Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ನಿರ್ವಹಣೆಗೆ ಕರ್ನಾಟಕಕ್ಕೆ 10 ಸಾವಿರ...

ಬರ ನಿರ್ವಹಣೆಗೆ ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್, ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ: ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಒಟ್ಟು ಐದು ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ7 July 2026 8:34 PM IST
share
ಬರ ನಿರ್ವಹಣೆಗೆ ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್, ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ: ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಒಟ್ಟು ಐದು ನಿರ್ಣಯ

ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮಾರೋಪಾದಿಯಲ್ಲಿ ಎದುರಿಸಲು ಕೇಂದ್ರದ ಸಹಾಯ ಹಸ್ತ ಅನಿವಾರ್ಯವಾಗಿದೆ. ಆದುದರಿಂದ ಕೇಂದ್ರ ಸರಕಾರ ಕೂಡಲೇ ಕರ್ನಾಟಕ ಸರಕಾರಕ್ಕೆ 10ಸಾವಿರ ಕೋಟಿ ರೂ.ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಮಂಗಳವಾರ ನಗರದ ಅರಮನೆ ಮೈದಾನದ ರಾಯಲ್ ಸೆನಟ್ ಪ್ಯಾಲೇಸ್ ಹಾಲ್‍ನಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಐದು ಮಹತ್ವದ ನಿರ್ಣಯಗಳನ್ನು ಮಂಡಿಸಲಾಯಿತು.

ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಹಳೇ ಮೈಸೂರಿನ ಭಾಗಗಳಲ್ಲಿ ಬಹುತೇಕ ರೈತರು ಬಿತ್ತನೆ ಮಾಡದೇ ಕಂಗಾಲಾಗಿದ್ದಾರೆ. ಬಹುತೇಕ ಜಲಾಶಯಗಳ ನೀರಿಲ್ಲದೆ ಬತ್ತಿ ಹೋಗಿವೆ. ಕೆಲ ಗ್ರಾಮಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಉದ್ಯೋಗದ ಸಮಸ್ಯೆ ಉಲ್ಬಣಿಸಿ ಜನ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರಕಾರ ಕೂಡಲೇ ಕರ್ನಾಟಕಕ್ಕೆ 10ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಯಿತು.

•ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯ:

ಮೋದಿಯವರ ನೇತೃತ್ವದ ಕೇಂದ್ರ ಸರಕಾರ, ಆರೆಸ್ಸೆಸ್ ಮತ್ತು ವಿಶ್ವ ಹಿಂದೂ ಪರಿಷತ್ ಸೇರಿ 11 ಜನರ ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಅನ್ನು ನೇಮಕ ಮಾಡಿತ್ತು. ಇವರ ಸಾರಥ್ಯದಲ್ಲಿ ಅಯೋಧ್ಯೆಯ ರಾಮಮಂದಿರದ ನಿರ್ಮಾಣಕ್ಕೆ ಹತ್ತಾರು ಸಾವಿರ ಕೋಟಿ ರೂ.ಗಳನ್ನು ಸಾರ್ವಜನಿಕರು ಮತ್ತು ಸರಕಾರಗಳಿಂದ ದೇಣಿಗೆ ಪಡೆಯಲಾಗಿದ್ದು, ಇದಕ್ಕೆ ಸರಿಯಾದ ಲೆಕ್ಕಪತ್ರಗಳನ್ನು ನಿರ್ವಹಿಸಿಲ್ಲ. ಈ ಟ್ರಸ್ಟ್‌ ಗೆ ಹರಿದು ಬಂದ ಸಾವಿರಾರು ಕೋಟಿ ಹಣ, ಚಿನ್ನ, ಬೆಳ್ಳಿ, ವಜ್ರ ಮುಂತಾದವುಗಳನ್ನು ವ್ಯವಸ್ಥಿತವಾಗಿ ಕೆಲವು ಟ್ರಸ್ಟಿಗಳು ಮತ್ತು ನೌಕರರು ಲೂಟಿ ಮಾಡುತ್ತಾ ಬಂದಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಶಿಕ್ಷಿಸಲು ಎಸ್‍ಐಟಿ ನೇಮಕ ಮಾಡಬೇಕು. ಜೊತೆಗೆ, ಸಿಬಿಐ ತನಿಖೆಗೆ ಒಳಪಡಿಸಬೇಕು. ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಸಭೆಯಲ್ಲಿ ನಿರ್ಣಯ ಮಂಡಿಸಲಾಯಿತು.

ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದು, ಅವರ ಪಕ್ಷ ನಿಷ್ಠೆ, ಸಂಸದೀಯ ಪಟುತ್ವ, ಅನುಭವ ಹಾಗೂ ಅವರು ಮಾಡಿದ ಹೋರಾಟ ಮುಂತಾದ ವಿಚಾರಗಳನ್ನು ಕಾಂಗ್ರೆಸ್‍ನ ನಾಯಕತ್ವ ಮತ್ತೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಈ ಸ್ಥಾನಗಳನ್ನು ಅಲಂಕರಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ಈ ಸ್ಥಾನವನ್ನು ಅಲಂಕರಿಸಲು ಅವಕಾಶ ನೀಡಿದ ಸೋನಿಯಾ ಗಾಂಧಿ ಅವರಿಗೆ ಅಭಿನಂದಿಸುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಲಾಯಿತು.

ಸಿಡಬ್ಲ್ಯೂಸಿ ಸದಸ್ಯರನ್ನಾಗಿ ನೇಮಕ ಆಗಿರುವ ಸಿದ್ದರಾಮಯ್ಯ ಅವರಿಗೆ ಅಭಿನಂದಿಸುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಲಾಯಿತು. ಜೊತೆಗೆ, ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ.ಶಿವಕುಮಾರ್‍ರವರನ್ನು ಪಕ್ಷದ ರಾಷ್ಟ್ರೀಯ ನಾಯಕತ್ವ ಗುರ್ತಿಸಿ ಅನುಕ್ರಮವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯನ್ನಾಗಿ ರಾಷ್ಟ್ರೀಯ ಕಾಂಗ್ರೆಸ್‍ನ ನಾಯಕತ್ವ ನೇಮಕ ಮಾಡಿರುವುದು ಸಮಯೋಚಿತವಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್‌ ನಾಯಕರಿಗೆ ಅಭಿನಂದಿಸುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಲಾಯಿತು.

ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ವೀರಪ್ಪ ಮೋಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ವಸಂತ ಕುಮಾರ್, ಮಂಜುನಾಥ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಗೋಪಿನಾಥ್ ಪಳನಿಯಪ್ಪನ್, ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಕೃಷ್ಣಭೈರೇಗೌಡ, ಸತೀಶ್ ಜಾರಕಿಹೊಳಿ, ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಮಾಜಿ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಶಾಸಕರುಗಳು ಹಾಗೂ ಪಕ್ಷದ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪರಾಭವಗೊಂಡಿರುವ 84 ಕ್ಷೇತ್ರಗಳಲ್ಲಿ ಸಭೆ: ನಮ್ಮ ಸರಕಾರದಲ್ಲೀಗ 140 ಜನ ಶಾಸಕರಿದ್ದಾರೆ. ಅವರ ಕ್ಷೇತ್ರದಲ್ಲಿ ಅವರೇ ಸಶಕ್ತರಿದ್ದಾರೆ. ಉಳಿದ ಪರಾಭವಗೊಂಡ 84 ಕ್ಷೇತ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುವುದು. ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯ ಸಾಧಿಸಲು ರಾಜಕೀಯ ಸಮಿತಿ ಹಾಗೂ ಅನುಷ್ಠಾನ ಸಮಿತಿ ರಚನೆ ಮಾಡಲಾಗುವುದು. ಮುಂದಿನ ಮೂರು ಅಥವಾ ಆರು ತಿಂಗಳಲ್ಲಿ ಮತ್ತೊಮ್ಮೆ ಸರ್ವಸದಸ್ಯರ ಸಭೆ ನಡೆಸಲಾಗುವುದು. ಆಗಲೂ ಸದಸ್ಯರು ತಮ್ಮ ಸಲಹೆಗಳನ್ನು ನೀಡಬಹುದು ಎಂದು ಬಿ.ಕೆ.ಹರಿಪ್ರಸಾದ್ ತಿಳಿಸಿದರು.

‘ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. 22 ಜನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೂ ಸಹ ರಾಜಿನಾಮೆ ನೀಡಬೇಕು ಎಂದು ಸಭೆಯಲ್ಲಿ ಠಾರಾವು ಹೊರಡಿಸಲಾಗಿದೆ. ಜೊತೆಗೆ ಇವರನ್ನು ವಜಾ ಮಾಡಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ನೀಡಲಾಗುವುದು

-ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ.

Tags

KPCC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X