುದು ಅಥವಾ ಇನ್ನೊಂದು ಉಪ ಸಮಿತಿ ರಚನೆ ಮಾಡಿಯೂ ತನಿಖೆಗೆ ನೀಡಬಹುದು ಎಂದು ಕಿಮ್ಮನೆ ರತ್ನಾಕರ್ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X