ಕೋಗಿಲು ಪ್ರಕರಣ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ತಂಡ

ಬೆಂಗಳೂರು : ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಸತ್ಯಶೋಧನಾ ತಂಡವು ಇಂದು ವರದಿ ಸಲ್ಲಿಸಿತು.
ಘಟನಾವಳಿಗಳನ್ನು ಪರಿಶೀಲಿಸಿ ವರದಿ ಕೊಡಲು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದ ಸತ್ಯಶೋಧನಾ ತಂಡವನ್ನು ನೇಮಿಸಲಾಗಿತ್ತು. ಈ ತಂಡವು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ವರದಿಯನ್ನು ಸಲ್ಲಿಸಿತು.
ಈ ಸಂದರ್ಭದಲ್ಲಿ ಶಾಸಕ ಎಸ್.ಮುನಿರಾಜು, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಉಪಸ್ಥಿತರಿದ್ದರು.
Next Story





