ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ವಯೋಮಿತಿ ಸಡಿಲಿಕೆ : ಕೆಪಿಎಸ್‍ಸಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನಿಸಿರುವ 2026-27ನೇ ಸಾಲಿನ ಒಟ್ಟು 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಅಳವಡಿಸಲಾಗಿದೆ.
ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದ ಹುದ್ದೆಗಳ 297 ಉಳಿಕೆ ಮೂಲ ವೃಂದ ಹಾಗೂ 22 ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಜು.31ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಟ ವಯೋಮಿತಿ 21 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ವಯೋಮಿತಿ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ ಎಂದು ಕೆಪಿಎಸ್‍ಸಿ ಪ್ರಕಟನೆಯಲ್ಲಿ ತಿಳಿಸಿದೆ.
Next Story




