Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಐಒಸಿಎಲ್, ಎಚ್ಎಂಟಿ ಬಗ್ಗೆ ರಾಜ್ಯ...

ಕೆಐಒಸಿಎಲ್, ಎಚ್ಎಂಟಿ ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ: ಕುಮಾರಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Oct 2024 4:19 PM IST
share
ಕೆಐಒಸಿಎಲ್, ಎಚ್ಎಂಟಿ ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ: ಕುಮಾರಸ್ವಾಮಿ ಆರೋಪ

ಬೆಂಗಳೂರು: ಹಿಂದೂಸ್ತಾನ್ ಮೆಷಿನ್ ಆ್ಯಂಡ್ ಟೂಲ್ಸ್ (ಎಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದೆ. ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಐಒಸಿಎಲ್ ಬಗ್ಗೆ ರಾಜ್ಯ ಸರಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ

ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ ಎಂದರು.

ರಾಜ್ಯ ಸರಕಾರದ ತಪ್ಪಿನಿಂದ 300-400 ಕೆಐಒಸಿಎಲ್ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ

ರಾಜ್ಯ ಸರಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ. ಸಮಸ್ಯೆ ಬಗ್ಗೆ ಸಿಎಂ ಸಭೆ ಕರೆಯಲಿ. ಏನು ಸಮಸ್ಯೆ ಇದೆ ಅಂತಾ ಚರ್ಚೆ ಮಾಡೋಣ ಎಂದರು.

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಒತ್ತಾಸೆಯ ಮೇರೆಗೆ ಕೇವಲ ನಲವತ್ತೆಂಟು ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ನೆರೆ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಯಾರೂ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ

ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ. ಎಂ.ಬಿ.ಪಾಟೀಲ್ ಒಬ್ಬರು ದಿಲ್ಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ನನ್ನೊಂದಿಗೆ ರಾಜ್ಯದ ಬಗ್ಗೆ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.

ದಯಮಾಡಿ ಇವರು ಚಿಲ್ಲರೆ ರಾಜಕಾರಣ ಬಿಡಬೇಕು. ಟೊಯೊಟಾ ಸೇರಿದಂತೆ ಅನೇಕ ಕೈಗಾರಿಕೆಗಳು ರಾಜ್ಯ ಬಿಟ್ಟು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ. ಶಾಸಕ ರಾಜು ಕಾಗೆ ಅಭಿವೃದ್ಧಿ ಅನುದಾನ ಬಗ್ಗೆ ಏನು ಹೇಳಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಅವರೂ ಬರಲಿ, ಸಭೆಯಲ್ಲಿ ಎಲ್ಲಾ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲಾ ದಾಖಲೆ ಸಮೇತ ಚರ್ಚೆ ಮಾಡೋಣ. ಈಶ್ವರ್ ಖಂಡ್ರೆ ಬೋಗಸ್ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X