Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೃಷಿ ಪಂಪ್‍ಸೆಟ್‍ಗಳ ಸಕ್ರಮಕ್ಕೆ ನವೀಕೃತ...

ಕೃಷಿ ಪಂಪ್‍ಸೆಟ್‍ಗಳ ಸಕ್ರಮಕ್ಕೆ ನವೀಕೃತ ಶೀಘ್ರ ಸಂಪರ್ಕ ಯೋಜನೆ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ27 May 2025 7:46 PM IST
share
ಕೃಷಿ ಪಂಪ್‍ಸೆಟ್‍ಗಳ ಸಕ್ರಮಕ್ಕೆ ನವೀಕೃತ ಶೀಘ್ರ ಸಂಪರ್ಕ ಯೋಜನೆ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಅಕ್ರಮ ಕೃಷಿ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್‌ ಫಾರ್ಮರ್ ಒದಗಿಸಿ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘2023ರ ಸೆ.22ರ ಬಳಿಕ ಸ್ಥಾಪಿಸಿರುವ ಅಕ್ರಮ ಕೃಷಿ ಪಂಪ್‍ಸೆಟ್‍ಗಳಿಗೆ ರೈತರು ಸ್ವಂತ ವೆಚ್ಚದಲ್ಲಿ ಲೈನ್ ಸೇರಿದಂತೆ ಮೂಲಸೌಕರ್ಯ ಕಲ್ಪಿಸಿಕೊಂಡರೆ ಎರಡು ಅಥವಾ ಅದಕ್ಕಿಂತ ಹೆಚ್ಚು ಪಂಪ್‍ಸೆಟ್‍ಗಳಿಗೆ ಎಸ್ಕಾಂಗಳ ವತಿಯಿಂದಲೇ ಟ್ರಾನ್ಸ್‌ ಫಾರ್ಮರ್ ಒದಗಿಸಿ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ 2004ರಲ್ಲಿ ಕೃಷಿ ಪಂಪ್‍ಸೆಟ್‍ಗಳ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಬಂದಿತ್ತಾದರೂ 2023ರಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ 4.5ಲಕ್ಷ ಅಕ್ರಮ ಕೃಷಿ ಪಂಪ್‍ಸೆಟ್‍ಗಳು ಇದ್ದವು. ಈ ಹಿನ್ನೆಲೆಯಲ್ಲಿ ಸರಕಾರ 2023ರ ಸೆ.22ಕ್ಕೆ ಮುನ್ನ ಸಂಪರ್ಕ ಪಡೆದಿದ್ದ ಅಕ್ರಮ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸಲು ನಿರ್ಧರಿಸಿ ಈವರೆಗೆ 2.5ಲಕ್ಷ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸಿದೆ. ಉಳಿದವುಗಳನ್ನು ಇನ್ನು ವರ್ಷದೊಳಗೆ ಸಕ್ರಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಆದರೆ, 2023ರ ಸೆ.22ರ ಬಳಿಕ ಸ್ಥಾಪಿಸಲಾದ ಅಕ್ರಮ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಅಕ್ರಮ ಪಂಪ್‍ಸೆಟ್ ಹೊಂದಿರುವ ರೈತರು ಎಸ್ಕಾಂಗಳಿಗೆ ನಿಗದಿತ ಠೇವಣಿ ಪಾವತಿಸಿ ಅವರ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಅದಾದ ಬಳಿಕ 2 ಅಥವಾ ಅದಕ್ಕಿಂತ ಹೆಚ್ಚಿನ ಪಂಪ್‍ಸೆಟ್‍ಗಳಿಗೆ ಅವುಗಳ ಸಾಮರ್ಥ್ಯ ಆಧರಿಸಿ ಎಸ್ಕಾಂಗಳ ವತಿಯಿಂದ ಟ್ರಾನ್ಸ್‌ ಫಾರ್ಮರ್ ಒದಗಿಸಿ ಸಂಪರ್ಕ ಸಕ್ರಮಗೊಳಿಸಲಾಗುವುದು ಎಂದು ಹೇಳಿದರು.

ನವೀಕೃತ ಶೀಘ್ರ ಸಂಪರ್ಕ ಯೋಜನೆಯು ವಿದ್ಯುತ್ ಜಾಲದಿಂದ 500 ಮೀಟರ್ ಒಳಗಿರುವ ಎಲ್ಲ ಕೃಷಿ ಪಂಪ್‍ಸೆಟ್‍ಗಳಿಗೆ ಅನ್ವಯವಾಗುತ್ತದೆ. ವಿದ್ಯುತ್ ಜಾಲದಿಂದ 500 ಮೀ.ಗಿಂತ ದೂರ ಇರುವ ಪಂಪ್‍ಸೆಟ್‍ಗಳಿಗೆ ಸೋಲಾರ್ ಪಂಪ್‍ಸೆಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಬೇಕಾಗುತ್ತದೆ. ಸೋಲಾರ್ ಪಂಪ್‍ಸೆಟ್‍ಗಳಿಗೆ ಕುಸುಮ್- ಬಿ ಯೋಜನೆಯಡಿ ಕೇಂದ್ರದಿಂದ ಶೇ.30, ರಾಜ್ಯ ಸರಕಾರದಿಂದ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಶೇ.20ರಷ್ಟು ಮೊತ್ತವನ್ನು ಮಾತ್ರ ರೈತರು ಪಾವತಿಸಬೇಕು ಎಂದು ತಿಳಿಸಿದರು.

ಸಂಪುಟದಲ್ಲಿ ನಿರ್ಣಯ: ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್ ಸಂಪರ್ಕ ನೀಡಬಾರದು ಎಂಬ ಇಲಾಖೆ ನಿಯಮದಿಂದ ಸಮಸ್ಯೆಗಳಾಗುತ್ತಿರುವ ಬಗ್ಗೆ ಸಭೆಯಲ್ಲಿ ಶಾಸಕರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಲಾಖೆ ಈ ನೀತಿ ಜಾರಿಗೆ ತಂದಿದೆ. ಇದರಿಂದ ಸಮಸ್ಯೆಗಳಾಗುತ್ತಿರುವುದು ಸರಕಾರದ ಗಮನದಲ್ಲಿದ್ದು, ಸಂಪುಟ ಸಭೆಯಲ್ಲೂ ಚರ್ಚಿಸಿ ಇದಕ್ಕೆ ಪರಿಹಾರ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಲೈನ್‍ಮೆನ್ ನೇಮಕ: ರಾಜ್ಯದಲ್ಲಿ 3ಸಾವಿರ ಲೈನ್‍ಮೆನ್‍ಗಳ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ದೈಹಿಕ ತರಬೇತಿ ನಡೆಯುತ್ತಿದೆ. ಜೂನ್ ಅಂತ್ಯದೊಳಗೆ ಎಲ್ಲರಿಗೂ ಸ್ಥಳ ನಿಯುಕ್ತಿ ಮಾಡಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಪರಿಷತ್ ಸದಸ್ಯ ಎಸ್.ರವಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳು ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X