Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೊಡಗು: ಸಚಿವ ಸ್ಥಾನ, ಪ್ರತ್ಯೇಕ ಲೋಕಸಭಾ...

ಕೊಡಗು: ಸಚಿವ ಸ್ಥಾನ, ಪ್ರತ್ಯೇಕ ಲೋಕಸಭಾ ಕ್ಷೇತ್ರ, 3 ವಿಧಾನಸಭಾ ಕ್ಷೇತ್ರಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 July 2023 11:22 PM IST
share
ಕೊಡಗು: ಸಚಿವ ಸ್ಥಾನ, ಪ್ರತ್ಯೇಕ ಲೋಕಸಭಾ ಕ್ಷೇತ್ರ, 3 ವಿಧಾನಸಭಾ ಕ್ಷೇತ್ರಕ್ಕೆ ಒತ್ತಾಯ

ಮಡಿಕೇರಿ, ಜು.15 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು, ಪ್ರತ್ಯೇಕ ಲೋಕಸಭಾ ಕ್ಷೇತ್ರ ರಚಿಸಬೇಕು ಹಾಗೂ ವಿಧಾನಸಭಾ ಕ್ಷೇತ್ರದ ಸಂಖ್ಯೆಯನ್ನು 3ಕ್ಕೆ ಹೆಚ್ಚಿಸಬೇಕು ಎಂದು ವೀರನಾಡು ರಕ್ಷಣಾ ವೇದಿಕೆ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ರಾಜಕೀಯವಾಗಿ ಕೊಡಗಿಗೆ ಅನ್ಯಾಯವಾಗುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ ಎಂದು ಅಭಿಪ್ರಾಯಪಟ್ಟರು. ಕಳೆದ ಸರಕಾರದಲ್ಲೂ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ದೊರೆಯಲಿಲ್ಲ, ಇದೀಗ ಬಹುಮತದ ಸರಕಾರ ಬಂದಿದ್ದರೂ ಸಚಿವ ಸ್ಥಾನವನ್ನು ನೀಡಿಲ್ಲ. ಹೊರ ಜಿಲ್ಲೆಯವರು ಉಸ್ತುವಾರಿ ಸಚಿವರಾಗಿ ಬಂದರೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿರುವುದಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳೆಡೆಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ಆದ್ದರಿಂದ ಜಿಲ್ಲೆಯ ವರಿಗೇ ಸಚಿವ ಸ್ಥಾನ ಮತ್ತು ಉಸ್ತುವಾರಿ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಮೂರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿತ್ತು, ಆದರೆ ಕ್ಷೇತ್ರ ಪುನರ್ ವಿಂಗಡಣೆ ಸಂದರ್ಭ ಎರಡು ಕ್ಷೇತ್ರಗಳಿಗೆ ಸೀಮಿತಗೊಂಡಿತು. ಇದರಿಂದ ರಾಜಕೀಯವಾಗಿ ಮಾತ್ರವಲ್ಲದೆ ಅಭಿವೃದ್ಧಿ ಕಾರ್ಯಗಳಲ್ಲೂ ಜಿಲ್ಲೆ ಕುಂಠಿತಗೊಂಡಿದೆ. ಅಲ್ಲದೆ ಕ್ಷೇತ್ರಗಳು ಕೊಡವ ಮತ್ತು ಗೌಡ ಅಭ್ಯರ್ಥಿಗಳಿಗೆ ಸೀಮಿತವಾಗುತ್ತಿದೆ. ಜಿಲ್ಲೆಯಲ್ಲಿ ಶೇ.50 ರಷ್ಟು ಮತದಾರರು ಇತರ ಜನಾಂಗದವರಾಗಿದ್ದು, ಮೂರು ಕ್ಷೇತ್ರಗಳು ರಚನೆಯಾದರೆ ಇತರರಿಗೆ ಒಂದು ಕ್ಷೇತ್ರವನ್ನು ಸೀಮಿತಗೊಳಿಸಬಹುದಾಗಿದೆ ಎಂದು ಹರೀಶ್ ಜಿ.ಆಚಾರ್ಯ ಅಭಿಪ್ರಾಯಪಟ್ಟರು.

ಪ್ರತ್ಯೇಕ ಲೋಕಸಭಾ ಕ್ಷೇತ್ರ ಹೊಂದುವ ಎಲ್ಲಾ ಅರ್ಹತೆಗಳು ಕೊಡಗು ಜಿಲ್ಲೆಗೆ ಇದ್ದರೂ ಇತರ ಜಿಲ್ಲೆಯೊಂದಿಗೆ ಹಂಚಿಕೆ ಮಾಡಲಾಗುತ್ತಿದೆ. ಈ ಹಿಂದೆ ಮಂಗಳೂರು ಲೋಕಸಭಾ ಕ್ಷೇತ್ರದೊಂದಿಗೆ ಗುರುತಿಸಿಕೊಂಡಿದ್ದ ಕೊಡಗನ್ನು ನಂತರ ಮೈಸೂರು ಕ್ಷೇತ್ರಕ್ಕೆ ಸೇರಿಸಲಾಯಿತು. ಇದು ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಸೂಕ್ತ ಕ್ರಮವಲ್ಲ. ಪ್ರತ್ಯೇಕ ಕ್ಷೇತ್ರ ಹೊಂದಲು ಎಲ್ಲಾ ಅರ್ಹತೆ ಇರುವುದರಿಂದ ಕೊಡಗು ಲೋಕಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಚೌರೀರ ರಮೇಶ್, ಐ.ಸೋಮನಾಥ್, ಪಳಂಗಂಡ ಈಶ್ವರ್ ಹಾಗೂ ರವಿ ಅಪ್ಪಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X