Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ...

‘ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಕಡ್ಡಾಯ’ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ29 May 2025 9:27 PM IST
share
‘ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಕಡ್ಡಾಯ’ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ(ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯಗೊಳಿಸಿರುವುದರಿಂದ ಮನೆ ನಿರ್ಮಾಣ, ಕೈಗಾರಿಕೋದ್ಯಮಕ್ಕೆ ಆಗುತ್ತಿರುವ ಸಮಸ್ಯೆ ಈಗಾಗಲೇ ಸರಕಾರದ ಗಮನದಲ್ಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಆದೇಶದಂತೆ ಸರಕಾರ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿದೆ. ಇದರಿಂದ ಉದ್ಭವವಾಗಿರುವ ಸಮಸ್ಯೆ ನಿವಾರಿಸಲು ಬೈಲಾ ತಿದ್ದುಪಡಿ ಮಾಡಬೇಕಿದೆ. ಅದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ, ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಅವರು ವರದಿ ಸಲ್ಲಿಸಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದು ಅವರು ಹೇಳಿದರು.

ಗೃಹ ಜ್ಯೋತಿ ಡಿ ಲಿಂಕ್ ಸಮಸ್ಯೆ ಇಲ್ಲ: ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್.ಆರ್.ನಂಬರ್ ಗೆ ಡಿ ಲಿಂಕ್ ಮಾಡಿ ಹೊಸ ಆರ್.ಆರ್.ನಂಬರ್ ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿದ ಜಾರ್ಜ್, ಆನ್ ಲೈನ್ ಮೂಲಕವೇ ಡಿ ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ 1.60 ಕೋಟಿ ಕುಟುಂಬಗಳು ಶೂನ್ಯ ಬಿಲ್ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದರ ಸಬ್ಸಿಡಿ ಮೊತ್ತ ಸುಮಾರು 9 ಸಾವಿರ ಕೋಟಿ ರೂ.ಅನ್ನು ಈಗಾಗಲೇ ಸರಕಾರ ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಿದೆ ಎಂದು ಜಾರ್ಜ್ ತಿಳಿಸಿದರು.

ನಮ್ಮ ಸರಕಾರ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಆದ್ಯತೆ ನೀಡುವುದರ ಜತೆಗೆ ಬೇಸಿಗೆಯಲ್ಲಿ ಅನ್ಯ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದು ಗ್ರಾಹಕರಿಗೆ ಪೂರೈಸಿದ್ದು, ವಿದ್ಯುತ್ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ ಎಂದು ಅವರು ಹೇಳಿದರು.

ಪ್ರಸ್ತುತ ರಾಜ್ಯದ ಒಟ್ಟು ಉತ್ಪಾದನೆ ಪೈಕಿ ಶೇ.65ರಷ್ಟು ವಿದ್ಯುತ್ ನವೀಕರಿಸಬಹುದಾದ ಇಂಧನ ಮೂಲಗಳಿಂದ ಬರುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಲಭ್ಯವಿದೆ. ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಾರ್ಜ್ ತಿಳಿಸಿದರು.

ಕೆಂಪೇಗೌಡರ ಬೆಂಗಳೂರಿಗೆ ಧಕ್ಕೆ ಇಲ: ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ. ಈ ಬಗ್ಗೆ ಪ್ರತಿಪಕ್ಷಗಳ ಆರೋಪಗಳಲ್ಲಿ ಹುರುಳಿಲ್ಲ. ಆಡಳಿತದ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ರೂಪಿಸಲಾಗಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದ ಮೇಲೆ ಹೆಚ್ಚುವರಿ ಪಾಲಿಕೆಗಳನ್ನು ರಚಿಸಲಾಗುತ್ತದೆಯಾದರೂ ಅವುಗಳ ಹೆಸರು ಬೆಂಗಳೂರು ದಕ್ಷಿಣ, ಉತ್ತರ, ನಗರ ಎಂದೇ ಇರುತ್ತದೆಯೇ ಹೊರತು ಬದಲಾವಣೆ ಆಗುವುದಿಲ್ಲ. ಒಂದು ಪಾಲಿಕೆಯ ಆದಾಯವನ್ನು ಇನ್ನೊಂದು ಪಾಲಿಕೆಗೆ ವರ್ಗಾವಣೆ ಮಾಡುವುದಿಲ್ಲ. ಆರ್ಥಿಕವಾಗಿ ದುರ್ಬಲವಾದ ಪಾಲಿಕೆಗಳಿಗೆ ಸರಕಾರದಿಂದ ಹೆಚ್ಚುವರಿ ನೆರವು ನೀಡಲಾಗುತ್ತದೆ ಎಂದು ಜಾರ್ಜ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X