Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಲಾರ | ಗ್ರಾಮದ ಸಾವಿರಕ್ಕೂ ಅಧಿಕ ಜನರ...

ಕೋಲಾರ | ಗ್ರಾಮದ ಸಾವಿರಕ್ಕೂ ಅಧಿಕ ಜನರ ಮೇಲೆ ಎಫ್‌ಐಆರ್‌: ಏನಿದು ಪ್ರಕರಣ?

ವಾರ್ತಾಭಾರತಿವಾರ್ತಾಭಾರತಿ15 Sept 2023 11:02 PM IST
share
ಕೋಲಾರ |  ಗ್ರಾಮದ ಸಾವಿರಕ್ಕೂ ಅಧಿಕ ಜನರ ಮೇಲೆ ಎಫ್‌ಐಆರ್‌: ಏನಿದು ಪ್ರಕರಣ?

ಕೋಲಾರ: ಪತ್ನಿಯ ಹತ್ಯಗೈದ ಪ್ರಕರಕಣದ ಕೊಲೆ ಆರೋಪಿ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮದ ಸಾವಿರಕ್ಕೂ ಅಧಿಕ ಜನರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಅಲ್ಲದೇ, ಕೊಲೆ ಆರೋಪಿಯ ಹತ್ಯೆಗೆ ಗ್ರಾಮಸ್ಥರು ಯತ್ನ ನಡೆಸಿದ್ದರು ಎಂದೂ ಆರೋಪಿಸಲಾಗಿದೆ.

ಸೆ.12ರಂದು (ಮಂಗಳವಾರ) ಕೊಲೆ ಆರೋಪಿ ನಾಗೇಶ್‌ ಅಡಗಿದ್ದ ಸಣ್ಣ ಹೋಟೆಲ್‌ ಕೊಠಡಿ ಮೇಲೆ ದಾಳಿ ನಡೆಸಿದ್ದ ಗ್ರಾಮಸ್ಥರು, ಪೊಲೀಸರ ಕರ್ತವ್ಯಕ್ಕೂ ಅಡ್ಡಿ ಪಡಿಸಿದ್ದರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ಠಾಣೆ ಪಿಎಸ್‌ಐ ಈಶ್ವರಪ್ಪ ದೂರು ದಾಖಲಿಸಿದ್ದರು. ಆ ನಂತರ ಬಂಧನದ ಭೀತಿಯಿಂದ ಗ್ರಾಮದ ಹಲವರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ:

‌‘ಶ್ರೀನಿವಾಸಪುರ ಪಟ್ಟಣದ ಕುರಿ ವ್ಯಾಪಾರಿ‌, ಗ್ರಾಮದ ನಾಗೇಶ್ ಎಂಬಾತ ಮಚ್ಚಿನಿಂದ ಮೊದಲ ಪತ್ನಿ ರಾಧಾ, ಮಾವ ಮುನಿಯಪ್ಪ, ಪತ್ನಿ ಸಂಬಂಧಿಕರಾದ ವರುಣ್‌ ಹಾಗೂ ಅನುಷಾ ಎಂಬುವರ ಮಚ್ಚಿನಿಂದ ಹಲ್ಲೆ ಮಾಡಿ ಹೋಟೆಲ್‌ ಕೊಠಡಿಯಲ್ಲಿ ಅವಿತುಕೊಂಡಿದ್ದ. ರಾಧಾ ಸ್ಥಳದಲ್ಲೇ ಮೃತಪಟ್ಟಿದ್ದರು. ರೊಚ್ಚಿಗೆದ್ದ ನಂಬಿಹಳ್ಳಿ ಸಾವಿರಕ್ಕೂ ಅಧಿಕ ಗ್ರಾಮಸ್ಥರು ದೊಣ್ಣೆ, ಕಲ್ಲು ಹಿಡಿದು ಆರೋಪಿಯನ್ನು ಹೊಡೆದು ಸಾಯಿಸಲು ಮುಂದಾದರು. ಆಗ ನಾಗೇಶ್‌, ಅಡುಗೆ ಅನಿಲ ಸಿಲಿಂಡರ್‌ ತೋರಿಸಿ ಒಳಕ್ಕೆ ಬಂದರೆ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ. ಆಗ ಗ್ರಾಮಸ್ಥರು ಕಲ್ಲು ತೂರಿದರು. ಅಡುಗೆ ಅನಿಲ ಸಿಲಿಂಡರ್‌ ತಂದು ಸ್ಫೋಟಿಸುವುದಾಗಿ ಹೇಳಿ ಆತಂಕ ಸೃಷ್ಟಿಸಿದರು. ವ್ಯಕ್ತಿಯೊಬ್ಬ ಪೆಟ್ರೋಲ್‌ ಎರಚಿ ಬೆಂಕಿ ಹಾಕಲು ಮುಂದಾದಾಗ ಪೊಲೀಸರು ಆತನನ್ನು ತಡೆದರು’ ಎಂದು ಪಿಎಸ್‌ಐ ಈಶ್ವರಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಂದಿನ ಘಟನೆ ಕುರಿತು ಮಾಹಿತಿ ನೀಡಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ, ‘ಮುಳಬಾಗಿಲು ಡಿವೈಎಸ್ಪಿ ಸೇರಿದಂತೆ ಪೊಲೀಸರು ಸಾರ್ವಜನಿಕರಿಗೆ ತಿಳಿ ಹೇಳಿದರೂ ‌ಕೇಳಲಿಲ್ಲ. ನಾನೂ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಿದೆ. ಮೊದಲ ಬಾರಿ ಎಚ್ಚರಿಕೆ ನೀಡಿದೆವು. ಲಾಠಿ ಪ್ರಹಾರ ಮಾಡಿದರೂ ಸುಮ್ಮನಾಗಲಿಲ್ಲ. ಪರಿಸ್ಥಿತಿ ಹತೋಟಿಗೆ ತರಲು ಟಿಯರ್‌ ಗ್ಯಾಸ್‌ ಸಿಡಿಸಿದೆವು. ಏಳು ಸುತ್ತು ಅಶ್ರುವಾಯು ಸಿಡಿಸಿದರೂ ಕೇಳಲಿಲ್ಲ. ಒಂದು ಸುತ್ತು ರಬ್ಬರ್‌ ಬುಲೆಟ್‌ ಹಾರಿಸಿದೆವು. ಆಗ ವಿಧಿ ಇಲ್ಲದೆ ಐದು ಸುತ್ತು ಗುಂಡನ್ನು ಗಾಳಿಯಲ್ಲಿ ಹಾರಿಸಿದೆವು. ಆಗ ಜನರು ಚದುರಿದರು. ಈ ಸಂಬಂಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಾಗಿದೆ. ಅವಿತುಕೊಂಡಿದ್ದ ಆರೋಪಿ ನಾಗೇಶ್‌ ಪೊಲೀಸರ ಮೇಲೆ ಮಚ್ಚಿನಿಂದ ‌ಹಲ್ಲೆ ಮಾಡಿದ್ದರಿಂದ ಸ್ವಯಂರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದೆವು. ಕುಸಿದ ಬಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದೆವು. ತನಿಖೆ ಮುಂದುವರಿದಿದೆ’ ಎಂದಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X