Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ...

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Sept 2026 3:25 PM IST
share
KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು.

"ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ" ಎಂದರು.

ಕೆಪಿಎಸ್‌ ಸಿ ಹಗರಣ; ತನಿಖಾಧಿಕಾರಿಗಳ ನೇಮಕದ‌‌ ಸ್ವಾತಂತ್ರ್ಯ ನಮಗೆ ಕೊಡಬೇಕಿತ್ತು

"ಹೈಕೋರ್ಟ್ ಎಸ್ ಐಟಿ ರಚನೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಈಡಿ ಕೂಡ ತನಿಖೆ ಮಾಡುತ್ತಿದೆ. ಆದರೆ, ನಮ್ಮ ಪೊಲೀಸ್ ಇಲಾಖೆಯೂ ತನಿಖೆಯನ್ನು ಬಹಳ ಚೆನ್ನಾಗಿ ನಡೆಸುತ್ತಿದೆ. ನ್ಯಾಯಾಲಯ ಅಗತ್ಯವಿದ್ದರೆ ನಮ್ಮ ಪೊಲೀಸ್ ಇಲಾಖೆಯ ತನಿಖೆಯ ವೈಖರಿಯ ಉಸ್ತುವಾರಿ ನೋಡಬಹುದಿತ್ತು. ನ್ಯಾಯಾಲಯ ಎಸ್ ಐಟಿ ತನಿಖೆಗೆ ನಿರ್ದೇಶಿಸಿರುವುದು ಸರಿ. ಆದರೆ, ತನಿಖಾಧಿಕಾರಿಗಳ ನೇಮಕದ ಸ್ವಾತಂತ್ರ್ಯವನ್ನು ರಾಜ್ಯಸರ್ಕಾರಕ್ಕೆ ಕೊಡಬೇಕಿತ್ತು. ಈ ಬಗ್ಗೆ ದೆಹಲಿ, ಬೇರೆ ಬೇರೆ ರಾಜ್ಯಗಳಿಂದ ನಮಗೆ ಕರೆ ಬಂದಿತ್ತು. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇನೆ" ಎಂದು ಹೇಳಿದರು.

"ನಮಗೆ ಮಕ್ಕಳ ಭವಿಷ್ಯ ಮುಖ್ಯ. ಇದೇ ಕಾರಣಕ್ಕೆ ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ ಕೆಪಿಎಸ್ ಸಿಯಲ್ಲಿದ್ದ ಸದಸ್ಯರ ಸಂಖ್ಯೆಯನ್ನು ಕಡಿತಗೊಳಿಸಿದ್ದರು. ನಾವು ನಂಬಿಕೆ ಇಟ್ಟು, ಪಾರದರ್ಶಕವಾಗಿ ಆಯ್ಕೆ ಮಾಡಿ ಅಧಿಕಾರಿಗಳನ್ನು ಕಳುಹಿಸಿದರೆ ಅವರೂ ಹೀಗೆ ಮಾಡುತ್ತಾರೆ" ಎಂದರು.

"ನಾನು ಇಂಧನ ಸಚಿವನಾಗಿದ್ದಾಗ 22 ಸಾವಿರ ಮಂದಿ ಲೈನ್ ಮ್ಯಾನ್, ಎಂಜಿನಿಯರ್ ಗಳ ಹುದ್ದೆ ತುಂಬಿದ್ದೇನೆ. ಬಹಳ ಜಾಗೃತನಾಗಿ ಈ ಕೆಲಸ ಮಾಡಿದ್ದೇನೆ. ಅದಕ್ಕೂ ಮೊದಲು ಖಾಲಿ ಪೇಪರ್ ನಲ್ಲಿ ಬರೆಸುವ ಭ್ರಷ್ಟ ಸಂಪ್ರದಾಯ ಇತ್ತು. ಆದರೆ ನಾನು ಅದಕ್ಕೆಲ್ಲಾ ಅವಕಾಶ ಕೊಡಲಿಲ್ಲ" ಎಂದು ಹೇಳಿದರು.

ಎಚ್ ಕೆ ಪಾಟೀಲರು ಗದಗವನ್ನು ಬರದ ಜಿಲ್ಲೆ ಎಂದು ಘೋಷಣೆ ಮಾಡದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, "ಗದಗ ಜಿಲ್ಲೆಯ ಪ್ರವಾಸ ಮಾಡಿದ್ದೇನೆ. ನನ್ನ ಜೊತೆ ಪಾಟೀಲರು ಇದ್ದರು. ಅವರು ಹೇಳಿದ್ದು ಸತ್ಯ. ಮಲೆನಾಡಿನಲ್ಲೇ ಬರ ಬಂದಿದೆ ಎಂದರೆ, ಗದಗದಲ್ಲಿ ಬರ ಇರುವುದಿಲ್ಲವೇ, ಜಿಲ್ಲೆಯ ಸಮಸ್ಯೆಯ ಅರಿವು ನನಗಿದೆ. ಈಗಾಗಲೇ 124 ತಾಲೂಕುಗಳು ಬರ ಘೋಷಣೆಯಾಗಿದೆ. 200 ತಾಲೂಕು ಘೋಷಣೆಯಾಗುವ ಸಾಧ್ಯ ಇದೆ. ಈ ಬಗ್ಗೆ ಅಗತ್ಯ ವರದಿಗಳು ಬರುತ್ತಿವೆ" ಎಂದರು.

"ವಿರೋಧ ಪಕ್ಷಗಳು 10ದಿನ ಅಧಿವೇಶನದ ಸಮಯ ವ್ಯರ್ಥ ಮಾಡಿದರು. ಅವರಿಗೆ ಸಮಯದ ಬೆಲೆ ತಿಳಿದಿಲ್ಲ. ರಾಜಕಾರಣ ಮಾಡುವುದು ಮಾತ್ರ ಅವರಿಗೆ ಗೊತ್ತು. ನಾನು ಕ್ಯಾಬಿನೆಟ್ ಸಭೆ ಕರೆದು ತೀರ್ಮಾನ ಮಾಡಬಹುದಿತ್ತು. ಆದರೆ ಹಾಗೆ ಮಾಡಲಿಲ್ಲ. ನಾಡಿನ ಜನರ ಸಮಸ್ಯೆ ಏನು ಅಂತ ತಿಳಿಯಬೇಕಿತ್ತು. ಸರ್ಕಾರ ಜನರ ದನಿಯಾಗಬೇಕು. ಜನರ ಮಾತಿಗೆ, ಅವರ ಬಾವನೆ ಬೆಲೆ ಕೊಡಬೇಕು ಅಂತ ವಿಶೇಷ ಅಧಿವೇಶನ ಆಯೋಜಿಸಿ ಚರ್ಚೆಗೆ ಕರೆದಿದ್ದೇನೆ" ಎಂದರು.

"ನಾನು ರೈತರು, ಜನರ ಜೊತೆ ಮಾತನಾಡಿದ್ದೇನೆ. ಪ್ರವಾಸ ಮಾಡಿದ್ದೇನೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೇನೆ. ಆಗ ಸಮಯ ವ್ಯರ್ಥ ಮಾಡಿ ಈಗ ಹೆಚ್ಚಿಗೆ ಸಮಯ ಬೇಕು ಅಂದರೆ ಹೇಗೆ, ವಿರೋಧ ಪಕ್ಷಗಳಿಗೆ ರಾಜಕೀಯ ಮುಖ್ಯ. ನಮಗೆ ಅಭಿವೃದ್ಧಿ ಮುಖ್ಯ, ರೈತರ ಸಮಸ್ಯೆ ಮುಖ್ಯ. ಜನರ ಹಸಿವು ನೀಗಿಸುವುದು ಮುಖ್ಯ" ಎಂದು ಹೇಳಿದರು.

ಸಾಲ ಜಾಸ್ತಿಯಾಗಿರುವುದರಿಂದ ಹೊಸ ಯೋಜನೆ ಘೋಷಣೆ ಮಾಡಲಿಕ್ಕೆ ಆಗುತ್ತಿಲ್ಲ. ಆರ್ಥಿಕ ಇಲಾಖೆ ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದೆ ಎಂಬ ಪ್ರಶ್ನೆಗೆ,‌ "ಸರ್ಕಾರದ ಹಿತಕ್ಕಾಗಿ ಸಲಹೆ ನೀಡಿದೆ. ಹಣಕಾಸು ಸಚಿವನಾಗಿ ನನಗೆ ಯಾವ ಯೋಜನೆಯನ್ನು ನಿಲ್ಲಿಸಬೇಕು, ಯಾವ ಯೋಜನೆ ಸೇರಿಸಬೇಕು ಎನ್ನುವುದು ತಿಳಿದಿದೆ. ಎಲ್ಲಾ ಬೆಲೆಗಳು ಗಗನಕ್ಕೆ ಏರಿಕೆಯಾಗಿವೆ, ಜನರ ಆದಾಯ ಕುಸಿದು ಹೋಗಿದೆ. ಹಾಗಾಗಿ 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ರೈತರು, ಜನರ ಬದುಕಿಗೆ ನೆರವಾಗುತ್ತಿದ್ದೇವೆ. ಈ ಮಧ್ಯೆ ಕರ್ನಾಟಕ ಅಭಿವೃದ್ಧಿಯಲ್ಲಿ ಮುಂದಿದೆ" ಎಂದು ಹೇಳಿದರು.

"ನಾವು ಅಧಿಕಾರದಲ್ಲಿ ಇದ್ದೇವೆ. ಹೀಗಾಗಿ ಏನು ಮಾಡಬೇಕು ಎನ್ನುವ ಅರಿವು ನಮಗಿದೆ. ಕೇಂದ್ರ ಸರ್ಕಾರ ತನ್ನದೇ ಆದ ಯೋಚನೆಗಳನ್ನು ಮಾಡುತ್ತಿದೆ. ಕೇವಲ ಮಾತನಾಡುವುದಲ್ಲ. ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಕೊಡಬೇಕಾದ ಅನುದಾನವನ್ನು ಮೊದಲಿ ನೀಡಲಿ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ನಿರ್ಮಲಾಸೀತಾರಾಮನ್ ಹಾಗೂ ಬಸವರಾಜ ಬೊಮಾಮಾಯಿ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆ ಮಾಡಿದರು. ಮೊದಲು ಅದನ್ನು ಕೊಡಿ" ಎಂದರು.

ಸೌಜನ್ಯ ಪ್ರಕರಣ ಮರುತನಿಖೆ ಬಗ್ಗೆ ಕೇಳಿದಾಗ, "ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯುತ್ತೇನೆ. ತನಿಖೆಗೆ ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ" ಎಂದರು.

Tags

KPSCCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X