ಕೆಎಂಡಿಸಿ ʼಅರಿವು ಸಾಲ ಯೋಜನೆʼ : ಅರ್ಜಿ ಸಲ್ಲಿಕೆ ಅವಧಿ ನ.15ರ ವರೆಗೆ ವಿಸ್ತರಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಿಇಟಿ/ನೀಟ್/ಡಿ-ಸೆಟ್/ಪಿಜಿ-ಸಿಇಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಆಯ್ಕೆಯಾಗಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ದ ಮೂಲಕ ನೀಡಲಾಗುವ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.30ರ ವರೆಗೆ ನೀಡಲಾಗಿದ್ದ ಅವಧಿಯನ್ನು ನ.15ರ ವರೆಗೆ ವಿಸ್ತರಿಸಲಾಗಿದೆ.
ಈ ಯೋಜನೆಯಡಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ವಿದ್ಯಾರ್ಥಿಗಳ ಪರೀಕ್ಷೆಗಳು ಪೂರ್ಣಗೊಳ್ಳದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಆದುದರಿಂದ, ಎಲ್ಲ ಜಿಲ್ಲಾ ವ್ಯವಸ್ಥಾಪಕರು ತಮ್ಮ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಗೆ ಈ ವಿಷಯವನ್ನು ತಿಳಿಸಿ, ನಿಗದಿತ ವಿಸ್ತೃ ತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವಂತೆ ಅಗತ್ಯ ಕ್ರಮ ಕೈಗೊಳ್ಳಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.




