Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. KPSC ನೇಮಕಾತಿ ಹಗರಣ; ಬಂಧಿತ ಬಸವರಾಜ...

KPSC ನೇಮಕಾತಿ ಹಗರಣ; ಬಂಧಿತ ಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ4 Sept 2026 3:44 PM IST
share
KPSC ನೇಮಕಾತಿ ಹಗರಣ; ಬಂಧಿತ ಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ : ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು : ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಭಾಲ್ಕಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತನಾಗಿದ್ದು, ತಮ್ಮ ವಿರುದ್ಧವೇ ಸ್ಪರ್ಧೆಗೆ ತಯಾರಿ ನಡೆಸಿದ್ದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ತಿಂಗಳ ಹಿಂದೆ ನನ್ನ ಕಚೇರಿಗೆ ಬಂದಿದ್ದ ಕನ್ನಾಳೆ, ಬಿಜೆಪಿ ರಾಜ್ಯ ನಾಯಕರ ಶಿಫಾರಸಿನಿಂದ ರಾಜ್ಯಪಾಲರು ತನ್ನನ್ನು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನನ್ನಾಗಿ ನಾಮಕರಣ ಮಾಡಿದ್ದಾರೆ. ಆಶೀರ್ವಾದ ಮಾಡಿ ಎಂದು ಹೇಳಿ ಸಿಹಿ ತಿನಿಸಲು ಬಂದ, ನಾನು ಸಿಹಿ ತಿನ್ನುವುದಿಲ್ಲ, ನೀನೆ ತಿನ್ನಪ್ಪ ಎಂದು ಹೇಳಿ ಸಿಹಿ ತಿನ್ನಿಸಿದ್ದೆ ಎಂದು ವೈರಲ್ ಫೋಟೋ ಬಗ್ಗೆ ಸ್ಪಷ್ಟೀಕರಣ ನೀಡಿದರು.

ಯಾವ ಬಿಜೆಪಿ ನಾಯಕರು ಇವರಿಗೆ ಶಿಫಾರಸು ಮಾಡಿದ್ದಾರೆ. ರಾಜ್ಯಪಾಲರು ಯಾವ ಮಾನದಂಡದಲ್ಲಿ ಕನ್ನಾಳೆಯನ್ನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನಾಗಿ ಮಾಡಿದರು ಎಂಬ ಬಗ್ಗೆಯೂ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ ಎಂದರು.

ಭಾಲ್ಕಿಯಿಂದ ನನ್ನ ವಿರುದ್ಧವೇ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸುವುದಾಗಿ ನನಗೆ ಕನ್ನಾಳೆ ಹೇಳಿದ್ದು, ನಾನು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಇದೆ. ಪ್ರಯತ್ನ ಮಾಡು ಎಂದು ಹೇಳಿದ್ದೆ ಎಂದು ತಿಳಿಸಿದರು.

ನನ್ನ ಮತ ಕ್ಷೇತ್ರದ ಒಬ್ಬ ಯುವಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನಾಗಿದ್ದೇನೆ. ಆಶೀರ್ವಾದ ಮಾಡಿ ಎಂದು ಬಂದಾಗ ಶುಭಕೋರುವುದು ಸಹಜ. ನಿತ್ಯ ನೂರಾರು ಜನ ಬರುತ್ತಾರೆ. ಫೋಟೋ ತೆಗೆಸಿಕೊಳ್ಳುತ್ತಾರೆ. ಇಂತಹ ಚಿತ್ರವನ್ನೇ ಹಿಡಿದುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಈ ರೀತಿ ವಂಚನೆ ಮಾಡೋರು ಎಲ್ಲ ಪಕ್ಷದ ನಾಯಕರ ಜೊತೇನೂ ಫೋಟೋ ತೆಗೆಸಿಕೊಳ್ಳುತ್ತಾರೆ. ಕನ್ನಾಳೆ, ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ಜೊತೆ ವಿದೇಶದಲ್ಲಿ ಫೋಟೋ ತೆಗೆಸಿಕೊಂಡಿದ್ದಾನೆ. ಆತ ನಡೆಸುತ್ತಿದ್ದ ಟ್ರಾವೆಲ್ಸ್ ಬಸ್ ಅನ್ನು ಜೆಡಿಎಸ್ ಶಾಸಕರೂ ಉದ್ಘಾಟನೆ ಮಾಡಿದ್ದಾರೆ. ಬಿಜೆಪಿಯ ಚಿಹ್ನೆ ಇರುವ ಶಲ್ಯ ಹೊದ್ದು, ಬಿಜೆಪಿ ನಾಯಕರ ಜೊತೆ ಕನ್ನಾಳೆ ಕುಳಿತಿರುವ, ಬಿಜೆಪಿಯ ಹಲವು ನಾಯಕರು ಕನ್ನಾಳಗೆ ಸಿಹಿ ತಿನ್ನಿಸುತ್ತಿರುವ ಚಿತ್ರಗಳೂ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿವೆ. ನನ್ನ ಫೋಟೋ ಒಂದು ಹಿಡಿದುಕೊಂಡು ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕೂಟದವರು ತಾವು ಮಾಡಿರುವ ಪಾಪವನ್ನು ಕಾಂಗ್ರೆಸ್ ಹೆಗಲಿಗೆ ಕಟ್ಟುವ ಕಾರ್ಯ ಮಾಡುತ್ತಿದ್ದಾರೆ. ಕೋತಿ ಮೊಸರನ್ನ ತಿಂದು ಮೇಕೆಯ ಬಾಯಿಗೆ ಒರೆಸಿತು ಎನ್ನುವ ಗಾದೆಯಂತೆ ವರ್ತಿಸುತ್ತಿದ್ದಾರೆ ಎಂದು ಈಶ್ವರ್‌ ಖಂಡ್ರೆ ಕಿಡಿ ಕಾರಿದರು.

ನಮ್ಮ ಸರ್ಕಾರ ಕೆ.ಪಿ.ಎಸ್.ಸಿ.ಯ ಎಲ್ಲ ಹಗರಣದ ಬಗ್ಗೆ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುತ್ತದೆ. ಇಡೀ ಪ್ರಕರಣದ ಬಗ್ಗೆ ಹಾಗೂ ಪ್ರಕರಣದಲ್ಲಿ ಶಾಮೀಲಾಗಿರುವವರ ಬಗ್ಗೆ ಸಮಗ್ರ ಹಾಗೂ ಪಾರದರ್ಶಕವಾಗಿ ತನಿಖೆ ಆಗಲಿದೆ. ಈ ಹಗರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಯಾಮಗಳ ಬಗ್ಗೆ ತನಿಖೆ ಮಾಡಿಸುತ್ತಿದೆ. ಹಾಲು ಯಾವುದು, ನೀರು ಯಾವುದು ಎಂಬುದು ಬಹಿರಂಗ ಆಗುತ್ತದೆ. ಯಾರ ಚರಿತ್ರೆ ಏನು ಎಂಬುದು ಜನರಿಗೂ ತಿಳಿಯತ್ತೆ ಎಂದು ಹೇಳಿದರು.

Tags

KPSC Recruitment ScamEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X